AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ ಸಾಲ ಜಟಾಪಟಿ: ಲೆಕ್ಕಪತ್ರಕ್ಕಾಗಿ ಹೈಕೋರ್ಟ್​ ಮೊರೆ ಹೋದ ವಿಜಯ್​ ಮಲ್ಯ

ಸಂಪೂರ್ಣ ಸಾಲ ತೀರಿದ್ದರೂ ಬ್ಯಾಂಕ್​ಗಳು ಪ್ರಕ್ರಿಯೆ ಮುಂದುವರಿಸಿವೆ. ಹೀಗಾಗಿ ಸಾಲ ವಸೂಲಿಯಾದ ಲೆಕ್ಕಪತ್ರವನ್ನು ನೀಡಬೇಕು ಎಂದು ಆಗ್ರಹಿಸಿ ವಿಜಯ್​ ಮಲ್ಯ ಕರ್ನಾಟಕ ಹೈಕೋರ್ಟ್​ ಮೊರೆ ಹೋಗಿದ್ದಾರೆ. ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ, ಬ್ಯಾಂಕ್​ಗಳ ಪರ ವಕೀಲರಿಗೆ ಮಹತ್ವದ ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿದೆ.

ಬ್ಯಾಂಕ್​ ಸಾಲ ಜಟಾಪಟಿ: ಲೆಕ್ಕಪತ್ರಕ್ಕಾಗಿ ಹೈಕೋರ್ಟ್​ ಮೊರೆ ಹೋದ ವಿಜಯ್​ ಮಲ್ಯ
ಹೈಕೋರ್ಟ್​ಗೆ ವಿಜಯ್​ ಮಲ್ಯ ಅರ್ಜಿ
ರಮೇಶ್​ ಎಮ್​.
| Edited By: |

Updated on: Nov 04, 2025 | 5:46 PM

Share

ಬೆಂಗಳೂರು, ನವೆಂಬರ್​ 04: ಸಂಪೂರ್ಣ ಸಾಲ ತೀರಿದ್ದರೂ ಈಗಲೂ ಪ್ರಕ್ರಿಯೆ ಮುಂದುವರಿಸಲಾಗ್ತಿದೆ ಎಂದು ಆರೋಪಿಸಿ ಲೆಕ್ಕಪತ್ರ ಕೋರಿ ವಿಜಯ್​ ಮಲ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನಯ ಹೈಕೋರ್ಟ್ ಏಕಸದಸ್ಯ ಪೀಠ ನಡೆಸಿದೆ. ರಿಟ್ ಅರ್ಜಿಯಲ್ಲಿ ಬ್ಯಾಂಕ್​ಗಳಿಂದ ಲೆಕ್ಕಪತ್ರ ಹೇಗೆ ಕೇಳುತ್ತೀರೆಂದು ವಿಜಯ್ ಮಲ್ಯ ಪರ ವಕೀಲ ಸಜನ್ ಪೂವಯ್ಯಗೆ ಕೋರ್ಟ್​ ಪ್ರಶ್ನೆ ಮಾಡಿದ್ದು, ಆಕ್ಷೇಪಣೆ ಸಲ್ಲಿಸುವಂತೆ ಬ್ಯಾಂಕ್​ಗಳ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ನವೆಂಬರ್​ 12ಕ್ಕೆ ಮುಂದೂಡಿದೆ.

ವಿಜಯ್​ ಮಲ್ಯ ಪರ ವಕೀಲರ ವಾದವೇನು?

ವಿಜಯ್​ ಮಲ್ಯ ಪರ ವಾದಿಸಿದ ಹಿರಿಯ ವಕೀಲ ಸಜನ್ ಪೂವಯ್ಯ, ಸಾಲ ವಸೂಲಿ ಪ್ರಾಧಿಕಾರ ಹೈಕೋರ್ಟ್ ಅಧೀನದಲ್ಲಿ ಬರುತ್ತದೆ. ಬ್ಯಾಂಕ್​ನವರು ಒಂದು ಹೇಳುತ್ತಾರೆ, ಅಫಿಷಿಯಲ್ ಲಿಕ್ವಿಡೇಟರ್ ಮತ್ತೊಂದು ಹೇಳುತ್ತಾರೆ. ಒಂದು ಕಾಲದಲ್ಲಿ UBHL ವಿಶ್ವದಲ್ಲಿ ಪ್ರಸಿದ್ಧ ಕಂಪನಿಯಾಗಿದ್ದು, ಡಾ.ವಿಜಯ್ ಮಲ್ಯ ಇದರ ನಿರ್ದೇಶಕರಾಗಿದ್ದರು. ಅಲ್ಲದೆ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸುವುದು ಸಾಂವಿಧಾನಿಕ ಹಕ್ಕೆಂದು ಹೇಳಿದ್ದಾರೆ. ಈ ವೇಳೆ ಪ್ರಶ್ನೆ ಮಧ್ಯಪ್ರವೇಶ ಮಾಡಿದ ಪೀಠ, ‘ಸುಪ್ರೀಂ’ನ ನ್ಯಾಯಾಂಗ ನಿಂದನೆ ಕೇಸ್​ನಲ್ಲಿ‌ ಮಲ್ಯ ಹಾಜರಾಗಿಲ್ಲ. ದೇಶದ ವಿವಿಧೆಡೆ ನಡೆದಿರುವ ಕೋರ್ಟ್ ವಿಚಾರಣೆಗೆ ಬಂದಿಲ್ಲ. ಹೀಗಿರುವಾಗ ರಿಟ್ ಸಲ್ಲಿಸುವ ಹಕ್ಕನ್ನು ಹೇಗೆ ಮಂಡಿಸುತ್ತೀರಿ ಎಂದು ಪ್ರಶ್ನಿಸಿದೆ. ವಿಜಯ್ ಮಲ್ಯ ಲಂಡನ್ ಕೋರ್ಟ್ನ ಕಾನೂನು ಪ್ರಕ್ರಿಯೆಗೆ ಒಳಪಟ್ಟಿದ್ದಾರೆ ಎಂದು ಈ ವೇಳೆ ಮಲ್ಯ ಪರ ವಕೀಲರು ವಾದಿಸಿದ್ದಾರೆ.

ಇದನ್ನೂ ಓದಿ: ವಿಜಯ್ ಮಲ್ಯ ಬೇರೆ ಬೇರೆ ದೇಶಗಳಲ್ಲಿ ಹೊಂದಿರುವ ಆಸ್ತಿಗಳೇನು? ಅವುಗಳ ಮೌಲ್ಯವೆಷ್ಟು?

ಬ್ಯಾಂಕ್​ಗಳ ಪರ ವಕೀಲರು ಹೇಳೋದೇನು?

ಇತ್ತ ಬ್ಯಾಂಕ್​ಗಳ ಪರ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ ವಾದ ಮಂಡಿಸಿದ್ದು, ಮಲ್ಯ ದೇಶ ತೊರೆದು ದೇಶಭ್ರಷ್ಟರಾಗಿದ್ದಾರೆ. ಅವರು ಮುಗ್ದರಾಗಿದ್ದರೆ ಭಾರತಕ್ಕೆ ಮರಳಿ ನ್ಯಾಯಾಂಗದ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ತಮಗೆ ಬೇಕಾದಾಗ ಮಾತ್ರ ಕೋರ್ಟ್ ಮುಂದೆ ಬರುತ್ತಾರೆಂದು ಆರೋಪಿಸಿದ್ದಾರೆ. ವಾದ ಪ್ರತಿವಾದ ಆಲಿಸಿದ ಕೋರ್ಟ್​ ವಿಚಾರಣೆಯನ್ನ ನವೆಂಬರ್​ 12ಕ್ಕೆ ಮುಂದೂಡಿದೆ.

ವಿಜಯ್​ ಮಲ್ಯ ಆರೋಪವೇನು?

ತಾನು ಪಾವತಿಸಬೇಕಿದ್ದ 6,200 ಕೋಟಿ ಸಾಲಕ್ಕೆ 14,000 ಕೋಟಿ ವಸೂಲಿ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಹಣಕಾಸು ಸಚಿವರೇ ಲೋಕಸಭೆಗೆ ತಿಳಿಸಿದ್ದು, 10,200 ಕೋಟಿ ವಸೂಲಾಗಿದೆ ಎಂದಿದ್ದಾರೆ. ಸಂಪೂರ್ಣ ಸಾಲ ತೀರಿದ್ದರೂ ಪ್ರಕ್ರಿಯೆ ಮುಂದುವರಿಸಲಾಗಿದೆ. ಹೀಗಾಗಿ ವಸೂಲಿಯಾದ ಲೆಕ್ಕಪತ್ರವನ್ನು ಬ್ಯಾಂಕ್​ಗಳು ನೀಡಬೇಕು ಎಂಬುದು ವಿಜಯ್​ ಮಲ್ಯ ಆಗ್ರಹ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ