ಮತದಾರರ ಪಟ್ಟಿ ಅಕ್ರಮ: ಮನೆ ಮನೆಗೆ ತೆರಳಿ ವೋಟರ್ ಐಡಿ ಪರಿಶೀಲಿಸಿದ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ರದ್ದತಿ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ವತಃ ಮನೆ ಮನೆಗೆ ತೆರಳಿ ಪರಿಶೀಲಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ನಡೆದ ವೋಟರ್ ಐಡಿ ಪರಿಷ್ಕರಣೆಯಲ್ಲಿನ ಅಕ್ರಮ (Voter ID Scam) ಸಾಕಷ್ಟು ಸುದ್ದಿ ಮಾಡಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತದಾರರ ಹೆಸರು ಸೇರ್ಪಡೆ ಮತ್ತು ರದ್ದತಿಯಲ್ಲಿ ಅಕ್ರಮ ನಡೆದಿದೆ. ರಾಜಧಾನಿಯಲ್ಲಿ ಬೆಂಗಳೂರಲ್ಲಿ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಅಕ್ರಮ ಎಸಗಿದ ಚಿಲುಮೆ (Chilume) ಸಂಸ್ಥೆಯ ಮುಖ್ಯಸ್ಥ, ಪ್ರಮುಖ ಆರೋಪಿ ರವಿಕುಮಾರ್ನನ್ನು ಪೊಲೀಸರು ಬಂಧಿಸಿದರು. ಮತ್ತು ಪ್ರಕರಣದಲ್ಲಿ ಭಾಗಿಯಾದ ಐಎಎಸ್ ಮಟ್ಟದ ಅಧಿಕಾರಗಳನ್ನು ಕೇಂದ್ರ ಚುನಾವಣಾ ಆಯೋಗ ಅಮಾನತು ಮಡಿತ್ತು. ಇದಾದ ನಂತರ ಅಧಿಕಾರಿಗಳು ಎಚ್ಚತ್ತುಕೊಂಡಿದ್ದು, ಈಗ ಬಿಬಿಎಂಪಿ (BBMP) ಮುಖ್ಯ ಆಯುಕ್ತ, ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ (Tushar Girinath) ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ರದ್ದತಿ ಬಗ್ಗೆ ಸ್ವತಃ ಮನೆ ಮನೆಗೆ ತೆರಳಿ ಪರಿಶೀಲಿಸಿದ್ದಾರೆ.
ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ: ಬಿಬಿಎಂಪಿ ಮಾಜಿ ಕಾರ್ಪೊರೇಟರ್ ತಾಯಿ ಹೆಸರೇ ಡಿಲೀಟ್
ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಕೇಳಿಬಂದಿತ್ತು. ಇದಕ್ಕೆ ಪುಷ್ಠಿ ನೀಡುವಂತೆ ಮಹದೇವಪುರ ಕ್ಷೇತ್ರದ ಹಗದೂರು ವಾರ್ಡ್ನ ಮಾಜಿ ಕಾರ್ಪೋರೆಟರ್ ಉದಯ್ ಕುಮಾರ್ ಅವರ ತಾಯಿಯ ಹೆಸರು ವೋಟರ್ ಐಡಿ ಲಿಸ್ಟ್ನಿಂದ ತೆಗೆದು ಹಾಕಲಾಗಿತ್ತು. ವಿಮಲಾಕ್ಷಿ (72) ಅವರ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ ಆಗಿತ್ತು.
ಇದನ್ನೂ ಓದಿ: ಹೊಸ ವರ್ಷಾಚರಣೆಗೆ ದಿನದ 24 ಗಂಟೆ ಹೋಟೆಲ್ ತೆರೆಯಲು ಗೃಹ ಇಲಾಖೆಗೆ ಮನವಿ
ತಮ್ಮ ತಾಯಿಯ ಹೆಸರು ಡಿಲೀಟ್ ಆಗಿರುವ ಬಗ್ಗೆ ಚುನಾವಣಾ ಆಯೋಗ ಮತ್ತು ಬಿಬಿಎಂಪಿಗೆ ಮಾಜಿ ಕಾರ್ಪೋರೆಟರ್ ಉದಯ್ ಕುಮಾರ್ ದೂರು ನೀಡಿದ್ದರು. ಮತ್ತೊಮ್ಮೆ ಅರ್ಜಿ ಸಲ್ಲಿಸಿದರೆ ಸೇರ್ಪಡೆ ಮಾಡುವುದಾಗಿ ಬಿಬಿಎಂಪಿ ಉತ್ತರ ನೀಡಿತ್ತು.
ಪ್ರಕರಣದ ತನಿಖಾ ಪ್ರಗತಿ ವರದಿ ನಿಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ನಗರದಲ್ಲಿ ನಡೆದ ಚಿಲುಮೆ ಸಂಸ್ಥೆಯಿಂದ ಮತದಾರ ಮಾಹಿತಿ ಸಂಗ್ರಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ನಗರದ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರನ್ನು ಕೇಂದ್ರ ಚುನಾವಣೆ ಆಯೋಗ ಅಮಾನತು ಮಾಡಿತ್ತು. ಈ ಅಮಾನತನ್ನು ಪ್ರಶ್ನಿಸಿ ಕೆ. ಶ್ರೀನಿವಾಸ್ ಸಲ್ಲಿಸಿದ್ದ ಹೈಕೋರ್ಟ್ಗೆ (High court) ಅರ್ಜಿ ಸಲ್ಲಿಸಿದ್ದರು. ಡಿಸೆಂಬರ್ 7 ರಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸರ್ಕಾರಕ್ಕೆ ತನಿಖಾ ಪ್ರಗತಿ ಬಗ್ಗೆ ಮಾಹಿತಿ ನೀಡಲು ಸೂಚಿಸಿದೆ. ಜೊತೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಸ್ಥಾನಪಲ್ಲಟ ಮಾಡದಂತೆ ಎಚ್ಚರಿಸಿದೆ. ಪ್ರತ್ಯೇಕ ಎಡಿಇಒ ನೇಮಕಕ್ಕೆ ಚುನಾವಣಾ ಆಯೋಗಕ್ಕೆ ಸ್ವಾತಂತ್ಯ್ರವಿದೆ ಎಂದು ಅಭಿಪ್ರಾಯ ಪಟ್ಟು, ವಿಚಾರಣೆಯನ್ನು ಮುಂದೂಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:30 pm, Wed, 14 December 22