
ಬೆಂಗಳೂರು, ಜುಲೈ 17: ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಲ್ಲಿ (Bengaluru) ಸತತ ಎರಡನೇ ದಿನವೂ ಮಳೆಯಾಗಿದ್ದು (Monsoon Rain), ಹಲವು ಪ್ರದೇಶಗಳಲ್ಲಿ ಸಾಧಾರಣ ಮತ್ತು ತುಂತುರು ವರ್ಷಧಾರೆಯಾಗಿದೆ. ರಾಜಾಜಿನಗರ, ಮಲ್ಲೇಶ್ವರ, ಮೆಜೆಸ್ಟಿಕ್, ಯಶವಂತಪುರ, ವಸಂತನಗರ, ಮಹಾಲಕ್ಷ್ಮೀ ಲೇಔಟ್, ವಿಜಯನಗರ , ಕೆ.ಆರ್. ಮಾರ್ಕೆಟ್ ಸೇರಿದಂತೆ ಹಲವೆಡೆ ವರುಣನ ಆಗಮನವಾಗಿದೆ. ಅನಿರೀಕ್ಷಿತ ಮಳೆಯಿಂದಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದ್ದಾರೆ.
#ಮಳೆ #ಮುನ್ನೆಚ್ಚರಿಕೆ :#Heavy #Rainfall (64.5mm to 115.4mm) #warning for #Karnataka #Yellow #Alert@KarnatakaVarthe #KSNDMC #KarnatakaRains #Monsoon2026@DCDKOfficial @dcudupi @dcuttarakannada @deobelagavi @DcDharwad @dc_gadag @KodaguDC @DeputyCommissi8 @DcDeoHassan pic.twitter.com/IsDRLD0A20
— Karnataka State Natural Disaster Monitoring Centre (@KarnatakaSNDMC) July 17, 2026
ಈ ನಡುವೆ ಕರ್ನಾಟಕದ ಹಲವೆಡೆ ಇನ್ನೂ ಎರಡು ದಿನಗಳ ಕಾಲ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 18 ಮತ್ತು 19ರಂದು, ದಕ್ಷಿಣ ಒಳನಾಡು ಭಾಗದಲ್ಲಿ ಇಂದು ಮತ್ತು ನಾಳೆ (ಜುಲೈ 18) ಒಂದೆರಡು ಪ್ರದೇಶಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಿರುವುದಾಗಿ ತಿಳಿಸಿದೆ. ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆ ಅಂದಾಜಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರಲ್ಲಿ ಭಾರಿ ಮಳೆಯ ನಿರೀಕ್ಷೆ ಇದೆ. ಬೆಂಗಳೂರು ಸೇರಿ ಅಕ್ಕ ಪಕ್ಕದ ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: ಕೆಆರ್‌ಎಸ್‌ಗೆ ಒಳಹರಿವು ಮತ್ತಷ್ಟು ಕುಸಿತ; ತುಂಗಭದ್ರೆಯಲ್ಲೂ ಕಳೆದ ವರ್ಷಕ್ಕಿಂತ ಕಡಿಮೆ ನೀರು
#ಭೂಕುಸಿತ ಮುನ್ನೆಚ್ಚರಿಕೆ :#landslide #Warning for the #Karnataka@dcuttarakannada @dcudupi @DCDKOfficial @KodaguDC @DeputyCommissi8 @DEO_CHIKMAGALUR @DcDeoHassan #KSNDMC #KarnatakaRains@KarnatakaVarthe
Source: @Indiametdept pic.twitter.com/9VEv0nxcCj— Karnataka State Natural Disaster Monitoring Centre (@KarnatakaSNDMC) July 17, 2026
ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಜುಲೈ, 17, 18ರಂದು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ಜನರು ಮುನ್ನೆಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:11 pm, Fri, 17 July 26