ಬೆಂಗಳೂರು: ಮಹಾನಗರ ಪಾಲಿಕೆಗಳ ಫಲಿತಾಂಶಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಮಾಜಿ ಸಿಎಂ ಯಡಿಯೂರಪ್ಪ ಹಾಕಿಕೊಟ್ಟ ಮಾರ್ಗದರ್ಶನ ಇದು. ಮತದಾರರು ಸಿಎಂ ಬೊಮ್ಮಾಯಿ ಸರ್ಕಾರವನ್ನು ಒಪ್ಪಿದ್ದಾರೆ. ಕಾಂಗ್ರೆಸ್ ನಾಯಕರನ್ನು ಮನೆಗೆ ಹೋಗಿ ಎಂದಿದ್ದಾರೆ. ಕಾಂಗ್ರೆಸ್‌ಗೆ ಇದಕ್ಕಿಂತ ಹೀನಾಯ ಸೋಲು ಆಗಲಿದೆ. ವೀರಶೈವ ಲಿಂಗಾಯತ ಎಂದು ಒಡೆಯುವಂತಹ ಕೆಲಸಗಳನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.
ಬಳಿಕ ಮಳೆಗಾಲದ ಅನಾಹುತಗಳನ್ನು ತಪ್ಪಿಸುವ ಕುರಿತ ಸಭೆ ವಿಚಾರವಾಗಿ ಮಾತನಾಡಿದ ಅವರು ರಸ್ತೆ ಸ್ಥಿತಿಗತಿ ಹಾಗೂ ಮುನ್ನಚ್ಚರಿಕೆಗಳ ಕುರಿತು ಸಭೆ ನಡೆಸಲಾಗುತ್ತದೆ. ಈ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಒಳ ಜಗಳ ಬಯಲಾಗಿದೆ:ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಹಾನಗರ ಪಾಲಿಕೆಗಳ ಫಲಿತಾಂಶಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಪಾಲಿಕೆ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನ ಬಿಜೆಪಿ ಪಡೆದುಕೊಂಡಿದೆ. ಎಲ್ಲ ಮತದಾರರಿಗೂ ಬಿಜೆಪಿ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಯಡಿಯೂರಪ್ಪ ಮಾರ್ಗದರ್ಶನ, ಬೊಮ್ಮಯಿ ನಾಯಕತ್ವದಲ್ಲಿ ನಾವು ಚುನಾವಣೆ ಎದುರಿಸಿದ್ದೇವೆ. ಬೆಳಗಾವಿಯಲ್ಲಿ ಬಿಜೆಪಿ ಅಭೂತಪೂರ್ವ ಜಯಭೇರಿ ಬಾರಿಸಿದೆ. ಬೆಳಗಾವಿಯಲ್ಲಿ ಚಿಹ್ನೆ ಅಡಿ ಮೊದಲ ಬಾರಿ ಚುನಾವಣೆ ಎದುರಿಸಿದ್ದೆವು. ಬಿಜೆಪಿಯ ಆಡಳಿತ ಮೆಚ್ಚಿ ಬೆಳಗಾವಿಯಲ್ಲಿ ಜನರು ಗೆಲ್ಲಿಸಿದ್ದಾರೆ ಎಂದು ಹೇಳಿದ್ದಾರೆ.
ಹುಬ್ಬಳ್ಳಿ- ಧಾರವಾಡದಲ್ಲಿ ಮೂರನೇ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದೇವೆ. ಕಲಬುರಗಿಯಲ್ಲೂ ಉತ್ತಮ ಫಲಿತಾಂಶ ಬಂದಿದೆ. ಪ್ರಧಾನಿ ಮೋದಿಯವರ ಜನಪ್ರಿಯ ಕಾರ್ಯಕ್ರಮ, ಬೊಮ್ಮಾಯಿ ಅವರ ಆಡಳಿತವನ್ನು ಜನ ಮೆಚ್ಚಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಲೆ ಇದೆ ಅನ್ನೋದು ಮತ್ತೆ ಖಚಿತವಾಗಿದೆ. ಕಾಂಗ್ರೆಸ್ ಟೀಕೆ ಮಾಡುತ್ತಿದ್ದರು. ಆದರೆ, ಜನರು ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಿದ್ದರಾಮಯ್ಯ ಚುನಾವಣೆ ಕಣಕ್ಕೆ ಬರಲಿಲ್ಲ, ಡಿ ಕೆ ಶಿವಕುಮಾರ್ ವಿಫಲ ಅಧ್ಯಕ್ಷರು ಅಂತ ತೋರಿಸಲು ಬರಲಿಲ್ಲ. ಅವರು ಸಿಎಂ ಸ್ಥಾನಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ. ಹೀಗಾಗಿ ಡಿ ಕೆ ಶಿವಕುಮಾರ್ ವಿಫಲ ರಾಜ್ಯಾಧ್ಯಕ್ಷ ಎಂದು ತೋರಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಒಳ ಜಗಳ ಬಯಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ವ್ಯಂಗ್ಯ ಮಾಡಿದ್ದಾರೆ.
ಇದನ್ನೂ ಓದಿ: ಬಿಜೆಪಿಯವರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ; ಆದರೂ ಮಹಾನಗರ ಪಾಲಿಕೆ ಫಲಿತಾಂಶ ಸಮಾಧಾನ ತಂದಿದೆ: ಡಿ.ಕೆ.ಶಿವಕುಮಾರ್
ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಸಿಹಿ; ಕಲಬುರಗಿಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಖುಷಿ