ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲು- ತುಷಾರ್ ಗಿರಿನಾಥ್​

ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವ ಆರೋಪ ಬಗ್ಗೆ ಚುನಾವಣಾ ಆಯುಕ್ತರಿಗೆ ಮಾಹಿತಿ ನೀಡಿ, ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲಿಸಿದ್ದೇವೆ ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ತಿಳಿಸಿದರು.

ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲು- ತುಷಾರ್ ಗಿರಿನಾಥ್​
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
Follow us
TV9 Web
| Updated By: ವಿವೇಕ ಬಿರಾದಾರ

Updated on: Nov 18, 2022 | 3:36 PM

ಬೆಂಗಳೂರು: ನಗರದಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಐಡಿ ಕಾರ್ಡ್​ನಲ್ಲಿ ಭೂತ್​ ಮಟ್ಟದ ಆಫೀಸರ್​​ (BLO) ಎಂದು ನಮೂದು ಮಾಡಿಕೊಂಡಿದ್ದಾರೆ. ಈ ವಿಚಾರ ನವೆಂಬರ್​ 2ರಂದು ಗೊತ್ತಾಗಿದೆ. ಚುನಾವಣಾ ಆಯುಕ್ತರಿಗೆ ಮಾಹಿತಿ ನೀಡಿ, ಸಂಸ್ಥೆ ಅನುಮತಿ ರದ್ದು ಮಾಡಿದ್ದೇವೆ. ಹಾಗೆ ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲಿಸಿದ್ದೇವೆ ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ತಿಳಿಸಿದರು.

ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 2018ರಿಂದ ಚಿಲುಮೆ ಸಂಸ್ಥೆಗೆ ಮತದಾನದ ಜಾಗೃತಿಗೆ ಅನುಮತಿ ನೀಡಿದ್ದೇವೆ. ಈ ವರ್ಷ ಉಚಿತವಾಗಿ ಅರಿವು ಮೂಡಿಸುತ್ತೇವೆ ಎಂದು ಸಂಸ್ಥೆ ಹೇಳಿತ್ತು. ಹಾಗಾಗಿ ಚಿಲುಮೆ ಸಂಸ್ಥೆಗೆ ಅನುಮತಿಯನ್ನು ನೀಡಲಾಗಿತ್ತು ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ಹೇಳಿದ್ದಾರೆ.

ಚಿಲುಮೆ ಸಂಸ್ಥೆಯನ್ನು ಆಧಾರ್​ ಜೋಡಣೆ ಬಗ್ಗೆಯೂ ಜಾಗೃತಿ ಮೂಡಿಸಲು ಬಳಸಿದ್ದೇವೆ. ಸಮರ್ಥಂ ಸಂಸ್ಥೆಯಿಂದ ನಮಗೆ ಒಂದು ದೂರು ಬಂದಿತ್ತು. ಬಿಬಿಎಂಪಿಯಿಂದ PLO ಐಡಿ ಬಂದಿದೆ ಅನ್ನೋ ದೂರು ಬಂದಿತ್ತು. ಈ ಘಟನೆಯ ಬಗ್ಗೆ ನಾವು CEO ಆಫೀಸ್​ಗೆ ಮಾಹಿತಿ ನೀಡಿದ್ದೇವೆ ಎಂದರು.

ಚಿಲುಮೆ ಸಂಸ್ಥೆಗೆ ಸರ್ವೆ ಮಾಡುವ ಅಧಿಕಾರ ಇಲ್ಲ. ಖಾಸಗಿ ಮಾಹಿತಿ ಸಂಗ್ರಹ ಮಾಡುವಂತಿಲ್ಲ, ಒಂದೊಮ್ಮೆ ಮಾಡಿದರೇ ತನಿಖೆ ಮಾಡಲು ದೂರು ನೀಡಿದ್ದೇವೆ. ರಿಜಿನಲ್ ಕಮಿಷನರ್ ತನಿಖೆ ಮಾಡಲಿದ್ದಾರೆ. ಎಲ್ಲಾ ಆರ್​ಒ ಗಳಿಂದ ಮಾಹಿತಿ ಪಡೆಯಲಾಗುತ್ತಿದೆ. ಮಾಹಿತಿ ಪಡೆದು ಕ್ರಮ ತೆಗೆದುಕೊಳ್ಳುತ್ತೇವೆ. 48 ಗಂಟೆಯೊಳಗೆ ಮಾಹಿತಿ ನೀಡಲು ಸೂಚನೆ ನೀಡಿದ್ದೇನೆ. ಯಾರೆಲ್ಲ ಐಡಿ ಕಾರ್ಡ್ ಹಂಚಿಕೆ ಮಾಡಿದ್ದಾರೋ ಅವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ