ನಾವು ಸಿದ್ದರಾಮೋತ್ಸವಕ್ಕೆ ಬೇಕಿದ್ದರೆ ಸಹಕಾರ ನೀಡುತ್ತೇವೆ, ಆದರೆ ನಮಗೆ ಭಯವಿಲ್ಲ: ಅಧ್ಯಕ್ಷ ನಳೀನ್ ಕುಮಾರ್ ಕಟೀಲು

ಕಾಂಗ್ರೆಸ್​ನಲ್ಲಿ ತಮ್ಮ ಅಸ್ತಿತ್ವ ಉಳಿಸ್ಕೋಬೇಕು. ಹೈಕಮಾಂಡ್​ಗೆ ತಮ್ಮ ಶಕ್ತಿ ತೋರಿಸಬೇಕು. ಮುಂದಿನ‌ ಮುಖ್ಯಮಂತ್ರಿ ನಾನೇ ಅಂತ ಘೋಷಣೆ ಮಾಡಬೇಕೆಂಬ ಒತ್ತಡವನ್ನು ಸಿದ್ದರಾಮಯ್ಯ ಸೃಷ್ಟಿಸುತ್ತಿದ್ದಾರೆ.

ನಾವು ಸಿದ್ದರಾಮೋತ್ಸವಕ್ಕೆ ಬೇಕಿದ್ದರೆ ಸಹಕಾರ ನೀಡುತ್ತೇವೆ, ಆದರೆ ನಮಗೆ ಭಯವಿಲ್ಲ: ಅಧ್ಯಕ್ಷ ನಳೀನ್ ಕುಮಾರ್ ಕಟೀಲು
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲು
TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Jul 07, 2022 | 3:35 PM

ಬೆಂಗಳೂರು: ನಾವು ಸಿದ್ದರಾಮೋತ್ಸವಕ್ಕೆ (Siddharamotsava) ಬೇಕಿದ್ದರೆ ಸಹಕಾರ ಕೊಡುತ್ತೇವೆ. ಆದರೆ ಸಿದ್ದರಾಮೋತ್ಸವದಿಂದ ನಮಗೆ ಯಾವುದೇ ಭಯ ಇಲ್ಲ ಎಂದು ನಗರದಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿಕೆ ನೀಡಿದರು. ಇನ್ನೂ 4-5 ಲಕ್ಷ ಜನರನ್ನು ಬೇಕಿದ್ರೆ ಕಳುಹಿಸಿಕೊಡುತ್ತೇವೆ. ಆದರೆ ಸಿದ್ದರಾಮೋತ್ಸವದಿಂದ ಭಯ ಆಗುತ್ತಿರುವುದು ಡಿ.ಕೆ. ಶಿವಕುಮಾರಗೆ. ಇದನ್ನು ಶುರು ಮಾಡಿದ ನಂತರ ಡಿ.ಕೆ. ಶಿವಕುಮಾರ ನಿದ್ದೆ ಮಾಡುತ್ತಿಲ್ಲ. ಸಿದ್ದರಾಮಯ್ಯನವರು ಡಿ.ಕೆ.ಶಿವಕುಮಾರ್​​​ ನಿದ್ದೆ ಕೆಡಿಸಿದ್ದಾರೆ. ಮುಂದಿನ ಸಿಎಂ ಎಂದು ತೋರಿಸಿಕೊಳ್ಳಲು ಸಿದ್ದರಾಮಯ್ಯ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ತನ್ನ ಜೊತೆಗಿದ್ದವರನ್ನೆಲ್ಲ ಮುಗಿಸಿದ್ದಾರೆ. ಇದೀಗ ಡಿ.ಕೆ. ಶಿವಕುಮಾರ ಮುಗಿಸಲು ಈ ತಂತ್ರವನ್ನು ಹೆಣೆದಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿದರು.

PSI ನೇಮಕಾತಿ ಹಗರಣದ ಕುರಿತು ಮಾತನಾಡಿದ್ದು, ತನಿಖೆ ಹಗ್ಗ ಕಾಂಗ್ರೆಸ್ ಕುತ್ತಿಗೆಯನ್ನೇ ಸುತ್ತಿಕೊಳ್ಳುತ್ತೆ. ಇದನ್ನು ಸಿದ್ದರಾಮಯ್ಯ ಅರಿತುಕೊಳ್ಳಬೇಕು. ಸಿಐಡಿ ತನಿಖೆ ಪೂರ್ಣಗೊಂಡ ಬಳಿಕ ಎಲ್ಲವೂ ಹೊರಬರುತ್ತದೆ. ಕಾಂಗ್ರೆಸ್​ನ ಯಾರೆಲ್ಲ ಭಾಗಿಯಾಗಿದ್ದಾರೆ ಅನ್ನೋದು ಗೊತ್ತಾಗುತ್ತೆ ಎಂದು ಹೇಳಿದರು. ಸಿಎಂ, ಗೃಹ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಅವಧಿಯಲ್ಲಿ ಹಗರಣಗಳ ರಾಶಿಯೇ ಬಿದ್ದಿತ್ತು. ಅಧಿಕಾರಕ್ಕೆ ಏರಿದ ಮರುದಿನವೇ ರಾಜೀನಾಮೆ ನೀಡಬೇಕಿತ್ತು. ಅಧಿಕಾರಿಗಳಾದ ಡಿ.ಕೆ.ರವಿ, ಗಣಪತಿ ಆತ್ಮಹತ್ಯೆಗೆ ಶರಣಾಗಿದ್ದರು. ಹಲವು ಡಿವೈಎಸ್​​ಪಿಗಳು ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಹಗರಣಗಳೇ ತುಂಬಿದ್ದವು. ಆಗ ಯಾರ ವಿರುದ್ಧವೂ ಸರ್ಕಾರ ಕ್ರಮಕೈಗೊಂಡಿಲ್ಲ. ಸಿದ್ದರಾಮಯ್ಯಗೆ ಸಿಎಂ ರಾಜೀನಾಮೆ ಕೇಳುವ ನೈತಿಕತೆಯಿಲ್ಲ ಎಂದು ಸಿದ್ದರಾಮಯ್ಯಗೆ ನಳಿನ್ ಕುಮಾರ್ ಕಟೀಲು ತಿರುಗೇಟು ನೀಡಿದರು.

ಇದನ್ನೂ ಓದಿ: Politics: ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ VS ಡಿಕೆಶಿ ಫೈಟ್; ಮತ್ತೆ ಮುನ್ನೆಲೆಗೆ ಬಂದ ಮೂಲ ಕಾಂಗ್ರೆಸ್ಸಿಗ, ವಲಸಿಗ ವಿಚಾರ

ಕಾಂಗ್ರೆಸ್​ನಲ್ಲಿ ತಮ್ಮ ಅಸ್ತಿತ್ವ ಉಳಿಸ್ಕೋಬೇಕು. ಹೈಕಮಾಂಡ್​ಗೆ ತಮ್ಮ ಶಕ್ತಿ ತೋರಿಸಬೇಕು. ಮುಂದಿನ‌ ಮುಖ್ಯಮಂತ್ರಿ ನಾನೇ ಅಂತ ಘೋಷಣೆ ಮಾಡಬೇಕೆಂಬ ಒತ್ತಡವನ್ನು ಸಿದ್ದರಾಮಯ್ಯ ಸೃಷ್ಟಿಸುತ್ತಿದ್ದಾರೆ. ಡಿ.ಕೆ. ಶಿವಕುಮಾರ ಮುಗಿಸೋದು ಸಿದ್ದರಾಮಯ್ಯ ತಂತ್ರ. ಈಗಾಗಲೇ ಜನತಾ ದಳವನ್ನು ಸಿದ್ದರಾಮಯ್ಯ ಮುಗಿಸಿದರು. ಕಾಂಗ್ರೆಸ್​ಗೆ ಬಂದು ನಿಜವಾದ ಕಾಂಗ್ರೆಸಿಗರನ್ನು ಹೊರಗಿಟ್ರು. ದಲಿತ ಸಿಎಂ ಆಗಬೇಕಾಗಿದ್ದ ಖರ್ಗೆಯವರನ್ನು ಹೊರಗಿಟ್ರು. ಪರಮೇಶ್ವರ್ ಅವರನ್ನು ಸೋಲಿಸಿದ್ರು. ಈಗ ಡಿಕೆಶಿ ಮುಗಿಸುವ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಎಸಿಬಿ ಎಡಿಜಿಪಿ ವಿರುದ್ಧ ನ್ಯಾ.ಹೆಚ್.ಪಿ.ಸಂದೇಶ್ ಟೀಕೆ ಹಿನ್ನೆಲೆ ಹೈಕೋರ್ಟ್ ಮೊರೆ ಹೋದ ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada