AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ

Chandrasekharanath Swamiji passes away: ವಿಶ್ವ ಒಕ್ಕಲಿಗ ಮಹಾಸಂಸ್ಥಾನಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಶ್ರೀ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ವಯೋಸಹಜ ಕಾಯಿಲೆ ಮಧ್ಯರಾತ್ರಿ ವಿಧಿವಶರಾಗಿದ್ದಾರೆ. ಅವರ ಅಂತಿಮ ದರ್ಶನಕ್ಕೆ ಕೆಂಗೇರಿಯ ಮಠದ ಆವರಣದಲ್ಲಿ ಅವಕಾಶ ಕಲ್ಪಿಸಲಾಗಿದೆ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತಿಮ ವಿಧಿವಿಧಾನ ನಡೆಯಲಿದೆ.

ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ
ಚಂದ್ರಶೇಖರನಾಥಶ್ರೀ
Kiran Surya
| Edited By: |

Updated on:Aug 16, 2025 | 9:40 AM

Share

ಬೆಂಗಳೂರು, ಆಗಸ್ಟ್ 16: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆಂಗಳೂರಿನ (bangaluru) ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಶ್ರೀ(81) ತಡರಾತ್ರಿ 12.01ರ ಸುಮಾರಿಗೆ ವಿಧಿವಶರಾಗಿದ್ದಾರೆ (passes away). ಮಧ್ಯಾಹ್ನ 3 ಗಂಟೆಗೆ ನಿಶ್ಚಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ವಿಧಿವಿಧಾನ ನಡೆಯಲಿದ್ದು, ಕೆಂಗೇರಿಯಲ್ಲಿನ ಮಠದ ಆವರಣದಲ್ಲೇ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಚಂದ್ರಶೇಖರನಾಥ ಸ್ವಾಮೀಜಿ ಶ್ರೀ ಮಠದ ಸ್ಥಾಪನೆ ಮಾಡಿದರು. ಶಿಕ್ಷಣ ಮತ್ತು ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ಸದ್ಯ ಸ್ವಾಮೀಜಿಗಳ ನಿಧನಕ್ಕೆ ರಾಜಕೀಯ ನಾಯಕರು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಡಿಕೆ ಶಿವಕುಮಾರ್ ಸಂತಾಪ

ಈ ಕುರಿತಾಗಿ ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್​​ ‘ವಿಶ್ವ ಒಕ್ಕಲಿಗರ ಮಠದ ಮಠಾಧೀಶರಾಗಿದ್ದ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ಅವರು ಭೈರವೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ‌. ಪೂಜನೀಯರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ’ ಎಂದಿದ್ದಾರೆ.

ಡಿಕೆ ಶಿವಕುಮಾರ್ ಟ್ವೀಟ್​

‘ಅವರ ದಿವ್ಯ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ಕರುಣಿಸಲಿ. ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಸಮಸ್ತ ಭಕ್ತವೃಂದಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.

ಹೆಚ್​ಡಿ ದೇವೇಗೌಡ ಸಂತಾಪ

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ. ‘ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಸಂಸ್ಥಾಪಕ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಲಿಂಗೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖವಾಯಿತು’.

ಹೆಚ್​ಡಿ ದೇವೇಗೌಡ ಟ್ವೀಟ್​

‘ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಮಾರ್ಗದರ್ಶಕರಾಗಿ ಕೆಲಸ ಮಾಡಿದ ಗುರುಗಳಿಗೆ, ಭಗವಂತನು ಸದ್ಗತಿ ಪ್ರಾಪ್ತಿಸಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಆಪಾರ ಸಂಖ್ಯೆಯ ಭಕ್ತರಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ’. ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:52 am, Sat, 16 August 25

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ