ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನಿನ್ನೆ (ಏಪ್ರಿಲ್ 23) ಒಂದೇ ದಿನ ನಗರದಲ್ಲಿ 132 ಹೊಸ ಕೇಸ್ ದಾಖಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದೆ. ಏಪ್ರಿಲ್ 27ರಂದು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಇದೆ. ಪ್ರಧಾನಿ ನರೇಂದ್ರ ಮೋದಿ ನೀಡುವ ಸಲಹೆ, ಸೂಚನೆ ಮೇರೆಗೆ ಕೊರೊನಾ ನಿಯಂತ್ರಣದ ಬಗ್ಗೆ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
2ನೇ ಅಲೆ ಸಂದರ್ಭದಲ್ಲಿ ನಿರ್ಲಕ್ಷ್ಯದಿಂದ ಸಮಸ್ಯೆಯಾಗಿತ್ತು. ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ತಜ್ಞರು ಸಲಹೆ ನೀಡಿದ್ದಾರೆ. ರಾಜ್ಯದ ಜನರು ಕೂಡ ಕೊರೊನಾ ಬಗ್ಗೆ ನಿರ್ಲಕ್ಷ್ಯ ಮಾಡಬಾರದು ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ.
ಇನ್ನು 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಎಷ್ಟೇ ಚಾಣಕ್ಷರಿದ್ದರೂ, ಪ್ರಭಾವಿಗಳಿದ್ದರೂ ಕ್ರಮಕೈಗೊಳ್ಳುತ್ತೇವೆ. ದಿವ್ಯಾ ಹಾಗರಗಿ ಎಲ್ಲೇ ಅಡಗಿದ್ದರೂ ಬಂಧಿಸುವುದು ನಿಶ್ಚಿತ. ನಾನೇನು ತನಿಖಾಧಿಕಾರಿ ಅಲ್ಲ, ಖಂಡಿತ ಅರೆಸ್ಟ್ ಆಗುತ್ತಾರೆ. ದಿವ್ಯಾ ಹಾಗರಗಿಗೆ ಸೇರಿದ ಮನೆ, ಶಾಲೆ ಸೀಜ್ ಮಾಡಿದ್ದೇವೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದರು.
ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವ ವಿಚಾರದ ಬಗ್ಗೆ ತನಿಖೆ ನಡೆಯುತ್ತಿದೆ. ಪೂರ್ಣ ಪ್ರಮಾಣದ ತನಿಖೆಗೆ ಸೂಚನೆ ನೀಡಿದ್ದೇನೆ. ಮೇಲ್ ಎಲ್ಲಿಂದ ಬಂದಿದೆ ಅನ್ನೋದು ತನಿಖೆಯಾಗಲಿದೆ. ಕೇಂದ್ರ ಸರ್ಕಾರದ ಸಹಾಯದಿಂದ ನಾವು ಅದರ ಬುಡಕ್ಕೆ ಹೋಗಿ ತನಿಖೆ ಮಾಡುತ್ತೇವೆ ಅಂತ ಸಿಎಂ ತಿಳಿಸಿದರು.
ಇದನ್ನೂ ಓದಿ
ನುಗ್ಗಿಬಂದ ವಿಶ್ವ ಪಾಸ್ ಫೇಲ್ ದಿನದ ನೆನಪು ಮತ್ತು ಹುಂಡುಕೋಳಿ ಶಭಿ ಕಥೆ
Published On - 11:57 am, Sun, 24 April 22