ಜನ ಬೈದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

Water Price Hike: ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿನ ಜನತೆಗೆ ಮತ್ತೊಂದು ದರ ಏರಿಕೆಯ ಶಾಕ್ ಕೊಡಲು ಮುಂದಾಗಿದ್ದಾರೆ. ಯಾರು ಏನೇ ಹೇಳಿದರೂ ನೀರಿನ ದರ ಹೆಚ್ಚಳ ಮಾಡಿಯೇ ಸಿದ್ಧ ಎಂದು ಅವರು ಬೆಂಗಳೂರಿನಲ್ಲಿ ಘೋಷಣೆ ಮಾಡಿದ್ದಾರೆ.

ಜನ ಬೈದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ
ಡಿಕೆ ಶಿವಕುಮಾರ್
Follow us
Anil Kalkere
| Updated By: Ganapathi Sharma

Updated on:Aug 22, 2024 | 12:57 PM

ಬೆಂಗಳೂರು, ಆಗಸ್ಟ್​ 22: ಜನ ಬೈದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ಗುರುವಾರ ನಡೆದ ಕಾವೇರಿ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಧ್ಯಮದವರು ಬೈಯಲಿ, ಜನ ವಿರೋಧ ವ್ಯಕ್ತಪಡಿಸಲಿ, ವಿಪಕ್ಷಗಳು ಟೀಕಿಸಲಿ, ತಲೆಕೆಡಿಸಿಕೊಳ್ಳುವುದಿಲ್ಲ. ನೀರಿನ ದರ ಹೆಚ್ಚಳ ಮಾಡುತ್ತೇವೆ ಎಂದರು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧಿಕಾರಿಗಳು ನೀರಿನ ದರದ ಬಗ್ಗೆ ಮಾಹಿತಿ ಕೊಡಿ. ಎಷ್ಟು ವರ್ಷಗಳಿಂದ ನೀರಿನ ದರ ಹೆಚ್ಚಿಸಿಲ್ಲ ಎಂದು ಮಾಹಿತಿ ಕೊಡಿ ಎಂಬುದಾಗಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ವೇದಿಕೆ ಮೇಲೆಯೇ ಅಧಿಕಾರಿಗಳಿಗೆ ಸೂಚಿಸಿದರು.

ನಾಗರಿಕರಿಗೆ ಉಪಕಾರ ಸ್ಮರಣೆ ಇಲ್ಲ: ಡಿಕೆಶಿ

ನಾಗರಿಕರಿಗೆ ಎಷ್ಟೇ ಮಾಡಿದರೂ ಉಪಕಾರ ಸ್ಮರಣೆ ಇಲ್ಲ. ಎಷ್ಟೇ ಒಳ್ಳೆಯದು ಮಾಡಿದರೂ ಬೈತಾರೆ, ಕಮೆಂಟ್​ ಮಾಡುತ್ತಾರೆ. ಬಿಲ್ ಪಾವತಿಸುವರು ಪಾವತಿ ಮಾಡುತ್ತಾರೆ. ಕೆಲವರು ಪಾವತಿ ಮಾಡಲ್ಲ ಎಂದು ಅವರು ಹೇಳಿದರು.

ಜಲ ಮಂಡಳಿ ನಷ್ಟದಲ್ಲಿದೆ: ಡಿಕೆ ಶಿವಕುಮಾರ್

ಕಳೆದ 8-9 ವರ್ಷದಿಂದ ನೀರಿನ ದರ ಏರಿಕೆ ಮಾಡಿಲ್ಲ. ನೀರಿನ‌ ದರ ಹೆಚ್ಚಿಸಬೇಕು, ಅಂತರ್ಜಲ ಹೆಚ್ಚಳ ಆಗಬೇಕು. ಮಂಡಳಿ ನಷ್ಟದಲ್ಲಿದೆ, ಸಂಬಳ ಕೊಡುವುದಕ್ಕೆ ಆಗುತ್ತಿಲ್ಲ. ಮಂಡಳಿಯ ವಿದ್ಯುತ್ ದರ ಪಾವತಿ ಮಾಡಲು ಆಗುತ್ತಿಲ್ಲ. ಕೆಲವು ಸೆಕ್ಷನ್ ನೋಡಿ ದರ ನಿಗದಿ ಮಾಡಬೇಕು. ಎಷ್ಟು ದರ ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧಾರ ಮಾಡಿಲ್ಲ. ಕಮಿಟಿ‌ ಸಭೆ, ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ. ಇಂದಿನ ಸಂಪುಟ ಸಭೆಯಲ್ಲಿ ನೀರಿನ ದರ ಹೆಚ್ಚಳ ವಿಷಯ ಪ್ರಸ್ತಾಪವಿಲ್ಲ ಎಂದು ಅವರು ತಿಳಿಸಿದರು.

‘ನೀರು ಸರಬರಾಜು ಖಾಸಗೀಕರಣ ಇಲ್ಲ’

ಜಲ ಮತ್ತು ಇಂಧನ ಎರಡು ಪ್ರಮುಖವಾದ ಇಲಾಖೆಗಳು. ಈ ಎರಡು ಇಲಾಖೆಗಳ ಉಸ್ತುವಾರಿಯನ್ನು ನಾನೇ ವಹಿಸಿದ್ದೇನೆ. ಹಿಂದೆ ಎಸ್ಎಂ ಕೃಷ್ಣ ಸಿಎಂ ಆಗಿದ್ದ ಅವಧಿಯಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ನೀರು ಸರಬರಾಜು ಖಾಸಗೀಕರಣ ಚರ್ಚೆ ನಡೆದಿತ್ತು. ಅದರ ಬಗ್ಗೆ ಫ್ರಾನ್ಸ್​​​ಗೆ ಎಲ್ಲ ಹೋಗಿ ನೋಡಿಕೊಂಡು ಬಂದಿದ್ದೆ. ನಂತರ ಆ ರೀತಿ ಅಳವಡಿಕೆ ನಮ್ಮ ರಾಜ್ಯದಲ್ಲಿ ಕಷ್ಟವಾಗುತ್ತದೆ ಎಂದು ಮಾಹಿತಿ ‌ನೀಡಿದ್ದೆ. ಅದಕ್ಕೂ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಆನಂತರ ಕೈ ಬಿಟ್ಟೆವು.

ಇದನ್ನೂ ಓದಿ: 5 ವರ್ಷದಲ್ಲಿ ಬಾಡಿಗೆ ಜಾಸ್ತಿ ಮಾಡಿಲ್ಲ, ಊಟ ಕೂಡ ಅವರದೇ, ಬಹಳ ಒಳ್ಳೆಯ ಓನರ್​​​

ಈಗಲೂ ನಾನು ಸಚಿವನಾದ ಖಾಸಗೀಕರಣದ ಬಗ್ಗೆ ಚರ್ಚಿಸಲು ಮತ್ತೆ ಕೆಲವರು ಬಂದರು. ಆಗಲ್ಲ, ನಾನಿರುವವರೆಗೆ ಆಗಲ್ಲ ಅಂತ ಹೇಳಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Thu, 22 August 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ