ಎಡವದೆ ನಡೆದುಕೊಂಡು ಹೋಗಿ, ನನ್ನ ಹೆಸರು ಹೇಳದೆ ಭಾಷಣ ಮಾಡಿ: ಮಾಜಿ, ಹಾಲಿ ಸಿಎಂಗೆ ಸಿದ್ದರಾಮಯ್ಯ ಸವಾಲ್
ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಸಮರ ಸಾರಿದ್ದು, ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಹಾಲಿ ಸಿಎಂ ಬೊಮ್ಮಾಯಿಗೆ ಸವಾಲು ಹಾಕಿದ್ದಾರೆ.
ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಸಮರ ಸಾರಿದ್ದು, ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಹಾಲಿ ಸಿಎಂ ಬೊಮ್ಮಾಯಿಗೆ ಎರಡೇ ಎರಡು ಸವಾಲು ಹಾಕಿದ್ದಾರೆ. ಕಾರು ಬಿಟ್ಟು ಎಡವದೆ 4 ಕಿ.ಮೀ. ನಡೆದುಕೊಂಡು ಹೋಗಿ. ಸಿದ್ದರಾಮಯ್ಯ ಎಂಬ ಹೆಸರೇಳದೆ 5 ನಿಮಿಷ ಭಾಷಣ ಮಾಡಿ ಎಂದು ಸವಾಲು ಹಾಕಿದ್ದಾರೆ. ಬೊಮ್ಮಾಯಿಗೆ ಏಕಾಂಗಿಯಾಗಿ ಯಾತ್ರೆಗೆ ಹೊರಡುವ ಧೈರ್ಯ ಇಲ್ಲ. ಸಿಎಂ ಬೊಮ್ಮಾಯಿಗೆ ಜನ ಕಲ್ಲು ಹೊಡೆಯುತ್ತಾರೆಂಬ ಭಯ ಇದೆ. ಅದಕ್ಕಾಗಿ ರಕ್ಷಣೆಗೆ ಜೊತೆಯಲ್ಲಿ BSY ಕರೆದುಕೊಂಡು ಬಂದಿದ್ದಾರೆ. #ಬಡಾಯಿ ಬೊಮ್ಮಾಯಿ. ಸಿಎಂ ಸ್ಥಾನವನ್ನು ಕಿತ್ತುಕೊಂಡಾಗ ಬಿಎಸ್ವೈ ಕಣ್ಣೀರು ಹಾಕಿದ್ದರು. ಬಹಿರಂಗವಾಗಿ ಬಿಎಸ್ವೈ ಕಣ್ಣೀರು ಹಾಕಿದ್ದನ್ನು ಜನ ನೋಡಿದ್ದಾರೆ ಎಂದು ಟ್ವೀಟ್ ಮೂಲಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.
ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು. ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ @BSBommai ಅವರೊಬ್ಬ ‘ಎರಡುವರೆ ಸಾವಿರ ಕೋಟಿ ರೂಪಾಯಿಯ #PayCM’’ ಹೈಕಮಾಂಡ್ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ. ತಪ್ಪಿದರೆ ಮನೆಗೆ ತಿರುಗೇಟು ನೀಡಿದ್ದಾರೆ.
ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮಾಜಿ ಮುಖ್ಯಮಂತ್ರಿ @BSYBJP ಮತ್ತು ಹಾಲಿ ಮುಖ್ಯಮಂತ್ರಿ @BSBommai ಅವರಿಗೆ ನನ್ನ ಎರಡೇ ಎರಡು ಸವಾಲು.. 1. ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ. 2. ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ. 1/7#ಬಡಾಯಿಬೊಮ್ಮಾಯಿ
— Siddaramaiah (@siddaramaiah) October 12, 2022
ಪ್ರಧಾನಿ ಮೋದಿ ಪುಕ್ಕಲು ಗುರು: ಸಿದ್ಧರಾಮಯ್ಯ
ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ @BSYBJP ಅವರೇ, ನಿಮ್ಮ @narendramodi ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ. ಪಾಪ, @BSYBJP ಅವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು.
ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ @BSYBJP ಅವರೇ, ನಿಮ್ಮ @narendramodi ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ. 5/7#ಬಡಾಯಿಬೊಮ್ಮಾಯಿ
— Siddaramaiah (@siddaramaiah) October 12, 2022
ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ @BJP4India ಯ ಡಿ.ಎನ್.ಎ ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:25 pm, Wed, 12 October 22