ಇತ್ತೀಚೆಗೆ ಉದ್ಘಾಟನೆಗೊಂಡ ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಸೋರಿಕೆ; ಟ್ವಿಟರ್​ನಲ್ಲಿ ವಿಡಿಯೋ ವೈರಲ್

5,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಟರ್ಮಿನಲ್ 2ರ ಆಗಮನ ದ್ವಾರ ಪ್ರದೇಶದ ಹೊರಗೆ ನೀರಿನ ಸೋರಿಕೆ ಕಂಡುಬಂದಿದೆ. ಇದರಿಂದ ಪ್ರಯಾಣಿಕರು ಮತ್ತು ವಿಮಾನ ನಿಲ್ದಾಣ ನೈರ್ಮಲ್ಯ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ.

ಇತ್ತೀಚೆಗೆ ಉದ್ಘಾಟನೆಗೊಂಡ ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಸೋರಿಕೆ; ಟ್ವಿಟರ್​ನಲ್ಲಿ ವಿಡಿಯೋ ವೈರಲ್
ಬೆಂಗಳೂರು ವಿಮಾನ ನಿಲ್ದಾಣ
Follow us
ಆಯೇಷಾ ಬಾನು
|

Updated on: May 04, 2023 | 1:32 PM

ಬೆಂಗಳೂರು: ನಗರದಲ್ಲಿ ಕಳೆದ ಕೆಲ ದಿನಗಳಿಂದ ವರುಣರಾಯನ ಅಬ್ಬರ ಜೋರಾಗಿದೆ. ಪ್ರತಿ ದಿನ ಸಂಜೆ, ರಾತ್ರಿ ಮಳೆ ಸುರಿಯುತ್ತಿದೆ. ಉರಿ ಬಿಸಿಲಿನಿಂದ ಹೈರಾಣಾಗಿದ್ದ ಸಿಟಿ ಮಂದಿ ಮಳೆಗೆ ಕೂಲ್ ಆಗಿದ್ದಾರೆ. ಆದ್ರೆ ಮೇ 9ರ ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Kempegowda International Airport Bengaluru) ಸೋರಿಕೆ ಕಂಡು ಬಂದಿದೆ. ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಲ್ಲಿ ಮೇಲ್ಚಾವಣಿ ಸೋರುತ್ತಿದ್ದು ಸಿಬ್ಬಂದಿ ಮತ್ತು ಪ್ರಯಾಣಿಕರು ಸಮಸ್ಯೆ ಎದುರಿಸುವಂತಾಗಿದೆ. ಹಾಗೂ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಮಳೆ ನೀರನ್ನು ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

5,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಟರ್ಮಿನಲ್ 2ರ ಆಗಮನ ದ್ವಾರ ಪ್ರದೇಶದ ಹೊರಗೆ ನೀರಿನ ಸೋರಿಕೆ ಕಂಡುಬಂದಿದೆ. ಇದರಿಂದ ಪ್ರಯಾಣಿಕರು ಮತ್ತು ವಿಮಾನ ನಿಲ್ದಾಣ ನೈರ್ಮಲ್ಯ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ. 2022ರ ನವೆಂಬರ್ 11ರಂದು ಅನಾವರಣಗೊಂಡ ನಂತರ ಟರ್ಮಿನಲ್ ಈ ವರ್ಷ ಜನವರಿ 15 ರಂದು ಹಾರಾಟದ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಮೂಲಸೌಕರ್ಯ ಸಮಸ್ಯೆಯನ್ನು ಒಪ್ಪಿಕೊಂಡ ಅಧಿಕಾರಿಗಳು ಅದನ್ನು ಸರಿಪಡಿಸುವ ಕಾರ್ಯಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Airport: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸೇವೆಗೆ ಸಿದ್ದವಾದ ಟರ್ಮಿನಲ್ 2

ಇನ್ನು ಕಳೆದ 2 ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಟರ್ಮಿನಲ್-2 ಉದ್ಘಾಟನೆ ಮಾಡಿದ್ರು. ಉದ್ಘಾಟನೆಗೊಂಡ ಕೆಲವೇ ತಿಂಗಳಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ. ಕೇವಲ 30 ನಿಮಿಷಗಳ ಕಾಲ ಸುರಿದ ಮಳೆಗೆ ಟರ್ಮಿನಲ್‌-2 ರಲ್ಲಿ ನೀರು ತುಂಬಿಕೊಂಡಿದೆ. ಹವಾಮಾನ ವರದಿಗಳು ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ 25 ಮಿಮೀ ಮಳೆಯನ್ನು ದಾಖಲಿಸಿದರೆ, ವಿಮಾನ ನಿಲ್ದಾಣವು ರಾತ್ರಿ 7 ರಿಂದ 10 ರವರೆಗೆ ಕನಿಷ್ಠ 9.8 ಮಿಮೀ ಮಳೆಯನ್ನು ದಾಖಲಿಸಿದೆ. ಇನ್ನು ಹೊಸ ಟರ್ಮಿನಲ್‌ನ ಕರ್ಬ್‌ಸೈಡ್‌ನಲ್ಲಿ ಸೋರಿಕೆಯಾಗಿರುವುದನ್ನು ವಿಮಾನ ನಿಲ್ದಾಣದ ನಿರ್ವಾಹಕರಾದ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (ಬಿಐಎಎಲ್) ಖಚಿತಪಡಿಸಿದೆ.

ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್