Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Traffic: ಬಿಎಂಟಿಸಿ ಬಸ್ ಟ್ರಾಫಿಕ್​ನಲ್ಲಿ ಸಿಲುಕಿದಾಗಲೇ ಊಟ ಮುಗಿಸಿದ ಚಾಲಕ; ವಿಡಿಯೋ ವೈರಲ್

ಟ್ರಾಫಿಕ್ ಜಾಮ್​​ನಲ್ಲಿ ಸಿಲುಕಿ ಪ್ರಯಾಣ ಮುಂದುವರಿಸಲು ಕಾಯುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ವೈರಲ್ ಆಗಿದೆ.

Bangalore Traffic: ಬಿಎಂಟಿಸಿ ಬಸ್ ಟ್ರಾಫಿಕ್​ನಲ್ಲಿ ಸಿಲುಕಿದಾಗಲೇ ಊಟ ಮುಗಿಸಿದ ಚಾಲಕ; ವಿಡಿಯೋ ವೈರಲ್
ಬಿಎಂಟಿಸಿ ಬಸ್ ಟ್ರಾಫಿಕ್​ನಲ್ಲಿ ಸಿಲುಕಿದಾಗಲೇ ಊಟ ಮುಗಿಸಿದ ಚಾಲಕ; ವಿಡಿಯೋ ವೈರಲ್
Follow us
Ganapathi Sharma
|

Updated on: May 30, 2023 | 7:35 PM

ಬೆಂಗಳೂರು: ಟ್ರಾಫಿಕ್ ಜಾಮ್​​ನಲ್ಲಿ (Traffic Jam) ಸಿಲುಕಿ ಪ್ರಯಾಣ ಮುಂದುವರಿಸಲು ಕಾಯುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ (BMTC Bus) ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ವೈರಲ್ ಆಗಿದೆ. ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಸೆರೆಹಿಡಿದ ವಿಡಿಯೋವನ್ನು ಸಾಯಿಚಂದ್ ಶಬರೀಶ್ ಎಂಬ ವ್ಯಕ್ತಿ ಇನ್‌ಸ್ಟಾಗ್ರಾಮ್​​ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಮೇ 2 ರಂದು ‘ಬೆಂಗಳೂರಿನ ಪೀಕ್ ಟ್ರಾಫಿಕ್ ಮೊಮೆಂಟ್’ ಎಂಬ ಶೀರ್ಷಿಕೆಯೊಂದಿಗೆ ಅಪ್‌ಲೋಡ್ ಮಾಡಲಾದ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ.

ಇದಕ್ಕೆ ಹಲವಾರು ನೆಟಿಜನ್‌ಗಳು ಪ್ರತಿಕ್ರಿಯಿಸಿದ್ದು, ಬೆಂಗಳೂರು ಟ್ರಾಫಿಕ್‌ನಲ್ಲಿ ತಾವು ಪಟ್ಟ ಪಾಡನ್ನು ವಿವರಿಸಿದ್ದಾರೆ ಮತ್ತು ಅನೇಕರು ಚಾಲಕನ ಸ್ಥಿತಿಯ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.

ಇದು ದುಃಖಕರವಾಗಿದೆ. ಟ್ರಾಫಿಕ್‌ನಿಂದಾಗಿ ಚಾಲಕನಿಗೆ ಶಾಂತಿಯುತವಾಗಿ ಕುಳಿತು ಊಟ ಮಾಡಲು ಸಹ ಸಮಯವಿಲ್ಲ ಎಂದು ವ್ಯಕ್ತಿಯೊಬ್ಬರು ಪೋಸ್ಟ್‌ಗೆ ಕಾಮೆಂಟ್ ಮಾಡಿದ್ದಾರೆ.

‘ಅವರು ಸಮಯ ನಿರ್ವಹಣೆಯನ್ನು ಬೇರೆಯವರಿಗಿಂತ ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ’ ಎಂದು ಇನ್ನೊಬ್ಬ ವ್ಯಕ್ತಿ ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Bengaluru Traffic: ಟ್ರಾಫಿಕ್​ನಲ್ಲೇ ಅತಿಹೆಚ್ಚು ಸಮಯ; ನಿಧಾನಗತಿ ನಗರಗಳ ಸಾಲಿನಲ್ಲಿ ಬೆಂಗಳೂರು

‘ಟ್ರಾಫಿಕ್‌ನಲ್ಲಿ ಜನರು ಚಲನಚಿತ್ರಗಳನ್ನು ಮುಗಿಸುವುದನ್ನು ನಾನು ನೋಡಿದ್ದೇನೆ’ ಎಂದು ಇನ್ನೊಬ್ಬರು ಬೆಂಗಳೂರು ಟ್ರಾಫಿಕ್ ಕುರಿತು ಪ್ರತಿಕ್ರಿಯಿಸಿದ್ದಾರೆ.

ಡಚ್ ಲೊಕೇಶನ್ ಟೆಕ್ನಾಲಜಿ ಸಂಸ್ಥೆಯಾದ TomTom 2023 ರ ಫೆಬ್ರವರಿಯಲ್ಲಿ ನಡೆಸಿದ್ದ ಅಧ್ಯಯನದ ಪ್ರಕಾರ, ಬೆಂಗಳೂರನಲ್ಲಿ ವಾಹನ ಚಾಲಕರು ವರ್ಷಕ್ಕೆ ಸರಾಸರಿ 260 ಗಂಟೆಗಳ ಕಾಲ ನಗರದಲ್ಲಿ ಚಾಲನೆ ಅಥವಾ ಪ್ರಯಾಣ ಮಾಡಿದರೆ ಈ ಪೈಕಿ 134 ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?