AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ವೆಸ್ಟ್ ಕರ್ನಾಟಕ: ವೋಲ್ವೋ ಕಂಪನಿಯಿಂದ 1,400 ಕೋಟಿ ರೂ ಹೂಡಿಕೆ, ಸಿಎಂ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ

ವೋಲ್ವೋ ಕಂಪನಿಯು ಕರ್ನಾಟಕದ ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಘಟಕವನ್ನು ವಿಸ್ತರಿಸಲು 1,400 ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲಿದೆ. ಈ ವಿಸ್ತರಣೆಯಿಂದ ವಾರ್ಷಿಕವಾಗಿ 20,000 ಬಸ್ ಮತ್ತು ಟ್ರಕ್‌ಗಳನ್ನು ಉತ್ಪಾದಿಸಲು ಸಾಧ್ಯವಾಗಲಿದೆ ಮತ್ತು ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಸಿಎಂ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಇನ್ವೆಸ್ಟ್ ಕರ್ನಾಟಕ: ವೋಲ್ವೋ ಕಂಪನಿಯಿಂದ 1,400 ಕೋಟಿ ರೂ ಹೂಡಿಕೆ, ಸಿಎಂ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ
ಇನ್ವೆಸ್ಟ್ ಕರ್ನಾಟಕ: ವೋಲ್ವೋ ಕಂಪನಿಯಿಂದ 1,400 ಕೋಟಿ ರೂ ಹೂಡಿಕೆ, ಸಿಎಂ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ
Anil Kalkere
| Edited By: |

Updated on: Feb 13, 2025 | 3:55 PM

Share

ಬೆಂಗಳೂರು, ಫೆಬ್ರವರಿ 13: ರಾಜ್ಯಕ್ಕೆ ಬಂಡವಾಳ ಹರಿವು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಇನ್ವೆಸ್ಟ್ ಕರ್ನಾಟಕ (Invest Karnataka) ಸಮಾವೇಶ ಆಯೋಜಿಸಿದೆ. ಈಗಾಗಲೇ ಉತ್ತಮ ಪ್ರತಿಕ್ರಿಯೆ ಕೂಡ ಲಭ್ಯವಾಗಿದೆ. ಸದ್ಯ ಇನ್ವೆಸ್ಟ್ ಕರ್ನಾಟಕಲ್ಲಿ ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್​​ ಮೂಲದ ವೋಲ್ವೋ ಕಂಪನಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಣೆ ಮಾಡಿದೆ.

ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನ ಮಾಡಿದೆ. ಆ ನಿಟ್ಟಿನಲ್ಲಿ 1,400 ಕೋಟಿ ರೂ. ಹೂಡಿಕೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ ಹಾಕಿದೆ. ಈ ವೇಳೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

ಇದನ್ನೂ ಓದಿ: Invest Karnataka: ಜಿಂದಾಲ್ ಗ್ರೂಪ್​ಗೆ ‘ದಶಕದ ಹೂಡಿಕೆದಾರ’ ಪ್ರಶಸ್ತಿ ಕೊಟ್ಟ ಕರ್ನಾಟಕ ಸರ್ಕಾರ

ಒಡಂಬಡಿಕೆಗೆ ಸರ್ಕಾರ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವೋಲ್ವೋ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ ಸಹಿ ಹಾಕಿದ್ದಾರೆ. ಇಲ್ಲಿನ ಅರಮನೆ ಆವರಣದಲ್ಲಿ ನಡೆಯತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ವೋಲ್ವೋ ಸಂಸ್ಥೆ ಸಕ್ರಿಯವಾಗಿದೆ. ಅದರ ಭಾಗವಾಗಿ ಈ ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಿದೆ.

ವೋಲ್ವೋ ಕಂಪನಿ ಕನ್ನಡಿಗರಿಗೆ ಕೆಲಸ ಕೊಡಬೇಕು: ಸಿಎಂ

ಒಡಂಬಡಿಕೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ವೋಲ್ವೋ ಕಂಪನಿಯು 25 ವರ್ಷಗಳ ಹಿಂದೆಯೇ ರಾಜ್ಯಕ್ಕೆ ಬಂದು, ಬಂಡವಾಳ ಹೂಡಿ, ಬದಲಾವಣೆಗೆ ನಾಂದಿ ಹಾಡಿತ್ತು. ಈಗ ನಮ್ಮಲ್ಲಿ ವೋಲ್ವೋ ಎನ್ನುವುದು ಉತ್ಕೃಷ್ಟ ಗುಣಮಟ್ಟದ ಬಸ್ಸುಗಳಿಗೆ ಇನ್ನೊಂದು ಹೆಸರಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕದ ಚಿಪ್​ಟೂಲ್ ತಯಾರಿಸುವ ಲ್ಯಾಮ್ ರಿಸರ್ಚ್​ನಿಂದ 10,000 ಕೋಟಿ ರೂ ಹೂಡಿಕೆ; ಇನ್ವೆಸ್ಟ್ ಕರ್ನಾಟಕಕ್ಕೆ ಉದ್ಯಮವಲಯದಿಂದ ನಿರೀಕ್ಷೆಮೀರಿ ಸ್ಪಂದನೆ

ರಾಜ್ಯ ಸಾರಿಗೆ ನಿಗಮದ ಐಷಾರಾಮಿ ಬಸ್ಸುಗಳನ್ನು ಕೂಡ ಜನ ಇದೇ ಹೆಸರಿನಿಂದ ಕರೆಯುತ್ತಿದ್ದಾರೆ. ವೋಲ್ವೋ ಕಂಪನಿಗೆ ಸರಕಾರ ಅಗತ್ಯ ಸೌಲಭ್ಯ ಮತ್ತು ನೆರವು ಒದಗಿಸಲಿದೆ. ಕಂಪನಿಯು ತನ್ನಲ್ಲಿ ಹೆಚ್ಚಿನ ಕನ್ನಡಿಗರಿಗೆ ಕೆಲಸ ಕೊಡಬೇಕು. ಇದರಿಂದ ಸ್ಥಳೀಯರಿಗೆ ಭದ್ರತೆ ಮತ್ತು ಆರ್ಥಿಕ ಬೆಳವಣಿಗೆ ಎರಡನ್ನೂ ಸಾಧಿಸಬಹುದು ಎಂದಿದ್ದಾರೆ.

ವೋಲ್ವೋ ಸಿಇಒ ಹೇಳಿದ್ದಿಷ್ಟು

ವೋಲ್ವೋ ಸಿಇಒ ಮಾರ್ಟಿನ್ ಲುಂಡ್ಸ್ಟೆಡ್ ಮಾತನಾಡಿ, ಕರ್ನಾಟಕದಲ್ಲಿ ವೋಲ್ವೋ ಕಂಪನಿ ಪೀಣ್ಯ, ಹೊಸಕೋಟೆ ಮತ್ತು ಧಾರವಾಡ ಸಮೀಪದ ಪೀತಂಪುರದಲ್ಲಿ ತಯಾರಿಕಾ ಘಟಕಗಳನ್ನು ಹೊಂದಿದೆ. ಈಗ ನಾವು ವರ್ಷಕ್ಕೆ ಇಲ್ಲಿ 3,000 ಬಸ್, ಟ್ರಕ್ ತಯಾರಿಸುತ್ತಿದ್ದೇವೆ. ಹೊಸಕೋಟೆ ಸ್ಥಾವರದ ವಿಸ್ತರಣೆಯಿಂದ ನಾವು ವರ್ಷಕ್ಕೆ 20 ಸಾವಿರ ಬಸ್, ಟ್ರಕ್ ತಯಾರಿಸಬಹುದು. ಈ ಸಾಮರ್ಥ್ಯ ವೃದ್ಧಿಯಿಂದ ಉದ್ಯೋಗ ಸೃಷ್ಟಿಯೂ ಆಗಲಿದ್ದು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತ ಮತ್ತು ಕರ್ನಾಟಕದ ಸ್ಥಾನ ಮತ್ತಷ್ಟು ಸುಭದ್ರವಾಗಲಿದೆ. ಬೆಂಗಳೂರು ವೋಲ್ವೋ ಕಂಪನಿಯ ಪಾಲಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ 4ನೇ ಅತಿದೊಡ್ಡ ತಾಣವಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್