AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rains: ಸತತ ಎರಡನೇ ದಿನವೂ ಬೆಂಗಳೂರಲ್ಲಿ ವರ್ಷಧಾರೆ, ರಾಜ್ಯದ ಹಲವೆಡೆ ಕೆಲ ದಿನ ಮಳೆ

Karnataka Weather Latest Update: ಬೆಂಗಳೂರಿನಲ್ಲಿ ಸತತ ಎರಡನೇ ದಿನವೂ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಈ ನಡುವೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜ್ಯದ ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭೂ ಕುಸಿತದ ಎಚ್ಚರಿಕೆಯನ್ನೂ ನೀಡಲಾಗಿದೆ.

Bangalore Rains: ಸತತ ಎರಡನೇ ದಿನವೂ ಬೆಂಗಳೂರಲ್ಲಿ ವರ್ಷಧಾರೆ, ರಾಜ್ಯದ ಹಲವೆಡೆ ಕೆಲ ದಿನ ಮಳೆ
ಬೆಂಗಳೂರಲ್ಲಿ ಮಳೆImage Credit source: Manjunath Naglikar X Account
ಪ್ರಸನ್ನ ಹೆಗಡೆ
| Edited By: |

Updated on:Jul 17, 2026 | 5:58 PM

Share

ಮುಖ್ಯಾಂಶಗಳು

  • ಸತತ ಎರಡನೇ ದಿನ ಬೆಂಗಳೂರಿಗರಿಗೆ ತಂಪೆರೆದ ವರುಣ
  • ರಾಜಾಜಿನಗರ, ಮಲ್ಲೇಶ್ವರಂ ಸೇರಿ ಹಲವೆಡೆ ವರ್ಷಧಾರೆ
  • ರಾಜ್ಯದ ವಿವಿಧೆಡೆ ಇನ್ನೆರಡು ದಿನ ಮಳೆಯ ಮುನ್ಸೂಚನೆ

ಬೆಂಗಳೂರು, ಜುಲೈ 17: ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಲ್ಲಿ (Bengaluru) ಸತತ ಎರಡನೇ ದಿನವೂ ಮಳೆಯಾಗಿದ್ದು (Monsoon Rain), ಹಲವು ಪ್ರದೇಶಗಳಲ್ಲಿ ಸಾಧಾರಣ ಮತ್ತು ತುಂತುರು ವರ್ಷಧಾರೆಯಾಗಿದೆ. ರಾಜಾಜಿನಗರ, ಮಲ್ಲೇಶ್ವರ, ಮೆಜೆಸ್ಟಿಕ್, ಯಶವಂತಪುರ, ವಸಂತನಗರ, ಮಹಾಲಕ್ಷ್ಮೀ ಲೇಔಟ್, ವಿಜಯನಗರ , ಕೆ.ಆರ್. ಮಾರ್ಕೆಟ್‌ ಸೇರಿದಂತೆ ಹಲವೆಡೆ ವರುಣನ ಆಗಮನವಾಗಿದೆ. ಅನಿರೀಕ್ಷಿತ ಮಳೆಯಿಂದಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದ್ದಾರೆ.

ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ

ಈ ನಡುವೆ ಕರ್ನಾಟಕದ ಹಲವೆಡೆ ಇನ್ನೂ ಎರಡು ದಿನಗಳ ಕಾಲ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 18 ಮತ್ತು 19ರಂದು, ದಕ್ಷಿಣ ಒಳನಾಡು ಭಾಗದಲ್ಲಿ ಇಂದು ಮತ್ತು ನಾಳೆ (ಜುಲೈ 18) ಒಂದೆರಡು ಪ್ರದೇಶಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್​​ ಘೋಷಿಸಿರುವುದಾಗಿ ತಿಳಿಸಿದೆ. ಧಾರವಾಡ, ಗದಗ, ಹಾವೇರಿ, ಬೀದರ್​, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆ ಅಂದಾಜಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರಲ್ಲಿ ಭಾರಿ ಮಳೆಯ ನಿರೀಕ್ಷೆ ಇದೆ. ಬೆಂಗಳೂರು ಸೇರಿ ಅಕ್ಕ ಪಕ್ಕದ ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಕೆಆರ್‌ಎಸ್‌ಗೆ ಒಳಹರಿವು ಮತ್ತಷ್ಟು ಕುಸಿತ; ತುಂಗಭದ್ರೆಯಲ್ಲೂ ಕಳೆದ ವರ್ಷಕ್ಕಿಂತ ಕಡಿಮೆ ನೀರು

ಘಟ್ಟ ಪ್ರದೇಶಗಳಲ್ಲಿ ಭೂಕುಸಿತದ ಮುನ್ನೆಚ್ಚರಿಕೆ

ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಜುಲೈ, 17, 18ರಂದು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ಜನರು ಮುನ್ನೆಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:11 pm, Fri, 17 July 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ