ವಿಕ್ರಂ ಸಿಂಹ ಬಂಧನ: ಸಂಸದ ಪ್ರತಾಪ್ ಸಿಂಹ ಆರೋಪದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು

| Updated By: ಗಂಗಾಧರ​ ಬ. ಸಾಬೋಜಿ

Updated on: Dec 31, 2023 | 4:17 PM

ಸಂಸದ ಪ್ರತಾಪ್​ ಸಿಂಹ ಸೋದರ ವಿಕ್ರಂ ಸಿಂಹ ಬಂಧನ ಕೇಸ್​ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಿರಪರಾಧಿಗಳಿಗೆ ಯಾರಿಗೂ ತೊಂದರೆ ಆಗಲು ಬಿಡಲ್ಲ. ತಪ್ಪು ಮಾಡಿಲ್ಲ ಅಂದ್ರೆ ಯಾಕೆ ಶಿಕ್ಷೆ ಆಗುತ್ತೆ. ನಮ್ಮ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ. 

ಬೆಂಗಳೂರು, ಡಿಸೆಂಬರ್​ 31: ನಿರಪರಾಧಿಗಳಿಗೆ ಯಾರಿಗೂ ತೊಂದರೆ ಆಗಲು ಬಿಡಲ್ಲ. ತಪ್ಪು ಮಾಡಿಲ್ಲ ಅಂದ್ರೆ ಯಾಕೆ ಶಿಕ್ಷೆ ಆಗುತ್ತೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಸಂಸದ ಪ್ರತಾಪ್​ ಸಿಂಹ ಸೋದರ ವಿಕ್ರಂ ಸಿಂಹ ಬಂಧನ ಕೇಸ್​ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡದವರ ಮೇಲೆ ಯಾಕೆ ಕ್ರಮ ಆಗುತ್ತೆ. ನಮ್ಮ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.

ನಾವು ಅಯೋಧ್ಯೆ ವಿರುದ್ಧ ಇಲ್ಲ

ರಾಮ ಮಂದಿರ ವಿಚಾರವಾಗಿ ಮಾತನಾಡಿದ ಅವರು, ರಾಮ ಮಂದಿರ ಕಟ್ಟಿರುವುದು ಬಹಳ ಸಂತೋಷ. ನಾವು ರಾಮಮಂದಿರ ವಿರುದ್ಧ ಇಲ್ಲ. ನಾವೂ ನಮ್ಮ ಹಳ್ಳಿಯಲ್ಲಿ ಭಜನೆ ಮಾಡುತ್ತಿದ್ದೆವು ಎಂದು ಎಂದಿದ್ದಾರೆ.

ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ ಕೇಸ್​: ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಿಷ್ಟು

ಪಕ್ಷದ ಹೈಕಮಾಂಡ್​​ ದೆಹಲಿಗೆ ಬರುವಂತೆ ಹೇಳಿದ್ದಾರೆ. ಲೋಕಸಭೆ ವಿಚಾರ ಚರ್ಚಿಸುತ್ತೇವೆ ಅಂದ್ಕೊಂಡಿದ್ದೇನೆ ಎಂದು ಹೇಳಿದ್ದಾರೆ. ನಿಗಮ ಮಂಡಳಿಗೆ ಎಂಎಲ್ಎಗಳನ್ನು ಮಾತ್ರ ಮೊದಲ ಹಂತದಲ್ಲಿ ಮಾಡೋಣ ಅಂದುಕೊಂಡಿದ್ದೆವು. ಈಗ ಕಾರ್ಯಕರ್ತರನ್ನೂ ಮಾಡಬೇಕು ಅಂತ ಹೇಳಿದ್ದಾರೆ. ಕಾರ್ಯಕರ್ತರ ಪಟ್ಟಿ ಕೂಡ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯದ ಜನತೆಗೆ ಹೊಸ ವರ್ಷಕ್ಕೆ ಶುಭಕೋರಿದ ಸಿಎಂ ಸಿದ್ದರಾಮಯ್ಯ 

ರಾಜ್ಯದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದು, 2024ರಲ್ಲಿ ಸುಖ, ಶಾಂತಿ, ಸಮೃದ್ದಿ ತರಲಿ ಅಂತ ಬಯಸುತ್ತೇನೆ ಎಂದಿದ್ದಾರೆ.

ಎಲ್ಲರಿಗೂ ಭಯ ಇರಬೇಕೆಂದು ಕ್ರಮಕೈಗೊಂಡಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಾಪ್​ ಸಿಂಹ ಸೋದರನ ವಿರುದ್ಧ ಕ್ರಮಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಅರಣ್ಯ ಇಲಾಖೆ ಅನುಮತಿ ಇಲ್ಲದಿದ್ದರೆ ಕ್ರಮ ಆಗುತ್ತೆ. ಈ ವಿಚಾರದಲ್ಲಿ ನಾವ್ಯಾರೂ ಮಧ್ಯಪ್ರವೇಶ ಮಾಡಿಲ್ಲ. ಅಧಿಕಾರಿಗಳು ಅವರ ಕೆಲಸ ಮಾಡಿದ್ದಾರೆ. ಎಲ್ಲರಿಗೂ ಭಯ ಇರಬೇಕೆಂದು ಕ್ರಮಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.