BBMP Election: ವಾರ್ಡ್ ಪುನರ್ವಿಂಗಡಣೆ ಅನಿವಾರ್ಯ, ಬಿಬಿಎಂಪಿ ಚುನಾವಣೆ ಮುಂದೂಡಿಕೆ ಖಚಿತ

ಕರ್ನಾಟಕ ಸರ್ಕಾರವು ಹೊಸದಾಗಿ ವಾರ್ಡ್ ಪುನರ್ವಿಂಗಡಣೆ ಅನಿವಾರ್ಯವೆಂದು ಅಭಿಪ್ರಾಯಪಟ್ಟಿರುವ ಹಿನ್ನೆಲೆ ಬಿಬಿಎಂಪಿ ಚುನಾವಣೆ ಮುಂದೂಡಿಕೆಯಾಗುವ ಸಾಧ್ಯತೆ ಹೆಚ್ಚು. ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆಯಲ್ಲಿ ಲೋಪಗಳಿವೆ ಅಂತಾ ಎಜೆ ಹೈಕೋರ್ಟ್​​ಗೆ ತಿಳಿಸಿದ್ದಾರೆ.

BBMP Election: ವಾರ್ಡ್ ಪುನರ್ವಿಂಗಡಣೆ ಅನಿವಾರ್ಯ, ಬಿಬಿಎಂಪಿ ಚುನಾವಣೆ ಮುಂದೂಡಿಕೆ ಖಚಿತ
ಹೈಕೋರ್ಟ್, ಬಿಬಿಎಂಪಿ
Follow us
Rakesh Nayak Manchi
|

Updated on: Jun 19, 2023 | 5:44 PM

ಬೆಂಗಳೂರು: ಬಿಬಿಎಂಪಿ (BBMP) ವಾರ್ಡ್ ಪುನರ್ವಿಂಗಡಣೆಯಲ್ಲಿ ಲೋಪಗಳಿರುವುದರಿಂದ ಹೊಸದಾಗಿ ವಾರ್ಡ್ ಪುನರ್ವಿಂಗಡಣೆ ಅನಿವಾರ್ಯ ಎಂಬ ನಿರ್ಧಾರಕ್ಕೆ ಕರ್ನಾಟಕ ಸರ್ಕಾರ ಬಂದಿದೆ. ಈ ಬಗ್ಗೆ ಸರ್ಕಾರದ ಪರ ಎಜೆ ಶಶಿಕಿರಣ್ ಶೆಟ್ಟಿ ಅವರು ಕರ್ನಾಟಕ ಹೈಕೋರ್ಟ್​ಗೆ (Karnataka High Court) ಹೇಳಿಕೆ ನೀಡಿದ್ದು, ಹೊಸದಾಗಿ ವಾರ್ಡ್ ಪುನರ್ವಿಂಗಡಿಸಲು ಕೋರ್ಟ್ 12 ವಾರಗಳ ಕಾಲಾವಕಾಶ ನೀಡಿದೆ. ಹೀಗಾಗಿ ಸದ್ಯಕ್ಕೆ ಬಿಬಿಎಂಪಿ ಚುನಾವಣೆ ನಡೆಯುವುದು ಅನುಮಾನ.

ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆಯಲ್ಲಿ ಲೋಪಗಳಿವೆ, ಲೋಪ ಸರಿಪಡಿಸಿ ಹೊಸದಾಗಿ ವಾರ್ಡ್ ಪುನರ್ವಿಂಗಡಣೆ ಮಾಡಬೇಕಿದೆ. ಹೀಗಾಗಿ ಹೊಸದಾಗಿ ವಾರ್ಡ್ ಪುನರ್ವಿಂಗಡಣೆಗೆ ಕಾಲಾವಕಾಶ ನೀಡುವಂತೆ ಎಜೆ ಶಶಿಕಿರಣ್ ಶೆಟ್ಟಿ ಕೋರಿದ್ದಾರೆ. ವಾದ ಆಲಿಸಿದ ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ.ಎಂ.ಜಿ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠ, ವಾರ್ಡ್ ಪುನರ್​ವಿಂಗಡಣೆಗೆ 12 ವಾರಗಳ ಕಾಲಾವಕಾಶ ನೀಡಿದ ನೀಡಿ ಆದೇಶಿಸಿತು.

ಇದನ್ನೂ ಓದಿ: Land Encroachment: ಹೆಚ್‌ಡಿ ಕುಮಾರಸ್ವಾಮಿ, ಡಿ.ಸಿ.ತಮ್ಮಣ್ಣ ಭೂಕಬಳಿಕೆ ಕೇಸ್‌: ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ತಾಕೀತು

ಬಿಬಿಎಂಪಿ ಚುನಾವಣೆ ನಡೆದು 8 ವರ್ಷಗಳು ತುಂಬುತ್ತಿದೆ. ಬಿಜೆಪಿ ಸರ್ಕಾರವಿದ್ದಾಗ ಪಾಲಿಕೆ ಚುನಾವಣೆಯನ್ನೇ ಗಮನದಲ್ಲಿ ಇಟ್ಟುಕೊಂಡು ವಾರ್ಡ್ ವಿಂಗಡಣೆ ಮಾಡಿದ್ದರು. ಆದರೆ ಇದು ಕ್ರಮಬದ್ಧವಾಗಿಲ್ಲ ಅಂತ ಕಾಂಗ್ರೆಸ್​ ಶಾಸಕರು, ಮಾಜಿ ಕಾರ್ಪೊರೇಟರ್​ಗಳು ಆರೋಪಿಸುತ್ತಿದ್ದರು. ಇದೀಗ, ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ರಾಜ್ಯದ ಚುಕ್ಕಾಣಿ ಹಿಡಿಯುತ್ತಿದ್ದಂತಯೇ ಕಾಂಗ್ರೆಸ್ ನಾಯಕರ ಕಣ್ಣು ಬಿಬಿಎಂಪಿ ಮೇಲೆ ಬಿದ್ದಿದೆ.

ಲೋಕಾಸಭಾ ಚುನಾವಣೆಗೂ ಮುನ್ನ ಪಾಲಿಕೆಯ ಚುನಾವಣೆ ನಡೆಸಿ ಅಧಿಕಾರ ಹಿಡಿಯಲು ಕೈ ನಾಯಕರು ಪ್ಲಾನ್ ಮಾಡಿದ್ದು ಬಿಜೆಪಿಗೆ ಪಾಲಿಕೆಯಲ್ಲಿ ಈ ಬಾರಿ ಠಕ್ಕರ್ ನೀಡಲು ರಣತಂತ್ರ ರೂಪಿಸುತ್ತಿದೆ. ವಾರ್ಡ್ ವಿಗಂಡಣೆ ಹಾಗೂ ಮೀಸಲಾತಿಗೆ ಅಂತ್ಯ ಹಾಡಿ ಅಧಿಕಾರಕ್ಕೇರುವ ಕನಸು ಕಾಣುತ್ತಿದೆ. ಐದು ಗ್ಯಾರಂಟಿಗಳ ಜಾರಿಗೆ ಹೆಜ್ಜೆ ಇಟ್ಟ ಕಾಂಗ್ರೆಸ್ ಸರ್ಕಾರದ ಮೇಲೆ ಜನರ ನಿರೀಕ್ಷೆ ಇದ್ದು, ಇದೇ ಅಲೆಯಲ್ಲಿ ಪಾಲಿಕೆಯನ್ನೂ ಗೆಲ್ಲಬಹುದು ಅಂತ ಕೈಕಲಿಗಳು ಯೋಚಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ