AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Water Supply: ಬೆಂಗಳೂರಿನ ದಕ್ಷಿಣ ಭಾಗದ ಬಹುತೇಕ ಕಡೆ ನವೆಂಬರ್ 21ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

ಬೆಂಗಳೂರಿನ ದಕ್ಷಿಣ ಭಾಗದ ವಿವಿಧೆಡೆ ನವೆಂಬರ್ 21ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಕಂಡುಬರಲಿದೆ. ದಕ್ಷಿಣ ಬೆಂಗಳೂರಿನ ಸುತ್ತಮುತ್ತ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೀರು ಸರಬರಾಜು ಮಾರ್ಗಗಳನ್ನು ಬದಲಾಯಿಸಲಾಗುತ್ತಿದೆ.

Water Supply: ಬೆಂಗಳೂರಿನ ದಕ್ಷಿಣ ಭಾಗದ ಬಹುತೇಕ ಕಡೆ ನವೆಂಬರ್ 21ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ
Water Supply
TV9 Web
| Edited By: |

Updated on: Nov 18, 2022 | 11:46 AM

Share

ಬೆಂಗಳೂರಿನ ದಕ್ಷಿಣ ಭಾಗದ ವಿವಿಧೆಡೆ ನವೆಂಬರ್ 21ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಕಂಡುಬರಲಿದೆ. ದಕ್ಷಿಣ ಬೆಂಗಳೂರಿನ ಸುತ್ತಮುತ್ತ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೀರು ಸರಬರಾಜು ಮಾರ್ಗಗಳನ್ನು ಬದಲಾಯಿಸಲಾಗುತ್ತಿದೆ. ಹೀಗಾಗಿ ನವೆಂಬರ್ 21ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನೀರು ಸರಬರಾಜು ಸ್ಥಗಿಗೊಳ್ಳಲಿದೆ ಎಂದು ಬಿಡಬ್ಲ್ಯೂಎಸ್​ಎಸ್​ಬಿ ಮಾಹಿತಿ ನೀಡಿದೆ.

ಕೆಆರ್​ಪುರಂನಿಂದ ಸಿಲ್ಕ್​ಬೋರ್ಡ್​ವರೆಗೆ ಹೊರವರ್ತುಲ ರಸ್ತೆಯಲ್ಲಿನ ಕಾಮಗಾರಿ ನಡೆಯಲಿದೆ. ಹೀಗಾಗಿ ಜಂಬೂ ಸವಾರಿ ದಿಣ್ಣೆ, ಪುಟ್ಟೇನಹಳ್ಳಿ, ಕೋಣನಕುಂಟೆ ಕ್ರಾಸ್, ಜರಗನಹಳ್ಳಿ, ಜೆಪಿನಗರ 4,5,6 ಮತ್ತು 7ನೇ ಹಂತ, ತಿಲಕ್​ ನಗರ, ವಿಜಯಾಬ್ಯಾಂಕ್ ಲೇಔಟ್​, ಬಿಳೇಕಹಳ್ಳಿ, ರೋಲೆ ಕಾಲೋನಿ, ಕೋಡಿಚಿಕ್ಕನಹಳ್ಳಿ, ಎಚ್​ಎಸ್​ಆರ್ , ಬೊಮ್ಮನಹಳ್ಳಿ, ಮಂಗಮ್ಮನಪಾಳ್ಯ, ಹೊಸ ಪಾಳ್ಯ, ಎಲೆಕ್ಟ್ರಾನಿಕ್ ಸಿಟಿ 1,2,3ನೇ ಬ್ಲಾಕ್, ಕೋರಮಂಗಲ, ಕುದುರೆಮುಖ ಕಾಲೋನಿ, ಮೇಸ್ತ್ರಿ ಪಾಳ್ಯ, ಹೊಸ ಗುರಪ್ಪನಪಾಳ್ಯ, ಕೆಇಬಿ ಲೇಔಟ್​, ಸುದರ್ಶನ ಸ್ಲಂ, ಬಿಸ್ಮಿಲ್ಲಾನಗರ, ಮಾರುತಿ ಲೇಔಟ್​, ನಾರಾಯಣಪ್ಪ ಗಾರ್ಡನ್, ಮೈಕೋ ಲೇಔಟ್​, ಬಾಲಾಜಿನಗರ, ಎನ್​ಎಸ್ ಪಾಳ್ಯ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಕಂಡುಬರಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ಇನ್ನೊಂದೆಡೆ ವಿದ್ಯುತ್ ದರ ಪರಿಷ್ಕರಣೆ ಮಾದರಿಯಲ್ಲಿ ಬೆಂಗಳೂರಿನ ನೀರಿನ ದರ ಪರಿಷ್ಕರಣೆ ಮಾಡಲು ಅವಕಾಶ ನೀಡಬೇಕೆಂದು ಜಲಮಂಡಳಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ವರ್ಷಕ್ಕೊಮ್ಮೆ ನೀರಿನ ದರ ಪರಿಷ್ಕರಿ ಸಲು ಅವಕಾಶ ನೀಡಬೇಕೆಂದು ಬೆಂಗಳೂರು ಜಲಮಂಡಳಿಯು ಸರ್ಕಾರಕ್ಕೆ ಪ್ರಸ್ತಾವನೆ ನೀಡಿದೆ ಎಂದು ತಿಳಿದು ಬಂದಿದೆ.

ಮಂಡಳಿಯ ಆಡಳಿತ ನಿರ್ವಹಣಾ ವೆಚ್ಚ ಸರಿದೂಗಿಸುವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ವರ್ಷಕ್ಕೊಮ್ಮೆಯಾದರೂ ನೀರಿನ ದರ ಪರಿಷ್ಕರಣೆಗೆ ಅವಕಾಶ ನೀಡಬೇಕೆಂದು ಜಲಮಂಡಳಿಯ ಪ್ರಸ್ತಾಪವಾಗಿದ್ದು, ಸದ್ಯ ಈಗ ಅದು ರಾಜ್ಯ ಸರ್ಕಾರದ ಮುಂದಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್