ಸಾಲು ಸಾಲು ಪರೀಕ್ಷೆಗಳ ನಡುವೆ ಶಾಲೆಗಳಲ್ಲಿ ಎದುರಾದ ನೀರಿನ ಸಮಸ್ಯೆ; ಕುಡಿಯುವ ನೀರಿನ ವ್ಯವಸ್ಥೆಗಾಗಿ ಖಾಸಗಿ ಶಾಲೆಗಳ ಒಕ್ಕೂಟದಿಂದ ಪತ್ರ

ಸಿಲಿಕಾನ್ ಸಿಟಿಯಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ಬೇಸಿಗೆ ಆರಂಭದಲ್ಲಿಯೇ ಜನರಿಗೆ ನೀರಿನ ಭವಣೆಯ ಬಿಸಿ ತಟ್ಟಿದ್ದು ಕುಡಿಯುವ ನೀರಿಗಾಗಿ ಜನರು ಪರದಾಡುವಂತಾಗಿದೆ. ಆದರೆ ಇದರ ಬಿಸಿ ಈಗ ಶಾಲಾ ಮಕ್ಕಳಿಗೂ ತಟ್ಟಿದ್ದು ಆತಂಕ ಎದುರಾಗಿದೆ. ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲ ಶಾಲೆಗಳಲ್ಲಿ ಶೌಚಾಲಯ ಬಳಕೆಗೂ ನೀರಿಲ್ಲದಂತಹ ಸ್ಥಿತಿ ಎದುರಾಗಿದೆ.

ಸಾಲು ಸಾಲು ಪರೀಕ್ಷೆಗಳ ನಡುವೆ ಶಾಲೆಗಳಲ್ಲಿ ಎದುರಾದ ನೀರಿನ ಸಮಸ್ಯೆ; ಕುಡಿಯುವ ನೀರಿನ ವ್ಯವಸ್ಥೆಗಾಗಿ ಖಾಸಗಿ ಶಾಲೆಗಳ ಒಕ್ಕೂಟದಿಂದ ಪತ್ರ
ನೀರಿನ ಬಿಕ್ಕಟ್ಟು Image Credit source: Allianz Global Investors
Follow us
Vinay Kashappanavar
| Updated By: ಆಯೇಷಾ ಬಾನು

Updated on: Mar 17, 2024 | 12:43 PM

ಬೆಂಗಳೂರು, ಮಾರ್ಚ್​.17: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸದ್ಯ ನೀರಿಗೆ ಹಾಹಾಕಾರ (Water Crisis) ಎದ್ದಿದ್ದು ಕುಡಿಯುವ ನೀರಿಗೆ ಹಲವಡೆ ವಾಟರ್ ಟ್ಯಾಂಕ್ ಮೊರೆ ಹೋಗಿದ್ದಾರೆ. ಅನೇಕ ಮನೆಗಳಿಗೆ, ಏರಿಯಾಗಳಿಗೆ ವಾಟರ್ ಟ್ಯಾಂಕ್ ನೀರು ಪೂರೈಕೆ ಮಾಡಲಾಗುತ್ತಿದೆ. ಮಳೆಯ ಅಭಾವ, ಅಂತರ್ಜಲ ಕುಸಿತದ ಪರಿಣಾಮ ಕೆರೆ, ಕಟ್ಟೆ, ಬೋರ್‌ವೆಲ್‌ಗಳಲ್ಲಿ ನೀರು ಇಂಗಿಹೋಗಿದೆ. ಹೀಗಾಗಿ ಬೆಂಗಳೂರಿನಾದ್ಯಂತ ಕುಡಿಯುವ ನೀರಿಗೆ ಭಾರಿ ಅಭಾವ ತಲೆದೋರಿದ್ದು ವಾಟರ್ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಈ ನೀರಿನ ಸಮಸ್ಯೆ ಈಗ ಸಿಲಿಕಾನ್ ಸಿಟಿಯ ಶಾಲೆಗಳಿಗೂ (School) ತಟ್ಟಿದೆ. ಸದ್ಯ ಶಾಲೆಗಳಲ್ಲಿ ಸಾಲು ಸಾಲು ಪರೀಕ್ಷೆ ನಡೆಯುತ್ತಿದ್ದು ಮಕ್ಕಳಿಗೆ ನೀರಿನ ಸಮಸ್ಯೆ ಶುರುವಾಗಿದೆ.

SSLC ಹಾಗೂ ಪಿಯುಸಿ ಪರೀಕ್ಷೆಗಳಿಗೂ ನೀರಿನ ಬಿಸಿ ಎದುರಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನ ಶಾಲಾ ಕಾಲೇಜುಗಳಲ್ಲಿಯೂ ನೀರಿಗೆ ಹಾಹಾಕಾರ ಶುರುವಾಗಿದೆ. ಸದ್ಯ ಶಾಲೆಗಳಲ್ಲಿ SSLC ಹಾಗು PUC ಪರೀಕ್ಷೆಗಳು ನಡೆಯುತ್ತಿದೆ. ಲಕ್ಷಾಂತರ ಮಕ್ಕಳು ಪರೀಕ್ಷೆ ಬರೆಯತ್ತಿದ್ದಾರೆ. ಆದರೆ ಸದ್ಯ ಶಾಲೆಗಳಲ್ಲಿ ನೀರು ಸಾಕಾಗುತ್ತಿಲ್ಲ. ಹೀಗಾಗಿ ಪರದಾಡುವಂತಾಗಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಯವರು ವಾಟರ್ ಕ್ಯಾನ್ ಗಳನ್ನ ಹೊರಗಡೆಯಿಂದ ತಂದು ನೀರು ಕೊಡಬೇಕಾದ ಸ್ಥಿತಿ ಎದುರಾಗಿದೆ. ಹೀಗಾಗಿ ಪರೀಕ್ಷೆಗಳನ್ನ ನಡೆಸಲು ಶಿಕ್ಷಣ ಸಂಸ್ಥೆಗಳು ಪರದಾಡುತ್ತಿದ್ದು ಈ ಎಲ್ಲ ಪರೀಕ್ಷೆಗಳು ಮುಗಿಯುವವರೆಗೆಯಾದ್ರೂ BWSSB ಯಿಂದ ಕುಡಿಯುವ ನೀರು ನೀಡುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಸಿಎಂಗೆ ಪತ್ರ ಬರೆದು ಮನವಿಗೆ ಖಾಸಗಿ ಶಾಲೆಗಳ ಒಕ್ಕೂಟ ಮುಂದಾಗಿದೆ.

ಇದನ್ನೂ ಓದಿ: ಸಕ್ಕರೆ ಆರೋಗ್ಯಕ್ಕೆ ಉತ್ತಮ ಅಲ್ಲ, ಆದ್ರೆ ಬೆಲ್ಲ ಉತ್ತಮವೇ?

ಇನ್ನು ಶಾಲೆಗಳಲ್ಲಿ ನೀರಿನ ಸಮಸ್ಯೆ ದೊಡ್ಡದಾಗಿದ್ದು ವಿದ್ಯಾರ್ಥಿಗಳು ಶಿಕ್ಷಕರು ಪರದಾಡುತ್ತಿದ್ದಾರೆ. ಹೀಗಾಗಿ ಪರೀಕ್ಷೆಗಳು ಕಂಪ್ಲೀಟ್ ಮುಗಿಯುವವರೆಗೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೀರು ಪೂರೈಸುವಂತೆ ಶಾಲೆಗಳ ಒಕ್ಕೂಟದಿಂದ ಸರ್ಕಾರಕ್ಕೆ ಒತ್ತಾಯ ಕೇಳಿ ಬಂದಿದ್ದು ಶಿಕ್ಷಣ ಸಚಿವರು ಕೂಡಾ ಶಾಲೆಗಳಲ್ಲಿನ ನೀರಿನ ಸಮಸ್ಯೆ ಇದೆ ಸಮಸ್ಯೆಗೆ ಪರಿಹಾರ ಮಾಡ್ತೀವಿ ಎಂದಿದ್ದಾರೆ.

ಒಟ್ನಲ್ಲಿ ಬೆಂಗಳೂರಿನಲ್ಲಿ ಬೇಸಿಗೆ ಮುನ್ನವೆ ಒಂದೆಡೆ ನೀರಿಗೆ ಹಾಹಾಕಾರ ಶುರುವಾಗಿದ್ರೆ, ಮತ್ತೊಂದೆಡೆ ಟ್ಯಾಂಕರ್ ನೀರು ಸೇರಿದಂತೆ ಕಲುಷಿತ ನೀರಿನಿಂದ ಸಾಂಕ್ರಮಿಕ ಖಾಯಿಲೆಗಳ ಏರಿಕೆಯ ಬಿಸಿ ತಟ್ಟಿದೆ. ಈ ನಡುವೆ ಶಾಲಾ ಪರೀಕ್ಷೆಗಳಿಗೂ ನೀರಿನ ಬಿಸಿ ಎದುರಾಗಿದ್ದು ಸರ್ಕಾರ ಶಾಲೆಗಳಿಗೆ ಕುಡಿಯುವ ನೀರಿನ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?