ವಿಡಿಯೋ ನೋಡಿ: ಕ್ಷಣ ಕಾಲ ಆಟೋ ಡ್ರೈವ್ ಆದ ಡಿಕೆ ಶಿವಕುಮಾರ್

ಗಂಗಾಧರ​ ಬ. ಸಾಬೋಜಿ

|

Updated on:Mar 23, 2023 | 9:54 PM

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅವರು ಗುರುವಾರದಂದು ಆಟೋ ಓಡಿಸುವ ಮೂಲಕ ಗಮನ ಸೆಳೆದಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಆಟೋ ಚಾಲಕರ ಜೊತೆಗೆ ಸಂವಾದ ನಡೆಸಿದರು.

ವಿಡಿಯೋ ನೋಡಿ: ಕ್ಷಣ ಕಾಲ ಆಟೋ ಡ್ರೈವ್ ಆದ ಡಿಕೆ ಶಿವಕುಮಾರ್
ಆಟೋ ಓಡಿಸಿದ ಡಿಕೆ ಶಿವಕುಮಾರ್

Follow us on

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar)​ ಅವರು ಗುರುವಾರದಂದು ಆಟೋ ಓಡಿಸುವ (auto-rickshaw) ಮೂಲಕ ಗಮನ ಸೆಳೆದಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಆಟೋ ಚಾಲಕರ ಜೊತೆಗೆ ಸಂವಾದ ನಡೆಸಿದರು. ಈ ವೇಳೆ ಡಿ.ಕೆ ಶಿವಕುಮಾರ್ ಆಟೋ ಚಾಲನೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಇಂದು ನಾನು ಪವಿತ್ರ ಆಟೋ ಚಾಲನೆ ಮಾಡಿದ್ದೇನೆ. ನನ್ನ ಜೀವನದಲ್ಲಿ ಈ ದಿನವನ್ನು ನಾನು ಯಾವತ್ತೂ ಮರೆಯುದಿಲ್ಲ. ನೀವು ಸ್ವಾಭಿಮಾನದ ಬದುಕು ನಡೆಸುತ್ತಿದ್ದೀರಿ. ಈ ದೇಶದ ಜನ ಸೇವಕರು ನೀವು. ಜನ ಎಲ್ಲಿಗೆ ಹೋಗಬೇಕು ಎನ್ನುತ್ತಾರೋ ಅಲ್ಲಿಗೆ ತಲುಪಿಸುವ ಪವಿತ್ರ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಕುಟುಂಬದವನಾಗಿ ಇಲ್ಲಿಗೆ ಬಂದಿದ್ದೇನೆ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ ಡಿ.ಕೆ.ಶಿವಕುಮಾರ್​​ 

ಬಿಜೆಪಿ ನಾಯಕರ ರೀತಿ ನಾವು ಸುಳ್ಳು ಆಶ್ವಾಸನೆ ಕೊಡುವುದಿಲ್ಲ. ಕಳೆದ 3 ವರ್ಷದಿಂದ ಜನ ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಈ ಕೆಟ್ಟ ಆಡಳಿತ ತೊಲಗಲಿ. ಕಾಂಗ್ರೆಸ್ ಸರ್ಕಾರ ಜನಪರವಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಳೆದ ಮೂರು ವರ್ಷಗಳಿಂದ ಜನ ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಯುಗಾದಿ ಸಂದರ್ಭದಲ್ಲಿ ಈ ಕೆಟ್ಟ ಆಡಳಿತ ತೊಲಗಲಿ. ಈ ರೀತಿ ನೀವೂ ಹಾರೈಸಿ ಎಂದು ಹೇಳಿದ್ದರು.

ಇದನ್ನೂ ಓದಿ: ಎಚ್​ಡಿ ಕುಮಾರಸ್ವಾಮಿಯಂತೆ ಅಮಾವಾಸ್ಯೆ ದಿನ ಕಾಲಭೈರವನಿಗೆ ಮೊರೆ ಹೋದ ಕೆಪಿಸಿಸಿ ಅಧ್ಯಕ್ಷ: ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್?

ಕಾಂಗ್ರೆಸ್ ಸರ್ಕಾರ ಜನಪರವಾಗಿದೆ. ರಾಜ್ಯದ ಜನರಿಗೆ ಹಲವು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವೆ. ಬಿಜೆಪಿಯವರ ತರಹ ನಾವು ಸುಳ್ಳು ಆಶ್ವಾಸನೆ ಕೊಡಲ್ಲ. ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ಕೊಡುತ್ತೇವೆ ಎಂದಿದ್ದರು. ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದರು, ಏನಾದ್ರೂ ಮಾಡಿದ್ರಾ ಎಂದು ಪ್ರಶ್ನೆ ಮಾಡಿದ್ದರು. ಆದ್ರೆ ನಾವು ಕೊಟ್ಟ ಭರವಸೆಗಳನ್ನು ಈಡೇರಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿಯೇ ತೀರುತ್ತೇವೆ ಎಂದು ಡಿ.ಕೆ.ಶಿವಕುಮಾರ್​​ ಹೇಳಿದ್ದರು.

2-3 ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಮಾರ್ಚ್ 22 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ಆದರೆ ಹಬ್ಬ ಹಾಗೂ ಕೆಲವು ಕಾರಣಾಂತರಗಳಿಂದ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿಲ್ಲ. ಈ ಸಂಬಂಧ ಮಾತನಾಡಿರುವ ಡಿಕೆ ಶಿವಕುಮಾರ್ 2-3 ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ. ಹಬ್ಬಕ್ಕಾಗಿ ಎಐಸಿಸಿ ಅಧ್ಯಕ್ಷ ಖರ್ಗೆ ಬೆಂಗಳೂರಿಗೆ ಬಂದಿದ್ದಾರೆ. ಹೀಗಾಗಿ 2-3 ದಿನದಲ್ಲಿ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಆಗುತ್ತೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದರು.

ಮತ್ತೊಂದೆಡೆ ಈ ಬಗ್ಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ನನಗೆ ಗೊತ್ತಿಲ್ಲ. ವೇಣುಗೋಪಾಲ್ ಯಾವಾಗ ಪಟ್ಟಿ ಬಿಡುಗಡೆ ಮಾಡುತ್ತಾರೆ ಗೊತ್ತಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ

Related Stories

Most Read Stories

Click on your DTH Provider to Add TV9 Kannada