ಬೆಂಗಳೂರಿನಲ್ಲಿ ನೀರಿನ ಸಮಸ್ಯೆ: ಈಜು ಕೊಳಕ್ಕೆ ಕುಡಿಯುವ ನೀರಿನ ಬಳಕೆಗೆ ನಿಷೇಧ

ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಂದು ನೋಡಿದರ ಜಲಕ್ಷಾಮ ಸೃಷ್ಟಿಯಾಗಿದೆ. ಹಲವೆಡೆ ಟ್ಯಾಂಕರ್​ಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ವಾಹನ ತೊಳೆಯಲು ಇತ್ಯಾದಿಗಳಿಗೆ ನೀರು ಬಳಸುವುದನ್ನು ಇತ್ತೀಚೆಗಷ್ಟೇ ನಿಷೇಧಿಸಲಾಗಿತ್ತು. ಇದೀಗ, ಈಜು ಕೊಳಕ್ಕೆ ಕುಡಿಯುವ ನೀರು ಬಳಸುವುದನ್ನು ನಿಷೇಧಿಸಲಾಗಿದೆ.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ: ಈಜು ಕೊಳಕ್ಕೆ ಕುಡಿಯುವ ನೀರಿನ ಬಳಕೆಗೆ ನಿಷೇಧ
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹಿನ್ನೆಲೆ ಈಜು ಕೊಳಕ್ಕೆ ಕುಡಿಯುವ ನೀರಿನ ಬಳಕೆಗೆ ನಿಷೇಧ ಹೇರಿದ ಜಲಮಂಡಳಿ
Follow us
Vinayak Hanamant Gurav
| Updated By: Rakesh Nayak Manchi

Updated on: Mar 12, 2024 | 10:51 PM

ಬೆಂಗಳೂರು, ಮಾ.12: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಜಲಕ್ಷಾಮ ಹಿನ್ನಲೆ ಸಾರ್ವಜನಿಕ ಹಿತದೃಷ್ಟಿಯಿಂದ ಈಜು ಕೊಳಕ್ಕೆ (Swimming Pool) ಕುಡಿಯುವ ನೀರು ಬಳಸುವುದನ್ನು ನಿಷೇಧಿಸಿ ಜಲಮಂಡಳಿ ಆದೇಶಿಸಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34 ರ ಅನುಸಾರ ನಿಷೇಧಿಸಲಾಗಿದ್ದು, ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ದಂಡ ವಿಧಿಸುವುದರ ಜೊತೆಹೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ.

ಆದೇಶವನ್ನು ಯಾರಾದರು ಉಲ್ಲಂಘನೆ ಮಾಡುವುದು ಕಂಡುಬಂದಲ್ಲಿ ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ 1916 ಗೆ ತಿಳಿಸುವಂತೆ ಮನವಿ ಮಾಡಲಾಗಿದೆ. ತಪ್ಪಿತಸ್ಥರಿಗೆ 1964 ರ ಕಾಯ್ದೆ ಕಲಂ 109 ರಂತೆ 5000 ರೂಪಾಯಿ ದಂಡ ವಿಧಿಸಲಾಗುತ್ತದೆ. ಆದೇಶ ಉಲ್ಲಂಘನೆ ಮರುಕಳಿಸಿದಲ್ಲಿ ದಂಡ ಮೊತ್ತ ಐದು ಸಾವಿರದ ಜೊತೆಗೆ ಹೆಚ್ಚುವರಿಯಾಗಿ 500 ರೂಪಾಯಿ (ಪ್ರತಿ ದಿನಕ್ಕೆ) ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: ಬೆಂಗಳೂರು: ಕಾರು ವಾಷಿಂಗ್, ಗಾರ್ಡನ್​ಗೆ ನೀರು ಬಳಕೆ ಮಾಡಿದರೆ 5 ಸಾವಿರ ರೂ. ದಂಡ

ಸಭೆಯಲ್ಲಿ ನೀರಿನ ಕೊರತೆ ನಿಗಿಸಲು ಪ್ರಮುಖ ನಿರ್ಣಯ

ದೊಡ್ಡ ಗಾತ್ರದ ನೀರಿನ ಸಂಪರ್ಕ ಪಡೆದ ಪ್ರಮುಖ ಗ್ರಾಹಕರೊಂದಿಗೆ ಜಲಮಂಡಳಿ ಅಧ್ಯಕ್ಷರ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಸಭೆ ನಡೆಸಿದರು. ಸಭೆಯಲ್ಲಿ ನೀರಿನ ಕೊರತೆ ನೀಗಿಸಲು ಕೆಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ದೊಡ್ಡಗಾತ್ರದ ಪ್ರಮುಖ ಗ್ರಾಹಕರ ನೀರಿನ ಪೂರೈಕೆಯಲ್ಲಿ ಶೇ.20ರಷ್ಟು ಕಡಿತಕ್ಕೆ ಜಲಮಂಡಳಿ ನಿರ್ಧಾರ ಮಾಡಿದೆ.

ಸದ್ಯ ಬೆಂಗಳೂರಿಗೆ ನೀರಿನ ಸಮಸ್ಯೆ ಎದುರಾಗಿದೆ. ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇರುವುದರಿಂದ ಈ ಸಂದರ್ಭದಲ್ಲಿ ನೀರು ಒದಗಿಸುವುದು ಜಲಮಂಡಳಿಗೆ ಸವಾಲಾಗಿ ಪರಿಣಮಿಸಿದೆ. ಅದಾಗ್ಯೂ, ನೀರು ಒದಗಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ನೀರಿನ ಸಮಸ್ಯೆ ಹಿನ್ನಲೆ ಮಾರ್ಚ 15 ರಿಂದ ಹಂತಹಂತವಾಗಿ ಕಾವೇರಿ ನೀರನ್ನು ಕಡಿತಗೊಳಿಸಲು ನಿರ್ಧಾರಿಸಲಾಗಿದ್ದು, ಏಪ್ರಿಲ್ 1 ರಿಂದ ಶೇ.20 ರಷ್ಟು ಕಡಿತಗೊಳಿಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: ಕುಡಿಯುವ ನೀರಿನ ಬಳಕೆಗೆ ಹಲವು ನಿರ್ಬಂಧ, ಮನೆ ಮಾಲೀಕರಿಗೆ ಸಂಕಷ್ಟ

ಬೆಂಗಳೂರಿನಲ್ಲಿ ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದಿರುವ 3 ಲಕ್ಷ ಜನರಿದ್ದಾರೆ. 1.40 ಕೋಟಿ ಜನರ ಹಿತದೃಷ್ಟಿಯಿಂದ ಮಂಡಳಿ ಕೈಗೊಂಡಿರುವ ಈ ನಿರ್ಧಾರಕ್ಕೆ ಕೈಜೋಡಿಸುವಂತೆ ಮನವಿ ಮಾಡಲಾಗಿದೆ. ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದಿರುವವರಿಗೆ ಮಂಡಳಿ ಇದುವರೆಗೆ ಶೇ.95 ರಿಂದ ಶೇ.100 ರಷ್ಟು ಪೂರೈಕೆ ಮಾಡುತ್ತಿತ್ತು. ಇನ್ನೂ ಮುಂದೆ ಶೇ.20 ರಷ್ಟು ನೀರು ಪೂರೈಕೆ ಕಡಿತಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ರೈಲ್ವೆ, ಎಚ್ಎಎಲ್, ಏರ್ ಪೋರ್ಸ್, ಡಿಫೆನ್ಸ್, ಸಿ.ಆರ್.ಪಿ.ಎಫ್, ಬಯೋಕಾನ್, ನಿಮ್ಹಾನ್ಸ್, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದಿರುವ ಅನೇಕ ಸಂಸ್ಥೆಗಳು ತಮ್ಮ ಕ್ಯಾಂಪಸ್​ನಲ್ಲಿ ನೀರಿನ ಪ್ರಾಮುಖ್ಯತೆ, ನೀರಿನ ಉಳಿತಾಯ ಕುರಿತು ಅರಿವು ಮೂಡಿಸಬೇಕು ಎಂದು ಸೂಚನೆ ನೀಡಲಾಗಿದೆ.

ಈಜು ಕೊಳ ಸ್ಥಗಿತಕ್ಕೆ ಆದೇಶಿಸುವಂತೆ ಅಧಿಕಾರಿಗಳಿಗೆ ಸೂಚನೆ

ನೀರಿನ ಕೊರತೆ ನೀಗಿಸುವ ನಿಟ್ಟಿನಲ್ಲಿ ಕ್ಯಾಂಪಸ್​ನಲ್ಲಿ ಈಜುಕೋಳಗಳಿದ್ದರೆ ಕೂಡಲೇ ಸ್ಥಗಿತಗೊಳಿಸಿ ಎಂದು ನಿರ್ದೇಶನ ನೀಡುವಂತೆ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಲಾಯಿತು.

ಕಾವೇರಿ-5ನೇ ಹಂತದ ಯೋಜನೆ ಮೇ 15ರ ಒಳಗೆ ಅನುಷ್ಠಾನ ಮಾಡಲು ನಿರ್ಧರಿಸಲಾಗಿದೆ, ಅಲ್ಲಿಯವರೆಗೆ ಜಲಮಂಡಳಿಯೊಂದಿಗೆ ಕೈಜೋಡಿಸುವಂತೆ ಗ್ರಾಹಕರಲ್ಲಿ ಮನವಿ ಮಾಡಲಾಗಿದೆ. ಸಂಸ್ಕರಿಸಿದ ನೀರನ್ನು ಇತರೇ ಉದ್ದೇಶಗಳಿಗೆ ಬಳಸುವಂತೆ ತಿಳಿಸಿದ ರಾಮ್ ಪ್ರಸಾತ್ ಮನೋಹರ್, ಅಗತ್ಯವಿದ್ದಲ್ಲಿ ನೀರು ಒದಗಿಸುವುದಾಗಿ ತಿಳಿಸಿದ್ದಾರೆ.

ಕೊಳವೆಬಾವಿ ಕೊರೆಯುವುದಕ್ಕೆ ಕೆಲವರು ಅನುಮತಿ ಕೋರಿ ಮನವಿ ಮಾಡಿದ್ದು, ಅರ್ಜಿ ಸಲ್ಲಿಸಿದ ಕೂಡಲೇ ಅನುಮತಿ ನೀಡಲಾಗುವುದು ಎಂದು ರಾಮಪ್ರಸಾತ್ ಮನೋಹರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್