Voter ID Scam: ಚಿಲುಮೆ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ

| Updated By: ವಿವೇಕ ಬಿರಾದಾರ

Updated on: Dec 27, 2022 | 7:13 PM

ವೋಟರ್​ ಐಡಿ ಅಕ್ರಮ ಪ್ರಕರಣದ ಚಿಲುಮೆ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.

Voter ID Scam: ಚಿಲುಮೆ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ
ಬಿಬಿಎಂಪಿ, ಚಿಲುಮೆ ಸಂಸ್ಥೆ
Follow us on

ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ಖಾಸಗಿ ಮಾಹಿತಿಯನ್ನು ಅಕ್ರಮವಾಗಿ (Voter ID Scam) ಸಂಗ್ರಹಿಸಿದ್ದ ಚಿಲುಮೆ (Chilume) ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (BBMP Commissioner Tushar Girinath) ಆದೇಶ ಹೊರಡಿಸಿದ್ದಾರೆ. ಮತದಾನದ ಬಗ್ಗೆ ಜಾಗೃತಿಗಾಗಿ ಬಿಬಿಎಂಪಿ ನೀಡಿದ್ದ ಒಪ್ಪಿಗೆ ದುರುಪಯೋಗ ಪಡಿಸಿಕೊಂಡ ಹಿನ್ನೆಲೆ ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಸದ್ಯ ರಾಜ್ಯ ಚುನಾವಣಾ ಆಯೋಗ ಚಿಲುಮೆ ಸಂಸ್ಥೆಯ ವಿರುದ್ದ ತನಿಖೆ ನಡೆಸುತ್ತಿದೆ. ಚಿಲುಮೆ ಸಂಸ್ಥೆ ಕಪ್ಪು ಪಟ್ಟಿಗೆ ಸೇರಿದ್ದರಿಂದ ಮುಂದಿನ ದಿನಗಳಲ್ಲಿ ಯಾವುದೆ ಕಾರ್ಯಕ್ರಮ ಹಾಗೂ ಟೆಂಡರ್​ಗಳನ್ನು ಸಂಸ್ಥೆಗೆ ನೀಡದಂತೆ ಬಿಬಿಎಂಪಿ ಸೂಚಿಸಿದೆ.

ದೂರು ನೀಡಿದ್ದ ಬಿಬಿಎಂಪಿ

ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುವೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಿರುದ್ಧ ಹಲಸೂರುಗೇಟ್‌ ಮತ್ತು ಕಾಡುಗೋಡಿ ಪೊಲೀಸ್‌ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. ಮತದಾರರ ಪಟ್ಟಿವಿಶೇಷ ಪರಿಷ್ಕರಣೆ 2023 ಕಾರ್ಯಚಟುವಟಿಕೆಗಳ ಕುರಿತು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರ್ವಹಿಸಲು ಚಿಲುಮೆ ಶೈಕ್ಷಣಿಕ ಸಾಂಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಷರತ್ತುಬದ್ಧ ಅನುಮತಿಯನ್ನು ಬಿಬಿಎಂಪಿ ನೀಡಿತ್ತು.

ಇದನ್ನೂ ಓದಿ: ವೋಟರ್​ ಐಡಿ ಅಕ್ರಮ ಪ್ರಕರಣ: ಇಬ್ಬರು ಐಎಎಸ್​​ ಅಧಿಕಾರಿಗಳ ಅಮಾನತು ಆದೇಶ ವಾಪಸ್

ಈ ಸಂಸ್ಥೆಯ ವಿರುದ್ಧ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿರುವ ಬಗ್ಗೆ ದೂರು ಬಂದಿದ್ದು ಷರತ್ತು ಉಲ್ಲಂಘಿಸಿರುವುದನ್ನು ಪರಿಗಣಿಸಿ ಅನುಮತಿ ಪತ್ರವನ್ನು ರದ್ದುಪಡಿಸಲಾಗಿದೆ. ಜೊತೆಗೆ ಈ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರು ಹಲಸೂರುಗೇಟ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಮತದಾರರ ಪಟ್ಟಿ ಪರಿಷ್ಕರಣೆಗೆ 12 ಕೆಎಎಸ್​ ಅಧಿಕಾರಿಗಳ ನೇಮಕ

ವೋಟರ್​ ಐಡಿ ಪರಿಷ್ಕರಣೆ ಅಕ್ರಮದಲ್ಲಿ  ಮತದಾರರ ಪಟ್ಟಿಯಿಂದ ಮತದಾರರ ಹೆಸರು ತೆಗೆದುಹಾಕಿರುವ ಮತ್ತು ಸೇರ್ಪಡಿಸಿರುವ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಈ ಸಂಬಂಧ ಈಗಾಗಲೇ 12 ಕೆಎಎಸ್​ ಅಧಿಕಾರಿಗಳನ್ನು  ನೇಮಕ ಮಾಡಲಾಗಿದೆ. ಅವರು ಮತದಾರರ ಮಾಹಿತಿ, ಪಟ್ಟಿಯಲ್ಲಿ ಹೆಸರು ಸೇರ್ಪಡೆ ಸೇರಿದಂತೆ ತೆಗೆದುಹಾಕಿರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಟಿವಿ9ಗೆ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:10 pm, Tue, 27 December 22