AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧಾರ; ಟಿವಿ9ಗೆ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಆದಿ ಮಾಹಿತಿ

ವಿವಾದಿತ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲು ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಹಿಂದೂ ಸಂಘಟನೆಗಳ ಸಾಲು ಸಾಲು ಮನವಿ ಬೆನ್ನಲೆ ವಕ್ಫ್ ಬೋರ್ಡ್ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧಾರ; ಟಿವಿ9ಗೆ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಆದಿ ಮಾಹಿತಿ
ಚಾಮರಾಜಪೇಟೆ ಈದ್ಗಾ ಮೈದಾನ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 09, 2022 | 10:55 AM

Share

ಬೆಂಗಳೂರು: ಹಿಜಾಬ್​ನಿಂದ ಆರಂಭಗೊಂಡಿರುವ ವಿವಾದ ಇದೀಗ ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದ ವರೆಗೆ ಬಂದು ತಲುಪಿದೆ. ಈದ್ಗಾ ಮೈದಾನ (Idgah Maidan) ಯಾರಿಗೆ ಸೇರಿದ್ದು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು (Independent Day) ಈದ್ಗಾ ಮೈದಾನದಲ್ಲಿ ಆಚರಿಸಲು ನಿರ್ಧಾರ ಮಾಡಲಾಗಿದೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಆದಿ ಟಿವಿ9ಗೆ ಮಾಹಿತಿ ನೀಡಿದ್ದಾರೆ. ವಿವಾದಿತ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲು ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಹಿಂದೂ ಸಂಘಟನೆಗಳ ಸಾಲು ಸಾಲು ಮನವಿ ಬೆನ್ನಲೆ ವಕ್ಫ್ ಬೋರ್ಡ್ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ನಿನ್ನೆ ಎಲ್ಲಾ ಮುಸ್ಲಿಂ‌ ಮುಖಂಡರ ಜೊತೆಗೆ ಚರ್ಚೆ ಮಾಡಲಾಗಿದೆ. ನಮ್ಮ ಜಾಗದಲ್ಲಿ ಬೇರೆಯವರು ಬಂದು ಕಾರ್ಯಕ್ರಮ ಮಾಡೋದು ಸರಿಯಲ್ಲ. ಹೀಗಾಗಿ ನಾವೇ ಈ ಬಾರಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡುತ್ತೇವೆ. ಸ್ಥಳೀಯ ಶಾಸಕ ಜಮೀರ್ ಅಹ್ಮದ್ ಕೂಡಾ ಬರುತ್ತಾರೆ. ಬಿಬಿಎಂಪಿಯರು ಬರೀ‌ ಮಾಧ್ಯಮದಲ್ಲಿ ಚರ್ಚೆ ಮಾಡುತ್ತಿದ್ದಾರೆ. ಬಿಬಿಎಂಪಿ ಸರ್ಕಾರದ ಸಂಸ್ಥೆ, ವಕ್ಫ್ ಬೋರ್ಡ್ ಕೂಡಾ ಸರ್ಕಾರದ್ದೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ‌ ಸಆದಿ ಅಭಿಪ್ರಾಯಪಟ್ಟರು.

ಇದನ್ನೂ ಓದಿ: Viral Video : ಕ್ಲಿನಿಕ್ ಹೊಕ್ಕ ತಾಯಿಕೋತಿ, ಚಿಕಿತ್ಸೆ ನೀಡಿದ ಡಾ. ಅಹಮ್ಮದ್

ಇದನ್ನೂ ಓದಿ
Image
ಸಾರಿಗೆ ಸಚಿವ ಶ್ರೀರಾಮುಲು ಅಂಜನಾದ್ರಿ ಬೆಟ್ಟ ಹತ್ತಿ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದರು
Image
Babar Azam: ವಿರಾಟ್ ಕೊಹ್ಲಿಯ ವಿಶ್ವದಾಖಲೆ ಮುರಿದ ಬಾಬರ್ ಅಜಾಮ್: ಈ ಸಾಧನೆ ಮಾಡಿದ ಮೊದಲ ಬ್ಯಾಟರ್
Image
ಗ್ರಾಮ ಪಂಚಾಯತ ಚುನಾವಣಾ ದ್ವೇಷ ಹಿನ್ನೆಲೆ: ಮನೆಗೆ ನುಗ್ಗಿ ವ್ಯಕ್ತಿಯ ಮೇಲೆ ಶಾಸಕರ ಬೆಂಬಲಿಗರಿಂದ ಹಲ್ಲೆ
Image
Monkeypox: ಸಮುದಾಯಕ್ಕೆ ಹರಡುತ್ತಿದೆ ಮಂಕಿಪಾಕ್ಸ್, ಮಕ್ಕಳು, ಗರ್ಭಿಣಿಯರಿಗೆ ಅಪಾಯ: WHO

ಮತ್ತೊಂದು ವಿವಾದ ಬಹಿರಂಗ: ಚಾಮರಾಜಪೇಟೆಯ ಈದ್ಗಾ ಮೈದಾನದ ವಿವಾದ ಇಂದು ನಿನ್ನೆಯದಲ್ಲ. ಕಳೆದ 14 ವರ್ಷದ ಹಿಂದೆಯೇ ಅಂದರೆ 2006ರಲ್ಲಿ ಬಗ್ಗೆ ಮಹತ್ವದ ಸಂಧಾನ ಸಭೆ ನಡೆದಿದೆ. ಜಮೀರ್ ಅಹ್ಮದ್ ಖಾನ್ ಮೊದಲ ಬಾರಿಗೆ ಶಾಸಕರಾಗಿದ್ದಾಗ, ಚಾಮರಾಜಪೇಟೆ ಮೈದಾನದ ಟವರ್ ಪರಿಶೀಲನೆ ಮಾಡಿದ್ದಾರೆ. ಆ ಟವರ್​ನಲ್ಲಿ ಮಳೆಯಿಂದ ಕ್ರಾಕ್ಸ್ ಆಗಿರುವುದು ಪತ್ತೆಯಾಗಿತ್ತು. ಆ ಟವರ್​ನನ್ನು ಮತ್ತೆ ರಿನೋವೇಶನ್ ಮಾಡಲು ಜಮೀರ್ ಅಹ್ಮದ್ ಖಾನ್ ಚಿಂತನೆ ಮಾಡುತ್ತಾರೆ. ಇದಕ್ಕೆ ಮಾಜಿ ಶಾಸಕಿ ಪ್ರಮೀಳಾ ನೇಸರ್ಗಿ ವಿರೋಧ ವ್ಯಕ್ತಪಡಿಸಿದ್ದರು. ಇದು ಮೊದಲು ಯಾರಿಗೆ ಸೇರಿದ ಮೈದಾನ ಎಂದು ನಿರ್ಧಾರ ಆಗಲಿ ಅಂತಾ ನೇಸರ್ಗಿ ಪಟ್ಟು ಹಿಡಿದಿದ್ದರು.

ಎಸಿಪಿ ಕಚೇರಿಯಲ್ಲಿ, ಆಗೀನ ಡಿಸಿಪಿ ಆಗಿದ್ದ ಅಲೋಕ್ ಕುಮಾರ್ ನೇತೃತ್ವದಲ್ಲಿ ಒಂದು ಸಂಧಾನ ಸಭೆ ನಡೆದಿತ್ತು. ಈ ಸಭೆಯಲ್ಲಿ ಪ್ರಮೀಳಾ ನೇಸರ್ಗಿ, ಜಮೀರ್, ಆರ್.ವಿ ದೇವರಾಜ್, ಇಬ್ಬರು ಮಾಜಿ ಕಾರ್ಪೋರೇಟರ್ ಹಾಗೂ ಹಲವರು ಸದಸ್ಯರು ಭಾಗಿಯಾಗಿದ್ದರು. ಇವರೆಲ್ಲರೂ ಸೇರಿ ಒಂದು ಸಂಧಾನ ಮಾಡಿಕೊಳ್ಳುತ್ತಾರೆ. ಈದ್ಗಾ ಟವರ್​​ನಲ್ಲಿ ಕ್ರಾಕ್ ಬಿಟ್ಟಿರುವುದನ್ನು ಸರಿ ಮಾಡಿಕೊಳ್ಳಿ. ಆದರೆ ನಮಗೆ ದಸರಾ, ದೀಪಾವಳಿ, ಗಣೇಶೋತ್ಸವ ಮಾಡಲು ಅವಕಾಶ ಕೊಡಬೇಕು ಅಂತಾ ಅಗ್ರಿಮೆಂಟ್ ಆಗಿದೆ. 2006 ರಲ್ಲಿ ಆಗಿರುವ ಅಗ್ರಿಮೆಂಟ್ ಇದು. ಈ ರೀತಿ ಅಗ್ರಿಮೆಂಟ್ ಮಾಡಿಕೊಂಡ ನಂತರ ಜಮೀರ್ ಅಹ್ಮದ್ ಖಾನ್ ಉಲ್ಟಾ ಹೊಡೆದಿದ್ದಾರೆ ಅಂತಾ ವಿಶ್ವ ಸನಾತನ ಪರಿಷತ್ತು ಆರೋಪ ಮಾಡಿದೆ.

Published On - 10:49 am, Thu, 9 June 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್