ಹೊಸ ವರ್ಷದ ಪಾರ್ಟಿಯಲ್ಲಿ ಡ್ರಗ್ಸ್​ ಸೇವಿಸದಂತೆ ಪೊಲೀಸ್ ಇಲಾಖೆಯ ಹದ್ದಿನ ಕಣ್ಣು

ಈ ಬಾರಿಯೂ ಹೊಸ ವರ್ಷಾಚರಣೆಯ ಪಾರ್ಟಿಯಲ್ಲಿ ಮಾದಕ ವಸ್ತು ಬಳಸುವ ಮಾಹಿತಿ ಇದೆ. ಅದಕ್ಕಾಗಿ ವಿಶೇಷ ತಂಡ ರಚನೆ ಮಾಡಿ 5 ದಿನದಿಂದ ಕಾರ್ಯಾಚರಣೆ ನಡೆಸಲಾಗಿದೆ. ಐದು ದಿನದಲ್ಲಿ 11 ಪ್ರಕರಣ ದಾಖಲಿಸಿ 21 ಜನರನ್ನು ಸೆರೆ ಹಿಡಿಯಲಾಗಿದೆ.

ಹೊಸ ವರ್ಷದ ಪಾರ್ಟಿಯಲ್ಲಿ ಡ್ರಗ್ಸ್​ ಸೇವಿಸದಂತೆ ಪೊಲೀಸ್ ಇಲಾಖೆಯ ಹದ್ದಿನ ಕಣ್ಣು
ಕಮಲ್ ಪಂತ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 16, 2021 | 8:06 PM

ಬೆಂಗಳೂರು: ಬರ್ಮಾ ದೇಶದ ಗಡಿ ಭಾಗದಿಂದ ನಮ್ಮ ರಾಜ್ಯಕ್ಕೆ ಡ್ರಗ್ಸ್ ಬರುತ್ತಿದೆ. ಬರ್ಮಾ ಭಾಗದ ಕೆಲ‌ವರನ್ನು ಈಗಾಗಲೇ ಬಂಧಿಸಿದ್ದೇವೆ. ಡ್ರಗ್ಸ್​ ಜಾಲದ ಬಗ್ಗೆ ಯಾರಾದರೂ ನಮಗೆ ಮಾಹಿತಿ ನೀಡಿದರೆ ಅದನ್ನು ಗೌಪ್ಯವಾಗಿಡುತ್ತೇವೆ. ಹೊಸ ವರ್ಷಾಚರಣೆ ವೇಳೆ ಪಾರ್ಟಿ ಮಾಡುವ ಸಾಧ್ಯತೆ ಇದೆ. ಈ ವರ್ಷ ಯಾರೂ ಮಾದಕ ವಸ್ತು ಬಳಸಬಾರದು ಅಂತ ಮುಂಜಾಗ್ರತಾ ಕ್ರಮ ಜರುಗಿಸಿದ್ದೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಈ ಬಾರಿಯೂ ಹೊಸ ವರ್ಷಾಚರಣೆಯ ಪಾರ್ಟಿಯಲ್ಲಿ ಮಾದಕ ವಸ್ತು ಬಳಸುವ ಮಾಹಿತಿ ಇದೆ. ಅದಕ್ಕಾಗಿ ವಿಶೇಷ ತಂಡ ರಚನೆ ಮಾಡಿ 5 ದಿನದಿಂದ ಕಾರ್ಯಾಚರಣೆ ನಡೆಸಲಾಗಿದೆ. ಐದು ದಿನದಲ್ಲಿ 11 ಪ್ರಕರಣ ದಾಖಲಿಸಿ 21 ಜನರನ್ನು ಸೆರೆ ಹಿಡಿಯಲಾಗಿದೆ. 2021 ರ ಕೊನೆಯ ಹಂತದಲ್ಲಿ ಇದ್ದೇವೆ. ಹೊಸ ವರ್ಷ ಆಚರಣೆಗಾಗಿ ಈ ವರ್ಷದ ಕೊನೆಯಲ್ಲಿ ಪಾರ್ಟಿ ಮಾಡುವ ಸಾಧ್ಯತೆ ಇದೆ. ಇಂತಹ ಪಾರ್ಟಿಯಲ್ಲಿ ಮಾದಕ ವಸ್ತು ಬಳಕೆ ಮಾಡೋ ಮಾಹಿತಿ ಇದೆ. ಈ ವರ್ಷ ಯಾರೂ ಮಾದಕ ವಸ್ತು ಬಳಸಬಾರದು ಎಂದು ಮುಂಜಾಗ್ರತಾ ಕ್ರಮ ಜರುಗಿಸಿದ್ದೇವೆ. ಇದಕ್ಕೆ ವಿಶೇಷ ತಂಡ ರಚನೆ ಮಾಡಿ ಕಳೆದ ಐದು ದಿನದಿಂದ ಕಾರ್ಯಾಚರಣೆ ನಡೆಸಿದ್ದೇವೆ ಎಂದು ಕಮಲ್ ಪಂತ್ ತಿಳಿಸಿದ್ದಾರೆ.

ಬೆಂಗಳೂರಿನ ದಕ್ಷಿಣ ವಿಭಾಗದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಬಂದಿದ್ದ ಮೂವರು ವಿದೇಶಿ ಪ್ರಜೆಗಳು ಸೇರಿದಂತೆ ಆರು ಮಂದಿ ಡ್ರಗ್ಸ್ ಪೆಡ್ಲರ್​ಗಳನ್ನು ನಿನ್ನೆ ಪೊಲೀಸರು ಬಂಧಿಸಿ ಹೆರಾಯಿನ್, ಮೊಬೈಲ್ ಹಾಗೂ ಹಣವನ್ನು ವಶಪಡಿಸಿಕೊಂಡಿದ್ದರು. ಕನಕಪುರ ರಸ್ತೆಯ ಕೋಣನಕುಂಟೆ ಕ್ರಾಸ್‍ನ ಮೆಟ್ರೋ ರೈಲ್ವೆ ನಿಲ್ದಾಣದ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಮಣಿಪುರ ರಾಜ್ಯದ ಮೂವರನ್ನು ಬಂಧಿಸಿ, ಹೆರಾಯಿನ್ ವಶಪಡಿಸಿಕೊಂಡಿದ್ದರು.

ಡ್ರಗ್ಸ್​ ದಂಧೆಯ ವಿರುದ್ಧ ಸಮರ ಸಾರಿರುವ ಬೆಂಗಳೂರು ನಗರ ಪೊಲೀಸರು ಕಳೆದ 5 ತಿಂಗಳಲ್ಲಿ 60 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಗೆ ಹೋಲಿಸಿದರೆ ಬೆಂಗಳೂರು ಪೊಲೀಸರು ಈ ವರ್ಷ ಮೂರು ಪಟ್ಟು ಅಧಿಕ ಪ್ರಮಾಣದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. 2021ರ ನವೆಂಬರ್‌ ಅಂತ್ಯದವರೆಗೆ ಮಾದಕ ವಸ್ತು ಸಾಗಾಟ ಮತ್ತು ಮಾರಾಟ, ಆಮದು ಮಾಡಿಕೊಳ್ಳುವವರ ವಿರುದ್ಧ ನಗರ ಪೊಲೀಸರು 3800 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. 12,300 ಎಲ್‌ಎಸ್‌ಡಿ ಸ್ಟ್ರಿಫ್ಸ್‌ಗಳು, 7,900 ಎಕ್ಸ್‌ಟೆಸಿ ಮಾತ್ರೆಗಳು, 3,400 ಕೆ.ಜಿ. ಗಾಂಜಾ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದವರಿಂದ 2 ಲಕ್ಷ ರೂ. ದಂಡ ವಸೂಲಿ!

ಹಾಲಿನ ಪೌಡರ್‌ ಬಾಕ್ಸ್‌ನಲ್ಲಿ ಮತ್ತೇರಿಸುವ ಡ್ರಗ್ಸ್ ಪೂರೈಕೆ: ವಿಚಾರಣೆಗೆ ಬರುವಂತೆ ಪ್ರೆಸ್ಟೀಜ್ ಗ್ರೂಪ್‌ ಮುಖ್ಯಸ್ಥೆ ಅಂಜುಂಗೆ ನೋಟಿಸ್

Published On - 8:04 pm, Thu, 16 December 21

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು