ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡ್ತೇವೆ: ಸಚಿವ ಮಧು ಬಂಗಾರಪ್ಪ

| Updated By: ಗಂಗಾಧರ​ ಬ. ಸಾಬೋಜಿ

Updated on: Dec 21, 2023 | 3:32 PM

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆರೋಗ್ಯ ಇಲಾಖೆ ಸಲಹೆ ಮೇರೆಗೆ ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ. ಕೊವಿಡ್ ಏರಿಕೆ ಅನಿಸುತ್ತಿದೆ. ಈಗ ಸಿಎಂ ಸಿದ್ದರಾಮಯ್ಯ ಜೊತೆ ಕೂಡ ಈ ಬಗ್ಗೆ ಚರ್ಚೆಯಾಗಿದೆ. ಹೀಗಾಗಿ ಏನೆಲ್ಲಾ ಕ್ರಮ ವಹಿಸಬೇಕು ಅಂತಾ ನಿರ್ಧಾರ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. 

ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡ್ತೇವೆ: ಸಚಿವ ಮಧು ಬಂಗಾರಪ್ಪ
ಶಿಕ್ಷಣ ಸಚಿವ ಮಧು ಬಂಗಾರಪ್ಪ
Follow us on

ಬೆಂಗಳೂರು, ಡಿಸೆಂಬರ್​ 21: ಕೊರೊನಾ ಒಮಿಕ್ರಾನ್ ರೂಪಾಂತರಿ ತಳಿ JN.1 ಭೀತಿ ಶುರುವಾಗಿದೆ. ಆರೋಗ್ಯ ಇಲಾಖೆ ಸಲಹೆ ಮೇರೆಗೆ ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಆರೋಗ್ಯ ಇಲಾಖೆ ಮಾರ್ಗಸೂಚಿ ಪರಿಗಣಿಸುತ್ತೇವೆ. ಏನೆಲ್ಲಾ ಕ್ರಮ ವಹಿಸಬೇಕು ಅಂತಾ ನಿರ್ಧಾರ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಕೊವಿಡ್ ಏರಿಕೆ ಅನಿಸುತ್ತಿದೆ. ಈಗ ಸಿಎಂ ಸಿದ್ದರಾಮಯ್ಯ ಜೊತೆ ಕೂಡ ಈ ಬಗ್ಗೆ ಚರ್ಚೆಯಾಗಿದೆ. ಹೀಗಾಗಿ ಮಾಸ್ಕ್ ಟೆಸ್ಟಿಂಗ್ ಎಲ್ಲದರ ಬಗ್ಗೆ ನಿರ್ಧಾರ ಮಾಡುತ್ತಿದ್ದಾರೆ ಎಂದಿದ್ದಾರೆ.

ಮಕ್ಕಳು ಮಾಸ್ಕ್ ಹಾಕಿಕೊಂಡರೆ ಒಳ್ಳೆಯದು ಅಲ್ವಾ: ಸಿಎಂ ಸಿದ್ದರಾಮಯ್ಯ

ಶಾಲಾ ಮಕ್ಕಳಿಗೆ ಮಾಸ್ಕ್ ಕಡ್ಡಾಯಗೊಳಿಸುವ ವಿಚಾರವಾಗಿ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಕ್ಯಾಬಿನೆಟ್ ಸಬ್ ಕಮಿಟಿ ರಚಿಸಿ ಅಲ್ಲಿ ತೀರ್ಮಾನ ಮಾಡಲಾಗುತ್ತೆ. ಮಕ್ಕಳು ಮಾಸ್ಕ್ ಹಾಕಿಕೊಂಡರೆ ಒಳ್ಳೆಯದು ಅಲ್ವಾ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ ಸಭೆ ಅಂತ್ಯ: ಕ್ರಿಸ್​ಮಸ್​, ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದ ಸಿಎಂ

ಖಾಸಗಿ ಆಸ್ಪತ್ರೆಗಳಲ್ಲಿ RT-PCR ದರ ನಿಗದಿ ಮಾಡುವ ವಿಚಾರವಾಗಿ ಮಾತನಾಡಿದ್ದು, ಕ್ಯಾಬಿನೆಟ್ ಉಪಸಮಿತಿಯಲ್ಲಿ ಎಲ್ಲವನ್ನೂ ಚರ್ಚೆ ಮಾಡುತ್ತೇವೆ. ಎಲ್ಲೆಡೆ ಟೆಸ್ಟ್ ಮಾಡಿಸಲು ಮುಂದಾದರೆ ಮತ್ತೆ ಜಾಸ್ತಿ ಆಗಬಹುದು ಎಂದಿದ್ದಾರೆ.

ಮುಂದಿನ ವರ್ಷದಿಂದ ಶಾಲಾ ಹೊರೆ ಮತಷ್ಟು ಕಡಿಮೆ: ಸಚಿವ ಮಧು ಬಂಗಾರಪ್ಪ

ಶಾಲಾ ಪಠ್ಯ ಪರಿಸ್ಕರಣೆ ವಿಚಾರವಾಗಿ ಮಾತನಾಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಲಾ ಬ್ಯಾಗ್ ಹೊರೆಯಾಗುತ್ತಿದೆ. ಇದನ್ನ ಪರಿಗಣಿಸಿ ಶಾಲಾ ಹೊರೆ ಕಡಿಮೆ ಮಾಡುತ್ತೇವೆ. ಮುಂದಿನ ವರ್ಷದಿಂದ ಶಾಲಾ ಹೊರೆ ಮತಷ್ಟು ಕಡಿಮೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಗಡಿಯಲ್ಲಿ ಹೈಅಲರ್ಟ್: ಶಬರಿಮಲೆ, ಮಹಾರಾಷ್ಟ್ರದಿಂದ ಬರುವವರಿಗೆ RTPCR ಟೆಸ್ಟ್​​​ ಕಡ್ಡಾಯ

ಟಿಪ್ಪು ಪಠ್ಯ ಕಡಿತ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ತಜ್ಞರು ಏನು ಕೊಡುತ್ತಾರೆ ನಾವು ಅದನ್ನೆ ನೀಡುತ್ತೇವೆ. ಪಠ್ಯ ತಿರುಚಿವ ಪ್ರಯತ್ನ ಮಾಡುವುದಿಲ್ಲ ಎಂದಿದ್ದಾರೆ. ಬಿಬಿಎಂಪಿ ಶಾಲೆಗಳನ್ನ ಶಿಕ್ಷಣ ವ್ಯಾಪ್ತಿಗೆ ಪಡೆಯುವುದು ನಾಳೆ ಡಿಸಿಎಂ ಜೊತೆ ಈ ವಿಚಾರ ಸಭೆ ಇದೆ. ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:23 pm, Thu, 21 December 23