Bangalore News: ಸಿಕೆ ಪಾಳ್ಯದಲ್ಲಿ ವಾಟರ್ ಟ್ರ್ಯಾಕ್ಟರ್ ಹರಿದು ಬಾಲಕ ಸಾವು

ಅಣ್ಣನ ಜತೆ ಐಸ್​ಕ್ರೀಸ್​ ಕೊಳ್ಳಲು ಬೇಕರಿಗೆ ಬಂದಿದ್ದ ಭುವನ್​ ಮೇಲೆ ಟ್ರ್ಯಾಕ್ಟರ್ ಚಲಿಸಿದೆ. ಚಾಲಕ ಕುಡಿದ ಅಮಲಿನಲ್ಲಿ ವಾಟರ್ ಟ್ಯಾಂಕರ್ ಚಲಾಯಿಸುತ್ತಿದ್ದ ಎನ್ನಲಾಗಿದೆ.

Bangalore News: ಸಿಕೆ ಪಾಳ್ಯದಲ್ಲಿ ವಾಟರ್ ಟ್ರ್ಯಾಕ್ಟರ್ ಹರಿದು ಬಾಲಕ ಸಾವು
ಘಟನಾ ಸ್ಥಳದಲ್ಲಿ ಟ್ರ್ಯಾಕ್ಟರ್ (ಒಳಚಿತ್ರದಲ್ಲಿ ಮೃತ ಬಾಲಕ)

Updated on: Jun 07, 2023 | 5:53 PM

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಸಿಕೆ ಪಾಳ್ಯ ಎಂಬಲ್ಲಿ ವಾಟರ್ ಟ್ರ್ಯಾಕ್ಟರ್ (Water Tractor) ಹರಿದು ಭುವನ್ ಎಂಬ ನಾಲ್ಕು ವರ್ಷ ವಯಸ್ಸಿನ ಬಾಲಕ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಭವಿಸಿದೆ. ಅಣ್ಣನ ಜತೆ ಐಸ್​ಕ್ರೀಸ್​ ಕೊಳ್ಳಲು ಬೇಕರಿಗೆ ಬಂದಿದ್ದ ಭುವನ್​ ಮೇಲೆ ಟ್ರ್ಯಾಕ್ಟರ್ ಚಲಿಸಿದೆ. ಚಾಲಕ ಕುಡಿದ ಅಮಲಿನಲ್ಲಿ ವಾಟರ್ ಟ್ಯಾಂಕರ್ ಚಲಾಯಿಸುತ್ತಿದ್ದ ಎನ್ನಲಾಗಿದೆ.

ವಾಟರ್ ಟ್ರ್ಯಾಕ್ಟರ್​​ ಭುವನ್ ತಲೆ ಮೇಲೆ ಹರಿದಿದ್ದು ಗಂಭೀರ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಗಾಯಾಳು ಬಾಲಕ ಮೃತಪಟ್ಟಿದ್ದಾನೆ. ಘಟನೆ ನಂತರ ವಾಟರ್ ಟ್ಯಾಂಕರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

(The following Video contains material that may be disturbing. Viewer discretion is advised)

ಭುವನ್ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Bengaluru News: ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸಾವು: ಚಾಲಕ ವಶಕ್ಕೆ

ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಮೆಜೆಸ್ಟಿಕ್​ನ ಸಂಗೊಳ್ಳಿ ರಾಯಣ್ಣ ಸೇತುವೆ ಬಳಿ ಇತ್ತೀಚೆಗಷ್ಟೇ ಸಂಭವಿಸಿತ್ತು. ಇದರ ಕಹಿ ನೆನಪು ಮಾಸುವ ಮುನ್ನವೇ ಇದೀಗ ಟ್ರ್ಯಾಕ್ಟರ್​ ಚಾಲಕನ ಬೇಜವಾಬ್ದಾರಿ, ಅಜಾಗರೂಕತೆಯ ಚಾಲನೆಯಿಂದ ಬಾಲಕ ಮೃತಪಟ್ಟಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Wed, 7 June 23

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us