ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಿಂದ ಕಾಯ್ದೆ ಉಲ್ಲಂಘನೆ, ತನಿಖಾ ಸಮಿತಿ ವರದಿಯಲ್ಲಿ ಬಟಾಬಯಲು

| Updated By: ಆಯೇಷಾ ಬಾನು

Updated on: Aug 17, 2023 | 12:44 PM

Kspcb ಯ ಹಿಂದಿನ ಸದಸ್ಯ ಕಾರ್ಯದರ್ಶಿ ಸೂರಿ ಪಾಯಲ್ ಈ ಸಂಬಂಧ ಸರ್ಕಾರಕ್ಕೆ ದೂರು ನೀಡಿದ್ದರು. ದೂರಿನನ್ವಯ ಸರ್ಕಾರ ಸಮಿತಿ ರಚನೆ ಮಾಡಿ ತನಿಖೆಗೆ ಸೂಚಿಸಿತ್ತು. ಇದೀಗ ತನಿಖೆಯ ವರದಿಯಲ್ಲಿ ಶಾಂತಾ ಎ ತಿಮ್ಮಯ್ಯ ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಿಂದ ಕಾಯ್ದೆ ಉಲ್ಲಂಘನೆ, ತನಿಖಾ ಸಮಿತಿ ವರದಿಯಲ್ಲಿ ಬಟಾಬಯಲು
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
Follow us on

ಬೆಂಗಳೂರು, ಆ.17: ಜಾಗೃತಿ ಕಾರ್ಯಕ್ರಮಗಳ ಹೆಸರಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಂತಾ ಎ ತಿಮ್ಮಯ್ಯ(Shanth A Thimmaiah) ಅವರು ಕಾಯ್ದೆಗಳ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರ(State Government) ನೇಮಿಸಿದ ತನಿಖಾ ಸಮಿತಿ ವರದಿಯಲ್ಲಿ ಬಟಾಬಯಲಾಗಿದೆ. ಜಲ ಮಾಲಿನ್ಯ ಕಾಯ್ದೆ 1974 ಹಾಗೂ ವಾಯು ಮಾಲಿನ್ಯ ಕಾಯ್ದೆ 1981ರ ಪ್ರಕಾರ ಮಂಡಳಿ ಅಧ್ಯಕ್ಷರಿಗೆ ಯಾವುದೇ ಸಮಿತಿಯನ್ನು ರಚಿಸುವ ಅಧಿಕಾರ ಇಲ್ಲ. ಆದರೆ ಅಧ್ಯಕ್ಷ ಶಾಂತಾ ಎ ತಿಮ್ಮಯ್ಯ ಅವರು ಕಾಯ್ದೆಯನ್ನು ಉಲ್ಲಂಘಿಸಿ ಏಕ ಸಮಿತಿಯನ್ನು ರಚಿಸಿದ್ದಾರೆ ಎಂದು ತನಿಖಾ ಸಮಿತಿ ವರದಿಯಲ್ಲಿ ನಮೂದಿಸಲಾಗಿದೆ.

ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಅನ್ನೋ ಆರೋಪ ಶಾಂತಾ ಎ ತಿಮ್ಮಯ್ಯ ಅವರ ಮೇಲಿತ್ತು. Kspcb ಯ ಹಿಂದಿನ ಸದಸ್ಯ ಕಾರ್ಯದರ್ಶಿ ಸೂರಿ ಪಾಯಲ್ ಈ ಸಂಬಂಧ ಸರ್ಕಾರಕ್ಕೆ ದೂರು ನೀಡಿದ್ದರು. ದೂರಿನನ್ವಯ ಸರ್ಕಾರ ಸಮಿತಿ ರಚನೆ ಮಾಡಿ ತನಿಖೆಗೆ ಸೂಚಿಸಿತ್ತು. ಇದೀಗ ತನಿಖೆಯ ವರದಿಯಲ್ಲಿ ಶಾಂತಾ ಎ ತಿಮ್ಮಯ್ಯ ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ.

ಇದನ್ನೂ ಓದಿ: ಭಾರತೀಯ ಸೇನೆಗಾಗಿ E-ಮಾದರಿ ಅಪಾಚೆಗಳ ಉತ್ಪಾದನೆಯನ್ನು ಪ್ರಾರಂಭಿಸಲಿದೆ ಬೋಯಿಂಗ್ ಸಂಸ್ಥೆ

Ktpp ಕಾಯ್ದೆಯನ್ನ ಉಲ್ಲಂಘಸಿ ಏಕಸ್ವಾಮ್ಯ ನಿರ್ಧಾರ ಮಾಡಿದ್ದಾರೆ. 25 ಸಾವಿರ ಮೇಲ್ಪಟ್ಟ ಕೆಲಸಗಳಿಗೆ ಟೆಂಡರ್ ಆಹ್ವಾನಿಸಬೇಕು. ಆದರೆ ಮಂಡಳಿ ಅಧ್ಯಕ್ಷರು ಬರೋಬ್ಬರಿ 19.92 ಕೋಟಿ ಯಷ್ಟು ಟೆಂಡರ್ ಕರೆಯದೇ ನೀಡಿದ್ದಾರೆ. ಏಕ ಮೂಲ ಸಂಸ್ಥೆಯನ್ನು ಆಯ್ಕೆ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 35 ದಿನಗಳ ಅಲ್ಪಾವಧಿ ಟೆಂಡರ್ ಕರೆಯಬಹುದಿತ್ತು. ಮೊದಲೇ ನಿರ್ಧರಿಸಿದ ಸಂಸ್ಥೆಗಳಿಗೆ ಅವಕಾಶ ಕಲ್ಪಿಸಲು ಸ್ಪರ್ಧಾತ್ಮಕತೆ ನಿಯಂತ್ರಿಸಿದ್ದಾರೆ. ಪರಿಸರ ಜಾಗೃತಿ ಕಾರ್ಯಕ್ರಮಗಳು ಹೆಚ್ಚು ಜನರಿಗೆ ತಲುಪುತ್ತವೆಯೇ ಅನ್ನೋ ಮುನ್ನೋಟವಿಲ್ಲ. ಹೀಗಾಗಿ ಪೂರ್ವ ನಿಯೋಜಿತ ಸಂಸ್ಥೆಗಳಿಗೆ ಗುತ್ತಿಗೆ ನೀಡಲು ಮಂಡಲಿ ಅಧ್ಯಕ್ಷ ಶಾಂತಾ ಎ ತಿಮ್ಮಯ್ಯ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ ಅಂತ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಶಾಂತಾ ಎ ತಿಮ್ಮಯ್ಯ ಯೋಜಿತ ಸಂಸ್ಥೆಗಳಿಗೆ ಗುತ್ತಿಗೆ ನೀಡುವ ಉದ್ದೇಶದಿಂದಲೇ ಏಕ ಮೂಲ ಸಂಸ್ಥೆಯನ್ನು ಆಯ್ಕೆ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಶಾಂತಾ ಎ ತಿಮ್ಮಯ್ಯ ಅವರು ಸ್ವಯಂ ಘೋಷಿತವಾಗಿ ಏಕ ಮೂಲ ಸಂಸ್ಥೆಯ ಅಧ್ಯಕ್ಷರನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಸದ್ಯ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆ ಹೆಚ್ಚುವರಿ ನಿರ್ದೇಶಕ ಮಹಾದೇವ ರಿಂದ ತನಿಖಾ ವರದಿ ಸರ್ಕಾರಕ್ಕೆ ನೀಡಲಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ