AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮದು ವರ್ಷಕ್ಕೆ 2 ಸಾವಿರ ಕೋಟಿ ವಹಿವಾಟು: ವಿದೇಶದಲ್ಲಿ ಹೂಡಿಕೆಗೆ ಪ್ಲ್ಯಾನ್ ಇತ್ತು ಎಂದ ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ ಸಾಮ್ರಾಜ್ಯದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ವಿಚಾರ ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಈ ಕುರಿತಾಗಿ ಪ್ರತಿಕ್ರಿಯಿಸಿರುವ ಅವರು, ನಮ್ಮ ವಾರ್ಷಿಕ ವಹಿವಾಟೇ 2 ಸಾವಿರ ಕೋಟಿ ಇದೆ. ಮಕ್ಕಳ ಹೆಸರಿನಲ್ಲಿ ಆಫ್ರಿಕಾದಲ್ಲಿ ಕಂಪನಿ ಇರೋದು ನಿಜ, ಅದನ್ನ ಐಟಿಗೆ ಈಗಾಗಲೇ ತೋರಿಸಿದ್ದೇವೆ ಎಂದಿದ್ದಾರೆ.

ನಮ್ಮದು ವರ್ಷಕ್ಕೆ 2 ಸಾವಿರ ಕೋಟಿ ವಹಿವಾಟು: ವಿದೇಶದಲ್ಲಿ ಹೂಡಿಕೆಗೆ ಪ್ಲ್ಯಾನ್ ಇತ್ತು ಎಂದ ಸಚಿವ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿImage Credit source: tv9 kannada
ಈರಣ್ಣಾ ಬಸವಾ
| Edited By: |

Updated on: Sep 11, 2026 | 5:38 PM

Share

ಬೆಂಗಳೂರು, ಸೆಪ್ಟೆಂಬರ್​ 11: ಸಚಿವ ಸತೀಶ್ ಜಾರಕಿಹೊಳಿಗೆ ಸೇರಿದ್ದ ಬೆಂಗಳೂರು, ಬೆಳಗಾವಿ ಸೇರಿ ಬರೋಬ್ಬರಿ 18 ಕಡೆ ಸತತ 36 ಗಂಟೆಗಳ ಕಾಲ ನಡೆದಿದ್ದ ಇಡಿ ಅಧಿಕಾರಿಗಳ ತಲಾಶ್ ನಿನ್ನೆ ಅಂತ್ಯವಾಗಿದೆ. ಇಂಚಿಂಚೂ ಜಾಲಾಡಿರುವ ಅಧಿಕಾರಿಗಳಿಗೆ 2 ಕೋಟಿ ರೂ. ನಗದು, ಅನಾಮಧೇಯ ಆಸ್ತಿ ಪತ್ರಗಳು ಹಾಗೂ ವಿದೇಶಿ ಹೂಡಿಕೆಯ ಸ್ಫೋಟಕ ದಾಖಲೆಗಳು ಲಭ್ಯವಾಗಿವೆ. ಈ ಕುರಿತಾಗಿ ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ, ‘ವಿದೇಶದಲ್ಲಿ ಗಣಿಗಾರಿಕೆ ನಡೆಸುವ ಮತ್ತು ಹೂಡಿಕೆ ಮಾಡುವ ಚಿಂತನೆ ಇತ್ತೇ ವಿನಃ ಇನ್ನೂ ಎಲ್ಲಿಯೂ ಹೂಡಿಕೆ ಮಾಡಿಲ್ಲ’ ಎಂದಿದ್ದಾರೆ.

ಗಣಿಗಾರಿಕೆಯಲ್ಲಿ ಹೂಡಿಕೆ ಮಾಡಲು ಹುಡುಕುತ್ತಿದ್ದೆ: ಸಚಿವ ಸತೀಶ್ ಜಾರಕಿಹೊಳಿ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ವಿದೇಶಗಳಲ್ಲಿ ಮೈನಿಂಗ್ ಮತ್ತು ಟ್ರೇಡಿಂಗ್ ಮಾಡುವ ಯೋಚನೆಯಿದ್ದು, ಹೂಡಿಕೆಗಾಗಿ ಬೇರೆ ಬೇರೆ ದೇಶಗಳಲ್ಲಿ ಹುಡುಕಾಟ ನಡೆಸುತ್ತಿದ್ದೆ, ಆದರೆ ಇನ್ನೂ ಯಾವುದೇ ಇನ್ವೆಸ್ಟ್‌ಮೆಂಟ್ ಮಾಡಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಸಿಕ್ಕ ಹಣ ನಮ್ಮದೇ: 37 ಗಂಟೆಗಳ ಕಾಲ ಇಡಿ ದಾಳಿಯ ಮಾಹಿತಿ ಹಂಚಿಕೊಂಡ ಸತೀಶ್ ಜಾರಕಿಹೊಳಿ

‘ಇನ್ನು ದಾಳಿ ವೇಳೆ ಸಿಕ್ಕಿರುವ ಎರಡು ಕೋಟಿ ರೂ ಹಣದ ಮೂಲ ನಮ್ಮದೇ, ಅದು ಬೇರೆಯವರದ್ದಲ್ಲ. ನಮ್ಮ ಸಂಸ್ಥೆಯಲ್ಲಿ ವರ್ಷಕ್ಕೆ 2 ಸಾವಿರ ಕೋಟಿ ರೂ ವಹಿವಾಟು ನಡೆಯುತ್ತದೆ. ನಮ್ಮ ಮನೆಯಲ್ಲಿ ಕೆಲಸ ಮಾಡುವವರ ಸಂಬಳ ಒಂದು ಲಕ್ಷ ರೂ ಇದೆ. ಮಾರುಕಟ್ಟೆಗೆ ಹೋದರೆ ಒಂದು ಲಕ್ಷ ರೂ ಖರ್ಚು ಮಾಡುತ್ತಾರೆ’ ಎಂದು ಮಾಹಿತಿ ನೀಡಿದರು.

ಮಗಳು ಮತ್ತು ಮಗನ ಹೆಸರಿನಲ್ಲಿ ಆಫ್ರಿಕಾದಲ್ಲಿ ಕಂಪನಿ

‘ತಮ್ಮ ಮಗಳು ಮತ್ತು ಮಗನ ಹೆಸರಿನಲ್ಲಿ ಆಫ್ರಿಕಾದಲ್ಲಿ ಕಂಪನಿ ಇರುವುದು ನಿಜ’ ಎಂದಿರುವ ಸಚಿವರು, ‘ಆ ಕಂಪನಿಯು ಕೇವಲ ಅಸ್ತಿತ್ವದಲ್ಲಿದೆ ಅಷ್ಟೇ, ಸದ್ಯಕ್ಕೆ ಯಾವುದೇ ವಹಿವಾಟು ನಡೆಯುತ್ತಿಲ್ಲ. ಕಂಪನಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಈಗಾಗಲೇ ಆದಾಯ ತೆರಿಗೆ ಇಲಾಖೆಗೆ ಸಲ್ಲಿಸಲಾಗಿದೆ. ಜಾರಿ ನಿರ್ದೇಶನಾಲಯಕ್ಕೆ ಈ ದಾಖಲೆಗಳನ್ನು ನೀಡುವ ಅಗತ್ಯವಿರಲಿಲ್ಲ, ಆದರೂ ಈಗ ಇ.ಡಿಯವರು ಕೇಳಿದರೆ ಎಲ್ಲ ದಾಖಲೆಗಳನ್ನು ಒದಗಿಸಲು ಸಿದ್ಧ’ ಎಂದಿದ್ದಾರೆ.

LIVE TV

ಕಾಂಗ್ರೆಸ್ ಟಾರ್ಗೆಟ್; ರಾಜಕೀಯ ಪ್ರೇರಿತ ದಾಳಿ: ಡಿಕೆ ಶಿವಕುಮಾರ್

ಇನ್ನು ಸತೀಶ್ ಜಾರಕಿಹೊಳಿ ಮೇಲಿನ ಇಡಿ ದಾಳಿ ಕುರಿತು ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ‘ಸತೀಶ್ ಜಾರಕಿಹೊಳಿ ಅವರು ಯಾವುದೇ ತಪ್ಪು ಮಾಡಿಲ್ಲ, ಕಾನೂನಿನ ಚೌಕಟ್ಟಿನಲ್ಲೇ ವ್ಯವಹಾರ ನಡೆಸಿದ್ದಾರೆ. ಇನ್ನು ಮೂರ್ನಾಲ್ಕು ಜನರ ಮೇಲೆ ದಾಳಿ ಆಗುತ್ತೆ. ಕೆಲವರನ್ನ ಟ್ರ್ಯಾಪ್ ಮಾಡುತ್ತಿದ್ದಾರೆ ಎಂದು ಮಾಹಿತಿ ಬಂದಿದೆ. ಇಡೀ ಕಾಂಗ್ರೆಸ್ ಪಕ್ಷವನ್ನ ಟಾರ್ಗೆಟ್ ಮಾಡಿದ್ದಾರೆ. ಏಕೆ ವಿರೋಧ ಪಕ್ಷದವರ ಮೇಲೆ ದಾಳಿ ಆಗುತ್ತಿಲ್ಲ? ಇದೆಲ್ಲಾ ರಾಜಕೀಯ ಪ್ರೇರಿತ ದಾಳಿ ಆಗಿದೆ. ನಾವೆಲ್ಲಾ ಇದಕ್ಕೆ ಹೆದರಲ್ಲ’ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಈರಣ್ಣಾ ಬಸವಾ
ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ