ಬೆಂಗಳೂರು: ಟ್ರಾಫಿಕ್ ಜಾಮ್ನಲ್ಲಿ (Traffic Jam) ಸಿಲುಕಿ ಪ್ರಯಾಣ ಮುಂದುವರಿಸಲು ಕಾಯುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ (BMTC Bus) ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ವೈರಲ್ ಆಗಿದೆ. ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಸೆರೆಹಿಡಿದ ವಿಡಿಯೋವನ್ನು ಸಾಯಿಚಂದ್ ಶಬರೀಶ್ ಎಂಬ ವ್ಯಕ್ತಿ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಮೇ 2 ರಂದು ‘ಬೆಂಗಳೂರಿನ ಪೀಕ್ ಟ್ರಾಫಿಕ್ ಮೊಮೆಂಟ್’ ಎಂಬ ಶೀರ್ಷಿಕೆಯೊಂದಿಗೆ ಅಪ್‌ಲೋಡ್ ಮಾಡಲಾದ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ.
ಇದಕ್ಕೆ ಹಲವಾರು ನೆಟಿಜನ್‌ಗಳು ಪ್ರತಿಕ್ರಿಯಿಸಿದ್ದು, ಬೆಂಗಳೂರು ಟ್ರಾಫಿಕ್‌ನಲ್ಲಿ ತಾವು ಪಟ್ಟ ಪಾಡನ್ನು ವಿವರಿಸಿದ್ದಾರೆ ಮತ್ತು ಅನೇಕರು ಚಾಲಕನ ಸ್ಥಿತಿಯ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.
ಇದು ದುಃಖಕರವಾಗಿದೆ. ಟ್ರಾಫಿಕ್‌ನಿಂದಾಗಿ ಚಾಲಕನಿಗೆ ಶಾಂತಿಯುತವಾಗಿ ಕುಳಿತು ಊಟ ಮಾಡಲು ಸಹ ಸಮಯವಿಲ್ಲ ಎಂದು ವ್ಯಕ್ತಿಯೊಬ್ಬರು ಪೋಸ್ಟ್‌ಗೆ ಕಾಮೆಂಟ್ ಮಾಡಿದ್ದಾರೆ.
‘ಅವರು ಸಮಯ ನಿರ್ವಹಣೆಯನ್ನು ಬೇರೆಯವರಿಗಿಂತ ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ’ ಎಂದು ಇನ್ನೊಬ್ಬ ವ್ಯಕ್ತಿ ಕಾಮೆಂಟ್ ಮಾಡಿದ್ದಾರೆ.
ಇದನ್ನೂ ಓದಿ: Bengaluru Traffic: ಟ್ರಾಫಿಕ್ನಲ್ಲೇ ಅತಿಹೆಚ್ಚು ಸಮಯ; ನಿಧಾನಗತಿ ನಗರಗಳ ಸಾಲಿನಲ್ಲಿ ಬೆಂಗಳೂರು
‘ಟ್ರಾಫಿಕ್‌ನಲ್ಲಿ ಜನರು ಚಲನಚಿತ್ರಗಳನ್ನು ಮುಗಿಸುವುದನ್ನು ನಾನು ನೋಡಿದ್ದೇನೆ’ ಎಂದು ಇನ್ನೊಬ್ಬರು ಬೆಂಗಳೂರು ಟ್ರಾಫಿಕ್ ಕುರಿತು ಪ್ರತಿಕ್ರಿಯಿಸಿದ್ದಾರೆ.
ಡಚ್ ಲೊಕೇಶನ್ ಟೆಕ್ನಾಲಜಿ ಸಂಸ್ಥೆಯಾದ TomTom 2023 ರ ಫೆಬ್ರವರಿಯಲ್ಲಿ ನಡೆಸಿದ್ದ ಅಧ್ಯಯನದ ಪ್ರಕಾರ, ಬೆಂಗಳೂರನಲ್ಲಿ ವಾಹನ ಚಾಲಕರು ವರ್ಷಕ್ಕೆ ಸರಾಸರಿ 260 ಗಂಟೆಗಳ ಕಾಲ ನಗರದಲ್ಲಿ ಚಾಲನೆ ಅಥವಾ ಪ್ರಯಾಣ ಮಾಡಿದರೆ ಈ ಪೈಕಿ 134 ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ