ನಾವು ಕಾಂಗ್ರೆಸ್‌ನಲ್ಲಿಯೇ ಇದ್ದಿದ್ದರೆ ಸಮಾಧಿ ಆಗುತ್ತಿದ್ದೆವು- S.T.ಸೋಮಶೇಖರ್

ಬೆಂಗಳೂರು: ಸೋತವರಿಗೆ ಸಚಿವಸ್ಥಾನವಿಲ್ಲವೆಂದು ಈಶ್ವರಪ್ಪ ಹೇಳಿಕೆ ವಿಚಾರ ಸಂಬಂಧಿಸಿ ‘ಸುಪ್ರೀಂ’ ಆದೇಶದಂತೆ ಸೋತವರಿಗೆ ಸಚಿವಸ್ಥಾನ ನೀಡಲಾಗಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ವಿಧಾನಪರಿಷತ್​ಗೆ ಆಯ್ಕೆ ಮಾಡುವಂತೆ ನಾವ್ಯಾರೂ ಕೇಳಿಲ್ಲ. ಹೆಚ್.ವಿಶ್ವನಾಥ್‌ರನ್ನು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದ್ರು. ಆದ್ರೆ ಹೆಚ್.ವಿಶ್ವನಾಥ್‌ರವರೇ ಉಪಚುನಾವಣೆಗೆ ಸ್ಪರ್ಧಿಸಿದ್ದರು. ಡಿಸೆಂಬರ್ 10ರಂದು 17 ಅನರ್ಹ ಶಾಸಕರು ಒಟ್ಟಿಗೆ ಸೇರಿ ಚರ್ಚಿಸ್ತೇವೆ. ಬಿಜೆಪಿ ಯಾವುದೇ ಅನರ್ಹ ಶಾಸಕರಿಗೂ ಮೋಸ ಮಾಡಿಲ್ಲ. ನಾವು ಕಾಂಗ್ರೆಸ್‌ನಲ್ಲಿಯೇ ಇದ್ದಿದ್ದರೆ ಸಮಾಧಿ ಆಗುತ್ತಿದ್ದೆವು. ಹೊರಗೆ ಬಂದು ಸಮಾಧಿ ಆಗುವುದನ್ನು […]

ನಾವು ಕಾಂಗ್ರೆಸ್‌ನಲ್ಲಿಯೇ ಇದ್ದಿದ್ದರೆ ಸಮಾಧಿ ಆಗುತ್ತಿದ್ದೆವು- S.T.ಸೋಮಶೇಖರ್
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ ಸೋಮಶೇಖರ್
Follow us
ಸಾಧು ಶ್ರೀನಾಥ್​
|

Updated on: Dec 08, 2019 | 6:06 PM

ಬೆಂಗಳೂರು: ಸೋತವರಿಗೆ ಸಚಿವಸ್ಥಾನವಿಲ್ಲವೆಂದು ಈಶ್ವರಪ್ಪ ಹೇಳಿಕೆ ವಿಚಾರ ಸಂಬಂಧಿಸಿ ‘ಸುಪ್ರೀಂ’ ಆದೇಶದಂತೆ ಸೋತವರಿಗೆ ಸಚಿವಸ್ಥಾನ ನೀಡಲಾಗಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ವಿಧಾನಪರಿಷತ್​ಗೆ ಆಯ್ಕೆ ಮಾಡುವಂತೆ ನಾವ್ಯಾರೂ ಕೇಳಿಲ್ಲ. ಹೆಚ್.ವಿಶ್ವನಾಥ್‌ರನ್ನು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದ್ರು. ಆದ್ರೆ ಹೆಚ್.ವಿಶ್ವನಾಥ್‌ರವರೇ ಉಪಚುನಾವಣೆಗೆ ಸ್ಪರ್ಧಿಸಿದ್ದರು. ಡಿಸೆಂಬರ್ 10ರಂದು 17 ಅನರ್ಹ ಶಾಸಕರು ಒಟ್ಟಿಗೆ ಸೇರಿ ಚರ್ಚಿಸ್ತೇವೆ. ಬಿಜೆಪಿ ಯಾವುದೇ ಅನರ್ಹ ಶಾಸಕರಿಗೂ ಮೋಸ ಮಾಡಿಲ್ಲ. ನಾವು ಕಾಂಗ್ರೆಸ್‌ನಲ್ಲಿಯೇ ಇದ್ದಿದ್ದರೆ ಸಮಾಧಿ ಆಗುತ್ತಿದ್ದೆವು. ಹೊರಗೆ ಬಂದು ಸಮಾಧಿ ಆಗುವುದನ್ನು ತಪ್ಪಿಸಿಕೊಂಡಿದ್ದೇವೆ.

ಕಾಂಗ್ರೆಸ್ ನಾಯಕರಿಗೆ ಪಕ್ಷ ಬೆಳೆಸುವ ಉದ್ದೇಶವೇ ಇರಲಿಲ್ಲ. ಕಾಂಗ್ರೆಸ್ ನಾಯಕರೇ ಪಕ್ಷವನ್ನು ಹಾಳುಮಾಡಿದರು. ನಾನು ಕಾಂಗ್ರೆಸ್‌ನಲ್ಲಿದ್ದಾಗ ನಾಯಕತ್ವಕ್ಕೆ ಸ್ಪರ್ಧೆ ಮಾಡಲಿಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿಯಷ್ಟೇ ನನ್ನ ಗಮ‌ನದಲ್ಲಿ ಇರುವುದು. ನಾವು ಮಂತ್ರಿಯಾಗಬೇಕೆಂಬ ಆಸೆಯಿಂದ ಬಿಜೆಪಿ ಸೇರಲಿಲ್ಲ. ನನ್ನನ್ನು ಮಂತ್ರಿ ಮಾಡದಿದ್ರೂ ಕ್ಷೇತ್ರ ಅಭಿವೃದ್ಧಿ ಮಾಡ್ತೇನೆ. ಸಚಿವಸ್ಥಾನ ಕೊಡಿ ಎಂದು ನಾನು ಸಿಎಂ ಬಳಿ ಕೇಳಲೂ ಇಲ್ಲ ಎಂದು ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ