ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ವಿವೇಕ್​ ರೆಡ್ಡಿ ಆಯ್ಕೆ

ಪ್ರತಿಷ್ಠಿತ ಬೆಂಗಳೂರು ವಕೀಲರ ಸಂಘದ ಚುನಾವಣೆ ಭಾನುವಾರ (ಡಿ.19) ನಡೆಯಿತು. ನೂತನ ಅಧ್ಯಕ್ಷರಾಗಿ ವಿವೇಕ್ ರೆಡ್ಡಿ 1900ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ವಿವೇಕ್​ ರೆಡ್ಡಿ ಆಯ್ಕೆ
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 19, 2021 | 9:09 PM

ಬೆಂಗಳೂರು: ಪ್ರತಿಷ್ಠಿತ ಬೆಂಗಳೂರು ವಕೀಲರ ಸಂಘದ ಚುನಾವಣೆ ಭಾನುವಾರ (ಡಿ.19) ನಡೆಯಿತು. ನೂತನ ಅಧ್ಯಕ್ಷರಾಗಿ ವಿವೇಕ್ ರೆಡ್ಡಿ 1900ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಸ್ಪರ್ಧೆಯೊಡ್ಡಿದ ನಿಕಟಪೂರ್ವ ಅಧ್ಯಕ್ಷ ಎ.ಪಿ.ರಂಗನಾಥ್ 2ನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ವಿವೇಕ್ ರೆಡ್ಡಿ ಪರವಾಗಿ 4804 ಮತಗಳು, ಎ.ಪಿ.ರಂಗನಾಥ್ ಪರವಾಗಿ 2894 ಮತಗಳು, ರಾಜಣ್ಣ ಪರವಾಗಿ 2545 ಮತಗಳು ಹಾಗೂ ಎಚ್​.ಸಿ.ಶಿವರಾಮು ಪರವಾಗಿ 878 ಮತಗಳು ಚಲಾವಣೆಯಾಗಿದ್ದವು.

ಬೆಂಗಳೂರು ವಕೀಲರ ಸಂಘವು ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ವಕೀಲರ ಸಂಘ ಎನಿಸಿದೆ. ಸಿಟಿ ಸಿವಿಲ್ ಕೋರ್ಟ್​ನಲ್ಲಿ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಿತು. ವಕೀಲರ ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಸ್ಥಾನಗಳೊಂದಿಗೆ ಹೈಕೋರ್ಟ್​ನ 7, ಮೆಯೊಹಾಲ್ ಮತ್ತು ಮ್ಯಾಜಿಸ್ಟ್ರೇಟ್​ ಕೋರ್ಟ್​ ಘಟಕಗಳ ತಲಾ 5 ಹಾಗೂ ಸಿಟಿ ಸಿವಿಲ್ ಕೋರ್ಟ್​ನ 12 ಕಾರ್ಯಕಾರಿ ಸದಸ್ಯ ಸಮಿತಿ ಸ್ಥಾನಗಳಿಗೂ ಚುನಾವಣೆ ನಡೆಯಿತು.

ಹಿಂದಿನ ಅವಧಿಯ ಅಧ್ಯಕ್ಷರಾಗಿದ್ದ ಎ.ಪಿ.ರಂಗನಾಥ್, ಮಾಜಿ ಅಧ್ಯಕ್ಷರಾದ ಎಚ್​.ಸಿ.ಶಿವರಾಮ್, ರಾಜ್ಯ ವಕೀಲರ ಪರಿಷತ್ ಸದಸ್ಯ ಆರ್.ರಾಜಣ್ಣ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಖಜಾಂಚಿ ಸ್ಥಾನಕ್ಕೆ 10 ಮಂದಿ, ಆಡಳಿತ ಮಂಡಳಿಯ 29 ಸದಸ್ಯ ಸ್ಥಾನಗಳಿಗೆ ಒಟ್ಟು 112 ಮಂದಿ ಆಕಾಂಕ್ಷಿಗಳಿದ್ದರು. ಸಂಘದ ಒಟ್ಟು 32 ಸ್ಥಾನಗಳಿಗೆ 134 ವಕೀಲರು ಸ್ಪರ್ಧಿಸಿದ್ದರು. ವಕೀಲರ ಸಂಘದ ನಾಲ್ಕೂ ಘಟಕಗಳಿಂದ 16,568 ವಕೀಲರು ಮತ ಚಲಾಯಿಸುವ ಹಕ್ಕು ಪಡೆದಿದ್ದರು.

ಇದನ್ನೂ ಓದಿ: ವಕೀಲರ ಮುಷ್ಕರ ಮತ್ತು ಕೋರ್ಟ್ ಬಹಿಷ್ಕಾರಗಳನ್ನು ತಡೆಯಲು ನಿಯಮ ರೂಪಿಸಲಿದ್ದೇವೆ: ಬಾರ್ ಕೌನ್ಸಿಲ್ ಆಫ್ ಇಂಡಿಯಾ ಇದನ್ನೂ ಓದಿ: ಮುಂದಿನ ಆದೇಶದವರೆಗೂ ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಬೇಡ; ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು