Weather Today: ಕರ್ನಾಟಕದ ಹಲವೆಡೆ ಇಂದು, ನಾಳೆ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

Karnataka Rain: ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ತೀವ್ರವಾದ ವಾಯುಭಾರ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯಾತೆ ಇದೆ ಎಂದು ಅಂದಾಜಿಸಲಾಗಿದೆ.

Weather Today: ಕರ್ನಾಟಕದ ಹಲವೆಡೆ ಇಂದು, ನಾಳೆ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
ಮಳೆ
Follow us
| Updated By: ganapathi bhat

Updated on:Mar 07, 2022 | 8:28 AM

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕ ರಾಜ್ಯದಲ್ಲಿ ಇಂದು ಮತ್ತು ನಾಳೆ (ಮಾರ್ಚ್ 7, 8) ಮಳೆಯಾಗುವ ಸಾಧ್ಯತೆ ಇದೆ (Karnataka Rain Updates) ಎಂದು ತಿಳಿದುಬಂದಿದೆ. ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ ಸಾಧ್ಯತೆ ಇದೆ. ಇಂದು (ಮಾರ್ಚ್ 7) ಕೋಲಾರ, ಚಿಕ್ಕಮಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ನಾಳೆ (ಮಾರ್ಚ್ 8) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಮಳೆ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ದಕ್ಷಿಣ ಬಂಗಾಳಕೊಲ್ಲಿಯ ಮಧ್ಯ ಭಾಗಗಳಲ್ಲಿ ವಾಯುಭಾರ ಕುಸಿತವಾಗಿದೆ. ಈ ಬಗ್ಗೆ ಎರಡು ದಿನ ಮುಂಚಿತವಾಗಿ ಮಾಹಿತಿ ನೀಡಿದ್ದ ಹವಾಮಾನ ಇಲಾಖೆ, ವಾಯುಭಾರ ಕುಸಿತದ ಪ್ರಭಾವ ವಾಯುವ್ಯ ದಿಕ್ಕಿನಲ್ಲಿ ಶ್ರೀಲಂಕಾದ ಪೂರ್ವ ಕರಾವಳಿಯ ಉತ್ತರ ತಮಿಳುನಾಡು ಕರಾವಳಿಯ ಕಡೆಗೆ ಸಾಗಲಿದೆ ಎಂದು ಹೇಳಿತ್ತು.

ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ತೀವ್ರವಾದ ವಾಯುಭಾರ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ (Karnataka Weather) ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು ತಮಿಳುನಾಡು, ಕೇರಳ ರಾಜ್ಯಗಳಲ್ಲಿ ಕೂಡ ಎರಡು ದಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸದ್ಯ ಒಣ ಹವೆ ಇದೆ. ಆದರೆ, ಎರಡು ದಿನಗಳ ಕಾಲ ರಾಜ್ಯದ ಹಲವು ಕಡೆ ಗುಡುಗು ಸಹಿತ ಮಳೆ ಆಗಬಹುದು. ಪಶ್ಚಿಮ ಘಟ್ಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಇಂದು, ನಾಳೆ ಹಾಗೂ ಮಾರ್ಚ್ 9 ರಂದು ಕೂಡ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: 2019ರ ಮಹಾಮಳೆಗೆ ಮನೆ, ಜಮೀನು ಕಳೆದುಕೊಂಡವರಿಗೆ ಇನ್ನೂ ಪರ್ಯಾಯ ವ್ಯವಸ್ಥೆ ಸಿಕ್ಕಿಲ್ಲ; 3ನೇ ದಿನಕ್ಕೆ ಕಾಲಿಟ್ಟ ಕಳಸ ಸಂತ್ರಸ್ತರ ಪ್ರತಿಭಟನೆ

ಇದನ್ನೂ ಓದಿ: Rain Updates: ಫೆ. 24ರಿಂದ ಈ ರಾಜ್ಯಗಳಲ್ಲಿ ಭಾರೀ ಮಳೆ, ಹಲವೆಡೆ ಹಿಮಪಾತ; ಹವಾಮಾನ ಇಲಾಖೆ ಮುನ್ಸೂಚನೆ

Published On - 8:17 am, Mon, 7 March 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ