ಶಾಲಾ ಮಕ್ಕಳಲ್ಲಿ ಹೆಚ್ಚಿದ ಆರೋಗ್ಯ ಸಮಸ್ಯೆ: ಜಂಕ್​​ ಫುಡ್​​​ ವಿರುದ್ಧ ಸಮರ ಸಾರಿದ ಆಹಾರ ಸುರಕ್ಷಿತ ಇಲಾಖೆ

ಮಕ್ಕಳಲ್ಲಿ ಬೊಜ್ಜು ಮತ್ತು ಮಧುಮೇಹದಂತಹ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಆಹಾರ ಸುರಕ್ಷತೆ ಇಲಾಖೆಯು ಶಾಲಾ-ಕಾಲೇಜುಗಳ ಕ್ಯಾಂಟೀನ್‌ಗಳು ಸೇರಿ ಶಿಕ್ಷಣ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಂಕ್ ಫುಡ್ ಮಾರಾಟಕ್ಕೆ ಕಡಿವಾಣ ಹಾಕಲು ಹೊಸ ಮಾರ್ಗಸೂಚಿ ಪ್ರಕಟಿಸಲು ಸಿದ್ಧತೆ ನಡೆಸಿದೆ. ಆ ಕುರಿತ ಮಾಹಿತಿ ಇಲ್ಲಿದೆ.

ಶಾಲಾ ಮಕ್ಕಳಲ್ಲಿ ಹೆಚ್ಚಿದ ಆರೋಗ್ಯ ಸಮಸ್ಯೆ: ಜಂಕ್​​ ಫುಡ್​​​ ವಿರುದ್ಧ ಸಮರ ಸಾರಿದ ಆಹಾರ ಸುರಕ್ಷಿತ ಇಲಾಖೆ
ಸಾಂದರ್ಭಿಕ ಚಿತ್ರ
Image Credit source: Getty Images
Edited By:

Updated on: Jul 21, 2026 | 6:36 PM

ಮುಖ್ಯಾಂಶಗಳು

  • ಜಂಕ್​​ ಫುಡ್​​ಗಳಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ
  • ಮತ್ತೆ ಅಲರ್ಟ್​​ ಆಗಿರುವ ಆಹಾರ ಸುರಕ್ಷಿತ ಇಲಾಖೆ
  • ವಿದ್ಯಾರ್ಥಿಗಳ ಆಹಾರದ ಬಗ್ಗೆ ಶೀಘ್ರ ಮಾರ್ಗಸೂಚಿ

ಬೆಂಗಳೂರು, ಜುಲೈ 21: ಅತಿಯಾದ ಜಂಕ್​​ ಫುಡ್​​ಗಳ ಸೇವನೆಯಿಂದ ಇತ್ತೀಚೆಗೆ ಮಕ್ಕಳಲ್ಲಿ ಬೊಜ್ಜು, ಮಧುಮೇಹ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರೋದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಮತ್ತೆ ಅಲರ್ಟ್​​ ಆಗಿರುವ ಆಹಾರ ಸುರಕ್ಷಿತ ಇಲಾಖೆ ಇಂತಹ ಆಹಾರಗಳ ಮಾರಾಟದ ವಿರುದ್ಧ ಮತ್ತೆ ಸಮರ ಸಾರಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮಹತ್ವದ ನಿರ್ಧಾರಕ್ಕೆ ಇಲಾಖೆ ಮುಂದಾಗಿದ್ದು, ತಜ್ಞ ನ್ಯೂಟ್ರಿಷನ್ ವೈದ್ಯರ ಸಲಹೆ ಮೆರೆಗೆ ಶಾಲಾ ವಿದ್ಯಾರ್ಥಿಗಳ ಆಹಾರದ ಬಗ್ಗೆ ಮಾರ್ಗಸೂಚಿ ಪ್ರಕಟಿಸಲು ಸಿದ್ಧತೆ ನಡೆಸಿದೆ.

ಶಾಲೆ, ಕಾಲೇಜು ಹಾಗೂ ವಸತಿ ನಿಯಲಗಳ ಕ್ಯಾಟೀನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಪ್​​ಗಳಿಂದ ಜಂಕ್​​ ಫುಡ್​​ಗಳ ಸ್ಯಾಂಪಲ್​​ ಪಡೆದಿರುವ ಇಲಾಖೆ ಲ್ಯಾಬ್ ವರದಿ ಆಧಿರಿಸಿ ಈ ಬಗ್ಗೆ ಕಡಿವಾಣ ಹಾಕಲು ಮುಂದಾಗಿದೆ. ಆಲೂಗೆಡ್ಡೆ ಚಿಪ್ಸ್, ಫ್ರೆಂಚ್ ಫ್ರೈಸ್, ಬರ್ಗರ್, ಪಿಜ್ಜಾ, ಹಾಟ್‌ಡಾಗ್, ಸೋಡಾ, ಕೋಲ್ಡ್‌ಡ್ರಿಂಕ್ಸ್, ಎನರ್ಜಿ ಡ್ರಿಂಕ್ಸ್, ಚಾಕೊಲೇಟ್, ಡೋನಟ್ಸ್, ಐಸ್‌ಕ್ರೀಮ್, ಕ್ಯಾಂಡಿ, ಪ್ಯಾಕ್ ಮಾಡಿದ ಬಿಸ್ಕತ್ತುಗಳು ಫ್ರೈಡ್ ಸ್ನ್ಯಾಕ್ಸ್, ಫ್ರೈಡ್ ಚಿಕನ್, ಟ್ಯಾಕೋಸ್, ರ‍್ಯಾಪ್ಸ್, ಇನ್‌ಸ್ಟಂಟ್ ನೂಡಲ್ಸ್, ಮ್ಯಾಗಿ ಸೇರಿದ್ದಂತೆ ಜಂಕ್ ಫುಡ್​​ಗಳ ಪಟ್ಟಿಯನ್ನೇ ರೆಡಿ ಮಾಡಿದೆ. ಮಕ್ಕಳಲ್ಲಿನ ಒಬೆಸಿಟಿ, ಫ್ಯಾಟಿ ಲಿವರ್​​ನಂತಹ ಆರೋಗ್ಯ ಸಮಸ್ಯೆಗಳ ಹೆಚ್ಚಳಕ್ಕೆ ಬ್ರೇಕ್​​ ಹಾಕುವನಿಟ್ಟಿನಲ್ಲಿ ಇಂತಹ ಕ್ರಮ ಅನಿವಾರ್ಯ ಎನ್ನಲಾಗಿದೆ.

ಇದನ್ನೂ ಓದಿ:  ಬೆಚ್ಚಗಿನ ನೀರಿಗೆ ಕರಿಮೆಣಸು, ಅರಿಶಿನ ಸೇರಿಸಿ ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ನೋಡಿ!

ಇತ್ತೀಚೆಗೆ ಶಾಲಾ ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ ಗಮನಾರ್ಹವಾಗಿ ಹೆಚ್ಚಾಗಿದ್ದು, 16 ವರ್ಷಕ್ಕಿಂತ ಕಿರಿಯ ಮಕ್ಕಳಲ್ಲಿಯೇ ಅತಿಯಾಗಿ ಕಂಡುಬರುತ್ತಿದೆ. ಬಾಲ್ಯದ ಈ ಬೊಜ್ಜು ಮಕ್ಕಳ ಟೈಪ್-2 ಡಯಾಬಿಟಿಸ್, ಅಧಿಕ ಕೊಲೆಸ್ಟ್ರಾಲ್, ಅಧಿಕ ರಕ್ತದೊತ್ತಡ, ಅಸ್ಥಿಸಂಧಿವಾತ, ಹೃದಯ ಕಾಯಿಲೆ, ಪಾರ್ಶ್ವವಾಯು, ಪಿತ್ತಕೋಶದ ಕಾಯಿಲೆ, ಉಸಿರಾಟದ ತೊಂದರೆ ಸೇರಿದಂತೆ ಕೆಲವು ಕ್ಯಾನ್ಸರ್‌ಗಳ ಅಪಾಯವನ್ನೂ ಉಂಟುಮಾಡಬಹುದು ಎಂದು ತಜ್ಞರು ಕೂಡ ಎಚ್ಚರಿಸಿದ್ದಾರೆ. ಮಕ್ಕಳಿಗೆ ಕರಿದ, ಸಂಸ್ಕರಿತ ಮತ್ತು ಸಕ್ಕರೆಭರಿತ ಆಹಾರಗಳನ್ನೇ ನೀಡುವ ಬದಲು ಪೌಷ್ಠಿಕ ಆಹಾರ ನೀಡುವತ್ತ ಪೋಷಕರು ಹಚ್ಚು ಗಮನ ಹರಿಸಬೇಕೆಂಬ ಸಲಹೆಗಳೂ ವ್ಯಕ್ತವಾಗಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Loading...
Unable to load recommendations.
Follow Us