ನೀರಿಗಾಗಿ ಹಾಹಾಕಾರ; ಬೇಕಾಬಿಟ್ಟಿ ಬೋರ್​ವೆಲ್ ಕೊರೆಯುವವರಿಗೆ ಶಾಕ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೂರಿದೆ. ಅಂತರ್ಜಲ ಮಟ್ಟ ಕುಸಿದಿರುವ ಹಿನ್ನೆಲೆ ಬೇಕಾಬಿಟ್ಟಿ ಬೋರ್​ವೆಲ್ ಕೊರೆಯುವವರಿಗೆ ಜಲಮಂಡಳಿ ಶಾಕ್ ನೀಡಿದ್ದು, ಬೋರ್​ವೆಲ್ ಕೊರೆಯುವುದಕ್ಕೆ ಅನುಮತಿ ಕಡ್ಡಾಯ ಮಾಡಿದೆ. ಈ ಕುರಿತು ಮಾಹಿತಿ ಇಲ್ಲಿದೆ.

ನೀರಿಗಾಗಿ ಹಾಹಾಕಾರ; ಬೇಕಾಬಿಟ್ಟಿ ಬೋರ್​ವೆಲ್ ಕೊರೆಯುವವರಿಗೆ ಶಾಕ್
ಬೋರ್​ವೆಲ್ ಕೊರೆಯುವವರಿಗೆ ಶಾಕ್
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 10, 2024 | 1:38 PM

ಬೆಂಗಳೂರು, ಮಾ.10: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೂರಿದೆ. ಅಂತರ್ಜಲ ಮಟ್ಟ ಕುಸಿದಿರುವ ಹಿನ್ನೆಲೆ ಬೇಕಾಬಿಟ್ಟಿ ಬೋರ್ ​ವೆಲ್(Bore Well) ಕೊರೆಯುವವರಿಗೆ ಜಲಮಂಡಳಿ ಶಾಕ್ ನೀಡಿದ್ದು, ಬೋರ್​ವೆಲ್ ಕೊರೆಯುವುದಕ್ಕೆ ಅನುಮತಿ ಕಡ್ಡಾಯ ಮಾಡಿದೆ. ಒಂದು ವೇಳೆ ಅನುಮತಿ ಇಲ್ಲದೇ ಬೋರ್​ ವೆಲ್ ಕೊರೆದರೆ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಜೊತೆಗೆ ಅನುಮತಿ ಪಡೆದ ಸ್ಥಳದಲ್ಲಿ ಮಾತ್ರ ಬೋರ್​ವೆಲ್ ಹಾಕಬೇಕು. ಅದಕ್ಕೋಸ್ಕರ ಜಲಮಂಡಳಿಯ ವೆಬ್​ಸೈಟ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕೋರಿದೆ. ಅರ್ಜಿ ಸಲ್ಲಿಕೆ ಬಳಿಕ ಅನುಮತಿ ಸಿಕ್ಕರಷ್ಟೇ ಬೋರ್ ವೆಲ್ ಕೊರೆಸಬೇಕು. ಈ ನಿಯಮ ಮಾರ್ಚ್ 15 ರಿಂದ ಜಾರಿಯಾಗಲಿದೆ ಎಂದು ಆದೇಶಿಸಲಾಗಿದೆ.

ಬೆಂಗಳೂರಿನ ಜನತೆಗೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕಬೇಡ-ಬಿಡಬ್ಲೂಎಸ್​ಎಸ್​ಬಿ ಅಧ್ಯಕ್ಷ

ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ನೀರಿನ ಸಮಸ್ಯೆಗೆ ಕುರಿತು ಮಾತನಾಡಿದ್ದ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್, ‘ರಾಜ್ಯ ಸರ್ಕಾರ ಸಭೆಗಳನ್ನು ನಡೆಸುತ್ತಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ. ಬೆಂಗಳೂರಿನ ಜನತೆಗೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕ ಬೇಡ ಎಂದು ಹೇಳಿದ್ದರು.

ಇದನ್ನೂ ಓದಿ:ಪೈಪ್​ನಲ್ಲಿ ನೀರು ಬಾರದಿದ್ರೂ ಕಟ್ಟಬೇಕು ಬಿಲ್! ಕಾವೇರಿ ನೀರಿಗಾಗಿ ಜಲಮಂಡಳಿಯ ವಿರುದ್ಧ ಜನರ ಕಿಡಿಚ

ಜೊತೆಗೆ ಬೆಂಗಳೂರಿನಲ್ಲಿ ನೀರಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿವೆ. ನೀರಿಲ್ಲವೆಂದು ಟ್ರೋಲ್​ಗಳನ್ನು ಮಾಡಲಾಗುತ್ತಿದೆ. ಆದರೆ, ಇದು ಸುಳ್ಳು. ಕೆಲವು ಅಪಾರ್ಟ್​​ಮೆಂಟ್​ಗಳಲ್ಲಿ ನೀರಿಗೆ ಕೊರತೆಯಾಗಿದೆ. ಇನ್ನುಳಿದಂತೆ ಯಾವುದೇ ಸಮಸ್ಯೆ ಇಲ್ಲ. ಈ ಬಗ್ಗೆ ಸ್ಪಷ್ಟನೆ ಕೊಡಲು ಸುದ್ದಿಗೋಷ್ಠಿ ಕರೆದಿದ್ದೇವೆ. ಅಪಾರ್ಟ್​​ಮೆಂಟ್​ಗಳಲ್ಲಿ ಬೋರ್​ವೆಲ್​ಗಳಲ್ಲಿ ನೀರು ಬತ್ತಿದ ಹಿನ್ನೆಲೆ ಕಾವೇರಿ ನೀರಿಗೆ ಬೇಡಿಕೆ ಹೆಚ್ಚಾಗಿದೆ. ಸದ್ಯ, 1450 ಮಿಲಿಯನ್ ಲೀಟರ್ ನೀರು ಪಂಪ್ ಮಾಡುತ್ತಿದ್ದೇವೆ. ಜುಲೈವರೆಗೆ 8 ಟಿಎಂಸಿ ನೀರಿನ ಅವಶ್ಯಕತೆಯಿದ್ದು, ಪ್ರತಿ ತಿಂಗಳಿಗೆ 1.54 ಟಿಎಂಸಿ ನೀರು ಅವಶ್ಯಕತೆಯಿದೆ ಎಂದರು.

ವರದಿ: ಶಾಂತಮೂರ್ತಿ, ಟಿವಿ9 ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:35 pm, Sun, 10 March 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ