AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಲ್ಲಿ ಕೈದಿಗಳ ಡ್ಯಾನ್ಸ್​ ವಿಡಿಯೋ ವೈರಲ್​: ಯಾವ ಜೈಲಿನದ್ದು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಡಿಯೋಗಳು ನಿನ್ನೆಯಷ್ಟೇ ವೈರಲ್​ ಆಗಿದ್ದವು. ಆ ಬೆನ್ನಲ್ಲೇ ಇಂದು ಮತ್ತೊಂದಿಷ್ಟು ವಿಡಿಯೋಗಳು ಹೊರ ಬಂದಿವೆ. ಜೈಲಿನಲ್ಲೇ ಮದ್ಯ ಸೇವಿಸಿ ಕೈದಿಗಳು ಡ್ಯಾನ್ಸ್​ ಮಾಡಿರುವ ದೃಶ್ಯಗಳು ವಿಡಿಯೋದಲ್ಲಿದ್ದು, ಇದು ಕೂಡ ಪರಪ್ಪನ ಅಗ್ರಹಾರದ್ದಾ ಅಥವಾ ಬೇರೆ ಜೈಲಿನದ್ದಾ? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಕುಡಿದ ಮತ್ತಲ್ಲಿ ಕೈದಿಗಳ ಡ್ಯಾನ್ಸ್​ ವಿಡಿಯೋ ವೈರಲ್​: ಯಾವ ಜೈಲಿನದ್ದು?
ಜೈಲಲ್ಲೇ ಕುಡಿದು ಕೈದಿಗಳಿಂದ ನೃತ್ಯ
ಪ್ರಸನ್ನ ಹೆಗಡೆ
|

Updated on:Nov 09, 2025 | 3:06 PM

Share

ಬೆಂಗಳೂರು, ನವೆಂಬರ್​ 09: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಬಿಂದಾಸ್​ ಲೈಫ್​ ಬಗ್ಗೆ ಮೇಲಿಂದ ಮೇಲೆ ವಿಡಿಯೋಗಳು ವೈರಲ್​ ಆಗುತ್ತಲೇ ಇವೆ. ನಿನ್ನೆಯಷ್ಟೇ ರೇಪಿಸ್ಟ್ ಉಮೇಶ್ ರೆಡ್ಡಿ, ತರುಣ್ ಕೊಂಡೂರು, ಶಂಕಿತ ಉಗ್ರ ಶಕೀಲ್​​ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್ ಆಗಿದ್ದವು.  ಈ ನಡುವೆ ಕರ್ನಾಟಕದ ಜೈಲಿನ ಮತ್ತೊಂದು ವಿಡಿಯೋ ಹೊರ ಬಂದಿದ್ದು, ಮದ್ಯಸೇವಿಸಿ ಕೈದಿಗಳು ಡ್ಯಾನ್ಸ್ ಮಾಡೋ ವಿಡಿಯೋ ಭಾರಿ ಚರ್ಚೆ ಹುಟ್ಟುಹಾಕಿದೆ.  ಈ ವಿಡಿಯೋಗಳು ಪರಪ್ಪನ ಅಗ್ರಹಾರ ಜೈಲಿನದ್ದಾ ಅಥವಾ ಬೇರೆ ಜೈಲಿನದ್ದಾ ಎಂಬ ಆಯಾಮದಲ್ಲಿ ತನಿಖೆ ನಡೆಸಲಾಗುತ್ತಿದೆ.

ಕೈದಿಗಳ ಡ್ಯಾನ್ಸ್​

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್​ ಆಗಿರುವ ಬೆನ್ನಲ್ಲೇ ಹೊರಬಂದ ವಿಡಿಯೋಗಳು 2023ರದ್ದು ಎಂದು ಜೈಲಧಿಕಾರಿಗಳು ಮಾಹಿತಿ ನೀಡಿದ್ದರು. ಆದರೆ ಆ ಎಲ್ಲಾ ವಿಡಿಯೋಗಳು ಇದೇ ವರ್ಷದ್ದು ಎನ್ನಲಾಗಿದೆ. ಗೋಲ್ಡ್ ಸ್ಮಗ್ಲಿಂಗ್​ ಕೇಸಲ್ಲಿ ಬಂಧನ ಆಗಿರುವ ರನ್ಯಾ ಪ್ರಿಯಕರ ತರುಣ್ ಅರೆಸ್ಟ್​ ಆಗಿರೋದು ಕಳೆದ ಮಾರ್ಚ್​​ನಲ್ಲಿ. ವೈರಲ್​ ಆಗಿರುವ ವಿಡಿಯೋಗಳಲ್ಲಿ ತರುಣ್​ ಕೂಡ ಇದ್ದು, ಆರೋಪದಿಂದ ತಪ್ಪಿಸಿಕೊಳ್ಳಲು ಜೈಲಧಿಕಾರಿಗಳು ಇದು ಹಳೆಯ ವಿಡಿಯೋ ಎಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತಪ್ಪು ಮಾಡಿದವರ ವಿರುದ್ಧ ಕ್ರಮ- ಸಿಎಂ

ಪರಪ್ಪನ ಅಗ್ರಹಾರದಲ್ಲಿ ಕಾನೂನು ಬಾಹಿರ ಚಟುವಟಿಕೆ ವಿಚಾರ ಸಂಬಂಧ ಪ್ರತಿಕ್ರಿಯಿಸಿರೋ ಸಿಎಂ ಸಿದ್ದರಾಮಯ್ಯ, ತಪ್ಪು ಮಾಡಿದವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದಿದ್ದಾರೆ. ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಮಾತನಾಡಿದ ಅವರು, ಆ ರೀತಿ ಯಾರು ಮಾಡಿದ್ದಾರೋ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವರದಿ: ವಿಕಾಸ್​​ ಟಿವಿ9, ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:18 pm, Sun, 9 November 25

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ