ನಾವು ಪಾಕಿಸ್ತಾನದ ಮುಸ್ಲಿಮರಲ್ಲ, ಸಹಬಾಳ್ವೆಗೆ ನಮ್ಮ ಮೊದಲ ಆದ್ಯತೆ: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್

ನಾವು ಬಹಳ ಗೌರವದಿಂದ ಭಾರತದಲ್ಲಿ ಬಾಳುತ್ತಿದ್ದೇವೆ. ಮುಂದೆಯೂ ಕೂಡ ನಾವು ಗೌರವಯುತವಾಗಿ ಇರುತ್ತೇವೆ ಎಂದು ಚಾಮರಾಜಪೇಟೆ ಶಾಸಕ ಬಿ.ಝಡ್.ಜಮೀರ್ ಅಹಮದ್ ಖಾನ್ ಹೇಳಿದರು.

ನಾವು ಪಾಕಿಸ್ತಾನದ ಮುಸ್ಲಿಮರಲ್ಲ, ಸಹಬಾಳ್ವೆಗೆ ನಮ್ಮ ಮೊದಲ ಆದ್ಯತೆ: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್
ಶಾಸಕ ಜಮೀರ್ ಅಹ್ಮದ್ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 11, 2022 | 1:13 PM

ಬೆಂಗಳೂರು: ನಾವು ಪಾಕಿಸ್ತಾನದ ಮುಸ್ಲಿಮರಲ್ಲ, ಭಾರತೀಯ ಮುಸ್ಲಿಮರು. ಶಾಂತಿ ಸಹಬಾಳ್ವೆಗೆ ನಮ್ಮ ಮೊದಲ ಆದ್ಯತೆ. ನಾವು ಬಹಳ ಗೌರವದಿಂದ ಭಾರತದಲ್ಲಿ ಬಾಳುತ್ತಿದ್ದೇವೆ. ಮುಂದೆಯೂ ಕೂಡ ನಾವು ಗೌರವಯುತವಾಗಿ ಇರುತ್ತೇವೆ ಎಂದು ಚಾಮರಾಜಪೇಟೆ ಶಾಸಕ ಬಿ.ಝಡ್.ಜಮೀರ್ ಅಹಮದ್ ಖಾನ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಇತ್ತೀಚಿಗೆ ನಡೆದ ಕೆಲ ಬೆಳವಣಿಗೆಗಳ ಕುರಿತು ಪರೋಕ್ಷವಾಗಿ ಪ್ರಸ್ತಾಪಿಸಿರುವ ಅವರು, ಸಾವಿನ ಮನೆಯಲ್ಲಿಯೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ದೂರಿದ್ದಾರೆ. ಈ ಹಿಂದಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಗಲಭೆಗಳು ನಡೆಯುತ್ತಿದ್ದವು. ನಾನು ಚಾಮರಾಜಪೇಟೆ ಕ್ಷೇತ್ರದ ಶಾಸಕನಾಗುವ ಮುಂಚೆಯೂ ಗಲಭೆ ನಡೆಯುತ್ತಿತ್ತು. ನಾನು ಶಾಸಕನಾದ ನಂತರ ಕ್ಷೇತ್ರದಲ್ಲಿ ಶಾಂತಿ ನೆಲೆಸಿದೆ. ಇಲ್ಲಿ ಗಲಭೆ ಸೃಷ್ಟಿಸಲೇಬೇಕೆಂದು ಬಿಜೆಪಿ ಮುಖಂಡರು ಯತ್ನಿಸುತ್ತಿದ್ದಾರೆ. ಈಗ ಚಂದ್ರು ಕೊಲೆಯ ವಿಚಾರದಲ್ಲಿಯೂ ರಾಜಕಾರಣ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ನನ್ನ ಕ್ಷೇತ್ರದಲ್ಲಿ ಶಾಂತಿ ಕದಡಲು ನಾನು ಅವಕಾಶ ಮಾಡಿಕೊಡುವುದಿಲ್ಲ. ಮುಂದಿನ ದಿನಗಳಲ್ಲಿ ಚಾಮರಾಜಪೇಟೆಯು ಶಾಂತಿಯ ನೆಲೆವೀಡು ಆಗಲಿದೆ. ಚಂದ್ರು ಸಾವಿನ ನಂತರ ತನಿಖೆ ನಡೆಸಿದ ನಗರ ಪೊಲೀಸ್ ಆಯುಕ್ತರು ಇದೊಂದು ಕೊಲೆ ಎಂದು ಕಮಿಷನರ್ ತಿಳಿಸಿದ್ದಾರೆ. ಆದರೆ ಬಿಜೆಪಿಯವರು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರ ಈ ತಂತ್ರಕ್ಕೆ ಯಾರು ಮತದಾರರು ನಮ್ಮ ಕ್ಷೇತ್ರದವರು ಮಣಿಯಬಾರದು. ಶಾಂತಿ ಸಹಬಾಳ್ವೆಯಿಂದ ನಾವು ಇರಬೇಕು ಎಂದು ಕರೆನೀಡಿರುವ ಜಮೀರ್, ಎಲ್ಲರೂ ಒಂದೇ ಇಲ್ಲಿ ಎಂದು ಹೇಳಿದ್ದಾರೆ.

ಆರೋಪಿಗಳಿಗೆ ಕೊಲೆ ಉದ್ದೇಶ ಇರಲಿಲ್ಲ

ಬೆಂಗಳೂರಿನ ಜೆ.ಜೆ.ನಗರದಲ್ಲಿ ಯುವಕ ಚಂದ್ರು ಹತ್ಯೆ ಪ್ರಕರಣದ ಆರೋಪಿಗಳಿಗೆ ಕೊಲೆ ಮಾಡುವ ಉದ್ದೇಶ ಇರಲಿಲ್ಲ. ಆರೋಪಿ ಚಿಕ್ಕವಯಸ್ಸಿನಲ್ಲೇ ಚಾಕು ಇಟ್ಟುಕೊಂಡು ಓಡಾಡುವುದನ್ನು ರೂಢಿಸಿಕೊಂಡಿದ್ದ. ಯಾರನ್ನೇ ಆದರೂ ಕೊಲೆ ಮಾಡುವುದು ತಪ್ಪು. ಬಿಜೆಪಿಯವರು ಶವ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ತೊಡೆಗೆ ಚಾಕು ಹಾಕಿದ್ದರಿಂದ ನರ ತುಂಡಾಗಿದೆ. ರಕ್ತಸ್ರಾವ ನಿಲ್ಲದ ಕಾರಣ ಆ ವ್ಯಕ್ತಿ ಸಾವನ್ನಪ್ಪಿದ್ದಾನೆ. ಕೊಲೆ ನಡೆದು ಎರಡು ದಿನ ಆದ ಮೇಲೆ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಶವ ಇರುವಾಗ ಯಾರು ಬಂದಿರಲಿಲ್ಲ. ಬೇರೆ ದಿನ ಬಂದು ರಾಜಕೀಯ ಮಾಡುತ್ತಿದ್ದಾರೆ. ಯಾವುದಾದ್ರು ಗಲಾಟೆಯಲ್ಲಿ ರಾಜಕಾರಣಿ ಸತ್ತಿದ್ದಾರಾ? ಜನರಿಂದ ಆಯ್ಕೆಯಾದ ಸರ್ಕಾರದಲ್ಲಿ, ಗಲಭೆ ಇಲ್ಲ. ತಮಿಳುನಾಡಿನಲ್ಲಿ ಹಿಜಾಬ್ ಗಲಾಟೆ ಇಲ್ಲ. ಆದರೆ ಇಲ್ಲಿ ರಾಜಕೀಯ ಲಾಭಗೊಸ್ಕರ ಗಲಭೆ ಸೃಷ್ಠಿ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಇದನ್ನೂ ಓದಿ: ಸರ್! ನೀವು ಇದ್ದೀರಿ ಅನ್ನುವ ಏಕ ಮಾತ್ರ ಕಾರಣಕ್ಕೆ ಕಾಂಗ್ರೆಸ್​ನಲ್ಲಿದ್ದೇನೆ- ಸಿದ್ದರಾಮಯ್ಯ ಮನೆಯಲ್ಲಿ ಜಮೀರ್ ಖಾನ್ ಹೇಳಿಕೆ

ಇದನ್ನೂ ಓದಿ: ಕೊಲೆಯಾದ ಚಂದ್ರು ಕುಟುಂಬಕ್ಕೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್​ರಿಂದ ರೂ. 2 ಲಕ್ಷ ನೆರವು

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್