ಅಫ್ಘಾನಿಸ್ತಾನದ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡುತ್ತೇವೆ; ಪೊಲೀಸ್ ಆಯುಕ್ತ ಕಮಲ್ ಪಂತ್

ತೊಂದರೆ ಇದ್ದರೆ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಲಿ. ದಾಖಲೆಯಲ್ಲಿ ಸಮಸ್ಯೆ ಇದ್ದರೂ ಅದನ್ನು ಸರಿಪಡಿಸುತ್ತೇವೆ ಎಂದು ಕಮಲ್ ಪಂತ್ ತಿಳಿಸಿದರು.

ಅಫ್ಘಾನಿಸ್ತಾನದ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡುತ್ತೇವೆ; ಪೊಲೀಸ್ ಆಯುಕ್ತ ಕಮಲ್ ಪಂತ್
ಪೊಲೀಸ್ ಆಯುಕ್ತ ಕಮಲ್ ಪಂತ್
Follow us
TV9 Web
| Updated By: sandhya thejappa

Updated on:Aug 18, 2021 | 11:58 AM

ಬೆಂಗಳೂರು: ಅಫ್ಘಾನಿಸ್ತಾನದ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡುತ್ತೇವೆ ಎಂದು ಬೆಲೆಬಾಳುವ ವಸ್ತುಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ತೊಂದರೆ ಇದ್ದರೆ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಲಿ. ದಾಖಲೆಯಲ್ಲಿ ಸಮಸ್ಯೆ ಇದ್ದರೂ ಅದನ್ನು ಸರಿಪಡಿಸುತ್ತೇವೆ ಎಂದು ಕಮಲ್ ಪಂತ್ (Kamal Pant) ತಿಳಿಸಿದರು. ಇನ್ನು ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, 30 ಕೋಟಿ ಬೆಲೆಬಾಳುವ ವಸ್ತುಗಳನ್ನು ಪ್ರದರ್ಶನ ಮಾಡಲಾಗಿತ್ತು. ಡ್ರಗ್ಸ್ ಸೀಜ್ ಮಾಡಿದ್ದನ್ನು ಪ್ರದರ್ಶನಕ್ಕೆ ಇಟ್ಟಿದ್ದೀವಿ ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra), ಬೆಂಗಳೂರು ನಗರದಲ್ಲಿ 339 ಅಫ್ಘಾನಿಸ್ತಾನದ ಪ್ರಜೆಗಳಿದ್ದಾರೆ. ಅಫ್ಘಾನಿಸ್ತಾನ ಪ್ರಜೆಗಳು ಅಸಹಾಯಕರಾಗಿ ನೋಡುತ್ತಿದ್ದಾರೆ. ಮಾನವೀಯ ದೃಷ್ಟಿಯಿಂದ ಅವರ ಜತೆ ಸರ್ಕಾರ ಇದೆ. ವೀಸಾ ಅವಧಿ ವಿಸ್ತರಣೆ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದೆ. ಹೀಗಾಗಿ ಕೇಂದ್ರ ಸರ್ಕಾರದ ಜೊತೆಯೂ ಮಾತನಾಡುತ್ತೇವೆ. ನಮ್ಮ ಸರ್ಕಾರ ಬೆಂಗಳೂರಿನಲ್ಲಿರುವ ಆಫ್ಘನ್ನರ ಪರವಾಗಿದೆ ಎಂದು ಹೇಳಿದರು.

ಆತಂಕದಲ್ಲಿರುವ ಆಫ್ಘನ್ ವಿದ್ಯಾರ್ಥಿಗಳು ಕರ್ನಾಟಕದಲ್ಲಿರುವ ಆಫ್ಘನ್ ವಿದ್ಯಾರ್ಥಿಗಳು ತಮ್ಮ ದೇಶದ ಪರಿಸ್ಥಿತಿ ಕಂಡು ಆತಂಕದಲ್ಲಿದ್ದಾರೆ. ಈ ಬಗ್ಗೆ ಟಿವಿ9 ಮುಂದೆ ವಿದ್ಯಾರ್ಥಿಗಳು ಆತಂಕ ತೋಡಿಕೊಂಡಿದ್ದಾರೆ. ಕೃಷಿ ವಿವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಝಬಿವುಲ್ಲಾ ಎಂಬ ವಿದ್ಯಾರ್ಥಿ, ನಮಗೆ ಸಾಕಷ್ಟು ಆತಂಕವಾಗಿದೆ. ಅಲ್ಲಿನ ಪರಿಸ್ಥಿತಿ ತುಂಬಾನೇ ಕಷ್ಟಕರವಾಗಿದೆ. ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದೇವೆ. ಮೂರು ದಿನಗಳ ಹಿಂದೆ ಇದ್ದ ಪರಿಸ್ಥಿತಿ ಇವತ್ತು ಇಲ್ಲ. ತಾಲಿಬಾನಿಗಳು ಯಾರನ್ನೂ ಕೊಲ್ಲುತ್ತಿಲ್ಲ. ನಾವು ಯಾರನ್ನೂ ಕೊಲ್ಲೋದಿಲ್ಲ ಅಂತಾ ಹೇಳಿದ್ದಾರೆ. ಇದರಿಂದ ಕೊಂಚ ನೆಮ್ಮದಿಯಾಗಿದೆ. ನಮ್ಮ ಆತಂಕವನ್ನು ವಿವಿ ಆಳಿತದವರಿಗೆ ತಿಳಿಸಿದ್ದೇವೆ. ಎಲ್ಲರೂ ನಮ್ಮ ಬೆಂಬಲಕ್ಕೆ ಇದ್ದಾರೆ. ನಾವು ಒಟ್ಟು 15 ಜನರಿದ್ದೇವೆ. ಅದರಲ್ಲಿ 5 ವಿದ್ಯಾರ್ಥಿಗಳು ದೇಶಕ್ಕೆ ಹೋಗಿದ್ದಾರೆ. ಅವರು ಮರಳಿ ಬರಲು ಸಾಧ್ಯವಾಗುತ್ತಿಲ್ಲ. ನಮಗೆ ಭವಿಷ್ಯದ ಬಗ್ಗೆ ಆತಂಕವಾಗುತ್ತಿದೆ. ಮುಂದಿನ ದಿನಗಳು ಹೇಗಿರಲಿವೆಯೋ ಗೊತ್ತಿಲ್ಲ. ಮಾನಸಿಕವಾಗಿ ನಾವು ನೆಮ್ಮದಿ ಕಳೆದುಕೊಂಡಿದ್ದೇವೆ ಅಂತ ಅಳಲು ತೋಡಿಕೊಂಡಿದ್ದಾನೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಕಳುವಾಗಿದ್ದ 40 ಕೆ.ಜಿ. ಚಿನ್ನಾಭರಣವನ್ನು ಮಾಲೀಕರಿಗೆ ವಾಪಸ್ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಸುನಂದಾ ಪುಷ್ಕರ್​ ಪ್ರಕರಣ: ಶಶಿ ತರೂರ್​​ರನ್ನು ಆರೋಪ ಮುಕ್ತಗೊಳಿಸಿದ ದೆಹಲಿ ನ್ಯಾಯಾಲಯ

(We are provide assistance to Afghan students said Kamal Pant)

Published On - 11:48 am, Wed, 18 August 21

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ