ಬೆಂಗಳೂರು: ಕಾರು ವಾಷಿಂಗ್, ಗಾರ್ಡನ್​ಗೆ ನೀರು ಬಳಕೆ ಮಾಡಿದರೆ 5 ಸಾವಿರ ರೂ. ದಂಡ

ಬೆಂಗಳೂರು ನಗರದಲ್ಲಿ ಜಲಕ್ಷಾಮ ಎದುರಾಗಿದ್ದು, ಹನಿ ನೀರಿಗೂ ಹಾಹಾಕಾರ ಎದ್ದಿದೆ. ಹೀಗಾಗಿ ಎಚ್ಚೆತ್ತುಕೊಂಡಿರುವ ಬಿಡಬ್ಲ್ಯುಎಸ್​ಎಸ್​ಬಿ, ನೀರಿನ ದುರ್ಬಳಕೆ ತಡೆಗಟ್ಟಲು ಮುಂದಾಗಿದೆ. ಸಾರ್ವಜನಿಕರು ಕುಡಿಯುವ ನೀರು ಮಿತವಾಗಿ ಬಳಸುವಂತೆ ಸೂಚನೆ ನೀಡಿದ BWSSB, ಮನೋರಂಜಕವಾಗಿ ಅಥವಾ ಆಕರ್ಷಕ ವ್ಯವಸ್ಥೆಗೆ ಅಥವಾ ವಾಹನ ತೊಳೆಯಲು ಇತ್ಯಾದಿಗಳಿಗೆ ಬಳಕೆ ಮಾಡಿದರೆ ಐದು ಸಾವಿರ ರೂಪಾಯಿ ದಂಡ ವಿಧಿಸುವ ಎಚ್ಚರಿಕೆ ನೀಡಿದೆ.

ಬೆಂಗಳೂರು: ಕಾರು ವಾಷಿಂಗ್, ಗಾರ್ಡನ್​ಗೆ ನೀರು ಬಳಕೆ ಮಾಡಿದರೆ 5 ಸಾವಿರ ರೂ. ದಂಡ
ಬೆಂಗಳೂರಿನಲ್ಲಿ ಜಲಕ್ಷಾಮ: ನೀರು ದುರ್ಬಳಕೆ ಮಾಡಿದರೆ 5 ಸಾವಿರ ದಂಡ ವಿಧಿಸುವ ಎಚ್ಚರಿಕೆ ನೀಡಿದ BWSSB
Follow us
Kiran Surya
| Updated By: Rakesh Nayak Manchi

Updated on:Mar 08, 2024 | 11:39 AM

ಬೆಂಗಳೂರು, ಮಾ.8: ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಜಲಕ್ಷಾಮ ಎದುರಾಗಿದ್ದು, ಹನಿ ನೀರಿಗೂ ಹಾಹಾಕಾರ (Drinking Water Problem) ಎದ್ದಿದೆ. ಹೀಗಾಗಿ ಎಚ್ಚೆತ್ತುಕೊಂಡಿರುವ ಬಿಡಬ್ಲ್ಯುಎಸ್​ಎಸ್​ಬಿ, ನೀರಿನ ದುರ್ಬಳಕೆ (Water Misus) ತಡೆಗಟ್ಟಲು ಮುಂದಾಗಿದೆ. ಸಾರ್ವಜನಿಕರು ಕುಡಿಯುವ ನೀರು ಮಿತವಾಗಿ ಬಳಸುವಂತೆ ಸೂಚನೆ ನೀಡಿದ BWSSB, ಮನೋರಂಜಕವಾಗಿ ಅಥವಾ ಆಕರ್ಷಕ ವ್ಯವಸ್ಥೆಗೆ ಅಥವಾ ವಾಹನ ತೊಳೆಯಲು ಇತ್ಯಾದಿಗಳಿಗೆ ಬಳಕೆ ಮಾಡಿದರೆ ಐದು ಸಾವಿರ ರೂಪಾಯಿ ದಂಡ ವಿಧಿಸುವ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ನೀರು ವ್ಯರ್ಥವಾಗುವುದನ್ನು ತಡೆಗಟ್ಟಲು ಮುಂದಾದ BWSSB, ಸಾರ್ವಜನಿಕರು ಕುಡಿಯುವ ನೀರು ಮಿತವಾಗಿ ಬಳಸುವಂತೆ ಸೂಚನೆ ನೀಡಿದೆ. ಕುಡಿಯುವ ನೀರನ್ನು ವಾಹನಗಳ ಸ್ವಚ್ಛತೆಗೆ, ಕೈದೋಟ, ಕಟ್ಟಡ ನಿರ್ಮಾಣ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ ಹಾಗೂ ಸಿನಿಮಾ‌ ಥಿಯೇಟರ್, ಮಾಲುಗಳಲ್ಲಿ ಬಳಸಿದರೆ 5 ಸಾವಿರ ರೂಪಾಯಿ ದಂಡ ವಿಧಿಸುವ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Bengaluru Water Crisis: ಬೆಂಗಳೂರಿನಲ್ಲಿ ಟ್ಯಾಂಕರ್ ಕಳ್ಳಾಟಕ್ಕೆ ಬ್ರೇಕ್, ಕೊನೆಗೂ ಟ್ಯಾಂಕರ್ ನೀರಿಗೆ ದರ ಫಿಕ್ಸ್: ಇಲ್ಲಿದೆ ದರ ವಿವರ

ಜಲಮಂಡಳಿ ಕಾಯ್ದೆ 194 ಕಲಂ 109 ರಂತೆ 5 ಸಾವಿರ ರೂಪಾಯಿ ದಂಡ ವಿಧಿಸಲು ನಿರ್ಧರಿಸಲಾಗಿದೆ. ಉಲ್ಲಂಘನೆ ಮರುಕಳಿಸಿದರೆ 5 ಸಾವಿರ ದಂಡದ ಜೊತೆಗೆ ದಿನಪ್ರತಿ 500 ರೂಪಾಯಿ ಹೆಚ್ಚುವರಿ ದಂಡ ವಸೂಲಿ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ತಿಪ್ಪೇನಹಳ್ಳಿಯಲ್ಲಿ ಜಲಕ್ಷಾಮ

ಸಿಲಿಕಾನ್ ಸಿಟಿ ಜನರಿಗೆ ಜಲಾಘಾತ ತಪ್ಪುತ್ತಿಲ್ಲ. ಯಶವಂತಪುರ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ತಿಪ್ಪೇನಹಳ್ಳಿಯಲ್ಲಿ ಜಲಕ್ಷಾಮ ಎದುರಾಗಿದ್ದು, ನಿವಾಸಿಗಳು ನೀರಿಲ್ಲದೇ ಕಂಗಾಲಾಗಿದ್ದಾರೆ. ದೊಡ್ಡಬಿದರುಕಲ್ಲು ವಾರ್ಡ್ ವ್ಯಾಪ್ತಿಯಲ್ಲಿರುವ ತಿಪ್ಪೇನಹಳ್ಳಿಯಲ್ಲಿ ವಾರಕ್ಕೊ,15 ದಿನಕ್ಕೊಮ್ಮೆ ನೀರು ಬರುತ್ತಿದ್ದು, ನೀರಿಗಾಗಿ ಕಾಯುವುದೇ ದೊಡ್ಡ ಕೆಲಸವಾಗಿದೆ.

ಊರಿನ ಬೋರ್ ವೆಲ್​ಗಳು ಕೂಡ ಬತ್ತಿ ಹೋಗಿವೆ. ನೀರಿಗಾಗಿ ಕಾದು ಕಾದು ಜನರು ಸುಸ್ತಾಗಿದ್ದಾರೆ. ಹಬ್ಬದ ದಿನವೂ ನೀರಿಲ್ಲದೇ ಬಸವಳಿದ ಜನರು, ನೀರಿಗಾಗಿ ಬಿಂದಿಗೆ ಹಿಡಿದು ಆಕ್ರೋಶ ಹೊರಹಾಕಿದ್ದಾರೆ.

ವರದಿ: ಶಾಂತಮೂರ್ತಿ, ಟಿವಿ9 ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:32 am, Fri, 8 March 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ