Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಬಿಕ್ಕಟ್ಟು, ಬಿಸಿ ಗಾಳಿ: ಬೆಂಗಳೂರಿನಲ್ಲಿ ಹೆಚ್ಚಾದ ಟೈಫಾಯಿಡ್, ಗ್ಯಾಸ್ಟ್ರೋಎಂಟರೈಟಿಸ್ ಪ್ರಕರಣ

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ತಾಪಮಾನ ಮತ್ತು ನೀರಿನ ಬಿಕ್ಕಟ್ಟು ಹಲವಾರು ಸೋಂಕುಗಳ ಹರಡುವಿಕೆಗೂ ಕಾರಣವಾಗುತ್ತಿವೆ. ಇದೀಗ ಜನಗರದಲ್ಲಿ ಟೈಫಾಯ್ಡ್ ಮತ್ತು ಜಠರ ಕರುಳಿನ ಉರಿಯೂತ ಅಥವಾ ಗ್ಯಾಸ್ಟ್ರೋಎಂಟರೈಟಿಸ್ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ ಎಂದು ಖಾಸಗಿ ಆಸ್ಪತ್ರೆಗಳ ಮೂಲಗಳು ತಿಳಿಸಿವೆ.

ನೀರಿನ ಬಿಕ್ಕಟ್ಟು, ಬಿಸಿ ಗಾಳಿ: ಬೆಂಗಳೂರಿನಲ್ಲಿ ಹೆಚ್ಚಾದ ಟೈಫಾಯಿಡ್, ಗ್ಯಾಸ್ಟ್ರೋಎಂಟರೈಟಿಸ್ ಪ್ರಕರಣ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:May 01, 2024 | 9:41 AM

ಬೆಂಗಳೂರು, ಮೇ 1: ಬೆಂಗಳೂರಿನಲ್ಲಿ ತಾಪಮಾನ (Bengaluru Temperature) ಗರಿಷ್ಠ 38.5 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದ್ದು, ಬಿಸಿಲಿನ ಬೇಗೆಗೆ ಜನ ಕಂಗಾಲಾಗಿದ್ದಾರೆ. ಬಿಸಿಗಾಳಿ, ನೀರಿನ ಬಿಕ್ಕಟ್ಟು ಮತ್ತಿತರ ಕಾರಣಗಳಿಂದ ನಗರದಲ್ಲಿ ಸೋಂಕುಗಳ ಹರಡುವಿಕೆಯೂ ಹೆಚ್ಚಾಗುತ್ತಿದೆ. ಟೈಫಾಯಿಡ್ (Typhoid) ಮತ್ತು ತೀವ್ರವಾದ ಜಠರ ಕರುಳಿನ ಉರಿಯೂತ ಅಥವಾ ಗ್ಯಾಸ್ಟ್ರೋಎಂಟರೈಟಿಸ್ (Gastroenteritis) ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿರುವುದಾಗಿ ಖಾಸಗಿ ಆಸ್ಪತ್ರೆಗಳ ಮೂಲಗಳು ತಿಳಿಸಿವೆ.

ಟೈಫಾಯಿಡ್ ಪ್ರಮುಖವಾಗಿ ನೀರಿನಿಂದ ಹರಡುತ್ತದೆ. ಆದರೆ ಜಠರ ಹಾಗೂ ಕರುಳು ಸಂಬಂಧಿತ ಸಮಸ್ಯೆಗಳು ಕಲುಷಿತ ನೀರು, ಆಹಾರದಿಂದ ಹರಡುತ್ತವೆ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ.

ಟೈಫಾಯಿಡ್ ಮತ್ತು ಜಠರ ಕರುಳಿನ ಉರಿಯೂತ ಪ್ರಕರಣಗಳ ಗಮನಾರ್ಹ ಹೆಚ್ಚಳಕ್ಕೆ ನೀರಿನ ಬಿಕ್ಕಟ್ಟು ಅಥವಾ ಮಾಲಿನ್ಯ ಕಾರಣವಾಗಿರಬಹುದು. ಇವುಗಳ ಸಾಮಾನ್ಯ ರೋಗಲಕ್ಷಣಗಳಲ್ಲಿ ಜ್ವರ, ಹೊಟ್ಟೆ ನೋವು ಮತ್ತು ಅತಿಸಾರ ಸೇರಿವೆ. ಕಳೆದ ತಿಂಗಳಲ್ಲಿ ಸುಮಾರು 100 ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಫೋರ್ಟಿಸ್ ಆಸ್ಪತ್ರೆಯ ಇಂಟರ್ನಲ್ ಮೆಡಿಸಿನ್ ನಿರ್ದೇಶಕಿ ಡಾ. ಶೀಲಾ ಮುರಳಿ ಚಕ್ರವರ್ತಿ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ಸ್​ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ಸೋಂಕು ಹರಡದಂತೆ ತಡೆಗಟ್ಟಲು, ರೋಗಪೀಡಿತ ಜನರಿರುವ ಪ್ರದೇಶಗಳಿಗೆ ಪ್ರಯಾಣಿಸುವ ಜನರು ಟೈಫಾಯಿಡ್ ಲಸಿಕೆಯನ್ನು ತೆಗೆದುಕೊಳ್ಳುವುದು ಉತ್ತಮ. ಶುದ್ಧ ಮತ್ತು ಉತ್ತಮ ಕುಡಿಯುವ ನೀರನ್ನೇ ಬಳಸಬೇಕು. ನೈರ್ಮಲ್ಯವನ್ನು ಕಾಪಾಡಿಕೊಳ್ಳಬೇಕು ಮತ್ತು ಸೋಂಕು ತಡೆಗಟ್ಟಲು ಕಲುಷಿತ ಆಹಾರ ಸೇವನೆಯಿಂದ ದೂರವಿರಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಿಸಿಲ ಬೇಗೆ ಜತೆ ಜನರಿಗೆ ಮತ್ತೊಂದು ಬರೆ: ಜ್ಯೂಸ್, ಎಳನೀರು ಮತ್ತಷ್ಟು ದುಬಾರಿ

ವೈರಲ್ ಮತ್ತು ಬ್ಯಾಕ್ಟೀರಿಯಾದ ಸೋಂಕಿನಿಂದ ಜಠರಗರುಳಿನ ಪ್ರಕರಣಗಳ ಉಲ್ಬಣವಾಗಬಹುದು. ಸದ್ಯ ವಾರಕ್ಕೆ 20ರಷ್ಟು ಜಠರಗರುಳಿನ ಸೋಂಕಿನ ಪ್ರಕರಣಗಳು ನಮ್ಮ ಆಸ್ಪತ್ರೆಯಲ್ಲಿ ವರದಿಯಾಗುತ್ತಿವೆ. ಇದು ಡಿಸೆಂಬರ್‌ಗೆ ಹೋಲಿಸಿದರೆ ಶೇ 50 ರಷ್ಟು ಹೆಚ್ಚಾಗಿದೆ. ಕಲುಷಿತ ನೀರು ಮತ್ತು ಸರಿಯಾಗಿ ಬೇಯಿಸದ ಮಾಂಸಾಹಾರದಿಂದ ಈ ಸೋಂಕು ಹರಡುತ್ತಿದೆ ಎಂದು ನಾರಾಯಣ ಹೆಲ್ತ್ ಸಿಟಿಯ ಇಂಟರ್ನಲ್ ಮೆಡಿಸಿನ್‌ನ ಸಲಹೆಗಾರ ಡಾ. ನಿಧಿನ್ ಮೋಹನ್ ತಿಳಿಸಿದ್ದಾರೆ. ಸದ್ಯ ಒಂದು ವಾರದಲ್ಲಿ ಕನಿಷ್ಠ ಎರಡು ಅಥವಾ ಮೂರು ಟೈಫಾಯಿಡ್ ಪ್ರಕರಣಗಳು ವರದಿಯಾಗುತ್ತಿವೆ ಎಂದೂ ಅವರು ತಿಳಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:41 am, Wed, 1 May 24

ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ