ಬೆಂಗಳೂರಲ್ಲಿ ಮುಂದಿನ ದಿನಗಳಲ್ಲಿ ಒತ್ತುವರಿ ಆಗದಂತೆ ಕ್ರಮ ವಹಿಸಲಾಗುತ್ತದೆ: ಸಿಎಂ ಬೊಮ್ಮಾಯಿ

ಬೆಂಗಳೂರು ಮಹಾನಗರದಲ್ಲಿ ಮುಂದೆ ಒತ್ತುವರಿ ಆಗದಂತೆ ತನಿಖೆ ನಡೆಸ್ತೇನೆ ಎಂದು ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಲ್ಲಿ ಮುಂದಿನ ದಿನಗಳಲ್ಲಿ ಒತ್ತುವರಿ ಆಗದಂತೆ ಕ್ರಮ ವಹಿಸಲಾಗುತ್ತದೆ: ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 19, 2022 | 6:32 PM

ಬೆಂಗಳೂರು: ಮಹಾನಗರದಲ್ಲಿ ಮುಂದಿನ ದಿನಗಳಲ್ಲಿ ಒತ್ತುವರಿ (Encroachment)  ಆಗದಂತೆ ತನಿಖೆ ನಡೆಸ್ತೇನೆ ಎಂದು ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಒಬ್ಬ ನ್ಯಾಯಾಂಗ ಅಧಿಕಾರಿಯ ನೇತೃತ್ವದಲ್ಲಿ ತಾಂತ್ರಿಕ ಸದಸ್ಯರನ್ನೊಳಗೊಂಡ ತನಿಖಾ ಆಯೋಗವನ್ನು ರಚಿಸುತ್ತೇನೆ ಎಂದರು.

ಕೆರೆ, ರಾಜಕಾಲುವೆ, ಬಫರ್ ಝೋನ್ ಒತ್ತುವರಿ ಮಾಡಿರುವ ಸಂಬಂಧ ತನಿಖಾ ಆಯೋಗ ರಚನೆ

ಕೆರೆ, ರಾಜಕಾಲುವೆ, ಬಫರ್‌ಜೋನ್‌ ಒತ್ತುವರಿ ಸಂಬಂಧ ತನಿಖೆ ಮಾಡಲಾಗುತ್ತದೆ. ಬೆಂಗಳೂರಿನ ಮಳೆ ನಿರ್ವಹಣೆಗಾಗಿ ಬಿಡಿಎ, ಬಿಬಿಎಂಪಿ, ಜಲಮಂಡಳಿ ಒಟ್ಟಾಗಿ ಮಾಸ್ಟರ್ ಪ್ಲಾನ್ ಮಾಡಬೇಕಾಗಿದೆ. ಈಗಿರುವ ಮಾಸ್ಟರ್ ಪ್ಲಾನ್ ಮರು ತಿದ್ದುಪಡಿ ಮಾಡಲು ನಿರ್ಧರಿಸಲಾಗಿದೆ. ಇದನ್ನು ಸರಿಪಡಿಲು ಇನ್ನೂ ನಾಲ್ಕೈದು ವರ್ಷ ಆಗುತ್ತದೆ. ಇದೊಂದು ನಿರಂತರ ಪ್ರಕ್ರಿಯೆ ಆಗಬೇಕಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಏನೆಲ್ಲಾ ಅತಿಕ್ರಮಣ ಆಗಿದೆಯೋ ಅದನ್ನೆಲ್ಲಾ ತೆಗೆಯುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಒಟ್ಟು ಬಿಬಿಎಂಪಿ ವ್ಯಾಪ್ತಿಯಲ್ಲಿ 2,626 ಒತ್ತುವರಿ ಗುರುತಿಸಲಾಗಿದೆ. 2016 ರವರೆಗೆ 428 ಒತ್ತುವರಿ ತೆರವು ಮಾಡಲಾಗಿದೆ. 2018 ಬಳಿಕ 1,502 ಒತ್ತುವರಿ ತೆಗೆದಿದ್ದೇವೆ. 602 ಒತ್ತುವರಿ ತೆರವಿಗೆ ಬಾಕಿ ಇದೆ. ಬೆಂಗಳೂರಿನ ಪ್ರವಾಹ ನಿರ್ವಹಣೆಗೆ ಕಳೆದ ವರ್ಷ 1,600 ಕೋಟಿ ಕೊಟ್ಟಿದ್ದೇವೆ. ರಾಜಕಾಲುವೆ ನಿರ್ವಹಣೆಗೆ 300 ಕೋಟಿ ರೂ. ಕೊಡಲಾಗಿದ್ದು, ಇನ್ನು 300 ಕೋಟಿ ರೂ. ರಸ್ತೆ ಅಭಿವೃದ್ಧಿಗೆ ಕೊಡಲಾಗುತ್ತದೆ. ಒಟ್ಟು ಸುಮಾರು 600 ಕೋಟಿ ರೂ. ಕೊಡಲಾಗುತ್ತದೆ. ಮಳೆ ನಿರ್ವಹಣೆ ಸಂಬಂಧ ಒಂದು ಕಾರ್ಯಪಡೆ ರಚನೆ ಮಾಡಲಾಗುತ್ತದೆ. ಪ್ರತಿವರ್ಷ ಬಜೆಟ್ ನಲ್ಲಿ ಇದಕ್ಕೆ ಅನುದಾನ ಕೊಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಅತಿವೃಷ್ಟಿಗೆ ಯೋಜನಾರಹಿತವಾದ ನಗರ ಬೆಳವಣಿಗೆ ಕಾರಣ: ಸಿಎಂ ಬೊಮ್ಮಾಯಿ

ಬೆಂಗಳೂರಿನಲ್ಲುಂಟಾದ ಅತಿವೃಷ್ಟಿಗೆ ನಗರವನ್ನು ಯೋಜನಾ ರಹಿತವಾಗಿ ಬೆಳೆಸಿರುವುದೇ ಕಾರಣ ಎಂದು ಪ್ರತಿಪಕ್ಷಗಳ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಉತ್ತರಿಸಿದ್ದಾರೆ. ಮೂಲ ಬೆಂಗಳೂರು ಸಂಪೂರ್ಣವಾಗಿ ಬದಲಾಗಿದೆ. ಶಿವಾಜಿನಗರ, ಅಲಸೂರು, ಸ್ಯಾಂಕಿ ಭಾಗದಲ್ಲೂ ಮಳೆಯಾಗಿದೆ. ಅದರೆ ಅಲ್ಲಿ ಮಳೆ ನೀರು ಹರಿದುಹೋಗಿರುವುದರಿಂದ ಸಮಸ್ಯೆಯಾಗಿಲ್ಲ. ಬೆಂಗಳೂರು ನಗರದಲ್ಲಿ ಒಳಚರಂಡಿ ನೀರು ಹೆಚ್ಚಾಗುತ್ತಿರುವುದರಿಂದ  ಅದನ್ನು ನೇರವಾಗಿ ರಾಜಕಾಲುವೆಗೆ ಬಿಡುವ ಕೆಲಸ ಆಗುತ್ತಿದೆ ಎಂದರು.

ಬೆಂಗಳೂರಿನ 4 ವಲಯಗಳ ಪೈಕಿ 2 ವಲಯಗಳಲ್ಲಿ ಸಮಸ್ಯೆಯಾಗಿದೆ. ಎನ್​ಜಿಟಿ ಆದೇಶವನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ರಾಜಕಾಲುವೆಯ ಪಕ್ಕ ಇರುವ ಮನೆಗಳನ್ನು ಪರಿಶೀಲಿಸಿದ್ದು, ರಾಜಕಾಲುವೆ ಕ್ಲಿಯರ್ ಮಾಡಲು ಕೆಲ ಮನೆಗಳ ತೆರವು ಅನಿವಾರ್ಯವಾಗಿದೆ. ಪ್ರಮುಖ ಕೆರೆಗಳಿಗೆ ಸ್ಲೂಯಿಸ್ ಗೇಟ್ ಹಾಕಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಳೆ ಹಾನಿ ತಡೆಗೆ ಕ್ರಮಕೈಗೊಳ್ಳಲಾಗಿದೆ. ಒತ್ತುವರಿಯಾಗಿರುವ ರಾಜಕಾಲುವೆಗಳನ್ನು ತೆರವುಗೊಳಿಸುತ್ತೇವೆ. ಡ್ರೈನೇಜ್ ನೀರು ಸರಾಗವಾಗಿ ಹರಿದು ಹೋಗಲು ಕ್ರಮಕೈಗೊಳ್ಳಲಾಗುವುದು. ರಾಜಕಾಲುವೆಗಳ ದುರಸ್ತಿಗೆ ಅನುದಾನ ಬಿಡಗಡೆ ಆಗಿದೆ. ಮಳೆಗಾಲ ಮುಗಿದ ಕೂಡಲೇ ದುರಸ್ತಿ ಕಾರ್ಯ ಆರಂಭವಾಗುತ್ತದೆ. ಬಿಎಂಆರ್​ಡಿ, ಬಿಡಿಎ ವ್ಯಾಪ್ತಿಯಲ್ಲಿ ಹಲವು ಹಳ್ಳಿಗಳು ಇವೆ. 110 ಹಳ್ಳಿಗಳಲ್ಲಿ ಆಗ ನೀರಾವರಿ ಕಾಲುವೆಗಳು ಇದ್ದವು, ಆದರೆ ಈಗ ಗ್ರಾಮಗಳಲ್ಲಿ ಕಾಲುವೆಗಳು ಮಾಯವಾಗಿವೆ ಎಂದು ಹೇಳಿದರು.

ರಾಜ್ಯದಲ್ಲಿ ಉಂಟಾದ ಅತಿವೃಷ್ಟಿ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಹಾನಿಯಾಗಿದೆ. ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 700 ಕೋಟಿ ಬಿಡುಗಡೆ ಮಾಡುತ್ತಿದ್ದೇವೆ. ಅವಶ್ಯಕತೆ ನೋಡಿಕೊಂಡು ಹೆಚ್ಚಿನ ಹಣ ಬಿಡುಗಡೆ ಮಾಡುತ್ತೇವೆ. ನೆರೆ ನಿರ್ವಹಣೆಯಲ್ಲಿ ತಡ ಮಾಡದೇ ಕಾರ್ಯ ನಿರ್ವಹಣೆ ಮಾಡಿದ್ದೇವೆ. ಮಳೆ ಹಾನಿ ಸಂಬಂಧ 126 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.

ಮನೆಗಳಿಗೆ ಹಾನಿಯಾದವರಿಗೆ ತಕ್ಷಣ ಹಣ ನೀಡುವ ಕೆಲಸ ಮಾಡಿದ್ದೇವೆ. ವರದಿ ಬಂದ ಕೂಡಲೇ ಬೆಳೆ ಪರಿಹಾರ ಬಿಡುಗಡೆ ಮಾಡಿದ್ದೇವೆ. ಭೂಕುಸಿತಕ್ಕೆ ಎನ್‌ಡಿಆರ್‌ಎಫ್‌ನಡಿ ಪರಿಹಾರ ಇಲ್ಲ. ಇದನ್ನೂ ಎನ್‌ಡಿಆರ್‌ಎಫ್‌ನಡಿ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:30 pm, Mon, 19 September 22

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ