ನೀತಿ ಸಂಹಿತೆ ಉಲ್ಲಂಘನೆ; BTM ಲೇಔಟ್ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿರುದ್ಧ FIR
ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಆದರೂ ಕೆಲವು ರಾಜಕೀಯ ನಾಯಕರು ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿರುವ ಪ್ರಕರಣಗಳು ನಡೆಯುತ್ತಿವೆ. ಬೆಂಗಳೂರು ನಗರದ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಡು ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ಬೆಂಗಳೂರು, ಏ.1: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ನಿಯಮ ಉಲ್ಲಂಘಿಸಿದ ಬೆಂಗಳೂರು (Bengaluru) ನಗರದ ಬಿಟಿಎಂ ಲೇಔಟ್ (BTM Layout) ವಿಧಾನಸಭಾ ಕ್ಷೇತ್ರದ ಬಿಜೆಪಿ (BJP) ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಡು ಅವರ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅನುಮತಿ ಇಲ್ಲದೆ ಬಿಜೆಪಿ ಚಿಹ್ನೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಅಂಟಿಸಲಾಗಿತ್ತು. ಈ ಬಗ್ಗೆ ಸ್ಥಳೀಯರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಇದರ ಅನ್ವಯ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ನೀತಿ ಸಂಹಿತೆ ಉಲ್ಲಂಘಿಸಿರುವುದು ಕಂಡುಬಂದಿದೆ. ಈ ಬಗ್ಗೆ ಚುನಾವಣಾಧಿಕಾರಿಗಳು ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇದರ ಅನ್ವಯ ಪೊಲೀಸರು ರಾಘವೇಂದ್ರ ನಾಯ್ಡು ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ: Lok Sabha Elections: ಚುನಾವಣಾ ಕಣದಲ್ಲಿ ಕೋಟಿ ಕೋಟಿ ಹಣ: ಈವರೆಗೆ ಸೀಜ್ ಆದ ಮೊತ್ತ ಕೇಳಿದ್ರೆ ಬೆಚ್ಚಿ ಬೀಳುತ್ತೀರಿ!
ಕಾರಿನಲ್ಲಿ ಸಾಗಿಸುತ್ತಿದ್ದ 3 ಲಕ್ಷ ನಗದು ಜಪ್ತಿ
ಬೀದರ್: ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಮೂರು ಲಕ್ಷ ನಗದನ್ನು ಜಪ್ತಿ ಮಾಡಿದ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಗೋವಾದಿಂದ ತೆಲಂಗಾಣಕ್ಕೆ ತೆರಳುತ್ತಿದ್ದ ಕಾರನ್ನು ಚಂಡಕಾಪುರ ಚೆಕ್‌ಪೋಸ್ಟ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ 3 ಲಕ್ಷ ರೂಪಾಯಿ ಪತ್ತೆಯಾಗಿದೆ. ಪ್ರಾಥಮಿಕ ತನಿಖೆ ವೇಳೆ ದಾಖಲೆ ಇಲ್ಲದಿರುವುದು ಕಂಡು ಬಂದ ಹಿನ್ನೆಲೆ ಹಣವನ್ನು ಜಪ್ತಿ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ