Voter ID Scam: ಚಿಲುಮೆ ಸಂಸ್ಥೆಯಿಂದ ಬಿಬಿಎಂಪಿ ಅಧಿಕಾರಿಗಳು ಲಕ್ಷಾಂತರ ಹಣ ಪಡೆದಿರುವ ಆರೋಪ
ವೋಟರ್ ಐಡಿ ಪರಿಷ್ಕರಣೆಗೆ ಅನುಮತಿ ನೀಡಲು ಬಿಬಿಎಂಪಿ ಅಧಿಕಾರಿಗಳು ಚಿಲುಮೆ ಸಂಸ್ಥೆಯಿಂದ ಲಕ್ಷಾಂತರ ಹಣ ಪಡೆದಿರುವ ಆರೋಪ ಕೇಳಿಬಂದಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ವೋಟರ್ ಐಡಿ ಪರಿಷ್ಕರಣೆಯಲ್ಲಿ (Voter ID Scam) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ವೋಟರ್ ಐಡಿ ಪರಿಷ್ಕರಣೆಗೆ ಅನುಮತಿ ನೀಡಲು ಬಿಬಿಎಂಪಿ (BBMP) ಅಧಿಕಾರಿಗಳು ಚಿಲುಮೆ ಸಂಸ್ಥೆಯಿಂದ ಲಕ್ಷಾಂತರ ಹಣ ಪಡೆದಿರುವ ಆರೋಪ ಕೇಳಿಬಂದಿದೆ. ಹಣ ಪಾವತಿ ಮಾಡಿದ ಮೇಲೆಯೇ ಬಿಬಿಎಂಪಿ ಅಧಿಕಾರಿಗಳು ಅನುಮತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಚಿಲುಮೆ ಸಂಸ್ಥೆ ಅನುಮತಿ ಪಡೆದು ಮೂರೇ ತಿಂಗಳಲ್ಲಿ ಮತದಾರರ ಸಂಪೂರ್ಣ ಮಾಹಿತಿ ಸಂಗ್ರಹಿಸಿತ್ತು. ಮಾಹಿತಿ ಸಂಗ್ರಹಿಸಲು ಹಲವು ಸಂಘ ಸಂಸ್ಥೆಗಳಿಗೆ ಹಣ ಪಾವತಿ ಮಾಡಿದೆ. ಚಿಲುಮೆ ಸಂಸ್ಥೆ ಬಿಎಂಪಿ ಚುನಾವಣೆ ಬರ್ತಿದೆ ಎಂಬ ಕಾರಣಕ್ಕೆ ಐದು ಸಾವಿರ ಸಿಬ್ಬಂದಿಗಳನ್ನು ಸರ್ವೆಗೆ ನೇಮಿಸಿತ್ತು.
ಬಿಬಿಎಂಪಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಚಿಲುಮೆ ಸಂಸ್ಥೆಗೆ ಐಡಿ ಕಾರ್ಡ್ ಹಂಚಿಕೆ
ಬಿಬಿಎಂಪಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಚಿಲುಮೆ ಸಂಸ್ಥೆಗೆ ಐಡಿ ಕಾರ್ಡ್ ಹಂಚಿಕೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಬಯಲಾಗಿದೆ. ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಚಿಲುಮೆ ಸಂಸ್ಥೆಗೆ ಐಡಿ ಕಾರ್ಡ್ ನೀಡಲು ಒತ್ತಡ ಹಾಕಿದ್ದರು. ಚಿಲುಮೆ ಸಂಸ್ಥೆಯ ಜೊತೆಗೆ ಬಿಬಿಎಂಪಿ ಹಿರಿಯ ಅಧಿಕಾರಿಗಳ ವೈಯಕ್ತಿಕ ವ್ಯವಹಾರದ ಹಿನ್ನೆಲ್ಲೆ ಆರ್ಒಗಳ ಮೇಲೆ ಹಿರಿಯ ಅಧಿಕಾರಿಗಳು ಒತ್ತಡ ಹಾಕಿದ್ದರು. ಐಡಿ ಕಾರ್ಡ್ ವಿತರಣೆ ಮಾಡಲು ಆರ್ಒಗಳಿಗೆ ಅಧಿಕಾರಿಗಳು ಮೌಖಿಕ ಸೂಚನೆ ನೀಡಿದರು. ಹೀಗಾಗಿ ಆರ್ಒಗಳು ಐಡಿ ಕಾರ್ಡ್ ವಿತರಣೆ ಮಾಡಿದ್ದಾರೆಂದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:23 am, Sat, 26 November 22