Karnataka Weather Update: ಬೆಂಗಳೂರಿಗರಿಗೆ ಕೊನೆಗೂ ತಂಪೆರೆದ ವರುಣ; ರಾಜ್ಯದ ಹಲವೆಡೆಯೂ ಮಳೆ ಮುನ್ಸೂಚನೆ

Monsoon 2026: ಬೆಂಗಳೂರಿನಲ್ಲಿ ದಾಖಲೆಯ ತಾಪಮಾನದ ಬಳಿಕ ವರುಣನ ತಂಪೆರೆದಿದ್ದು, ಕೆಲ ಏರಿಯಾಗಳಲ್ಲಿ ಮಳೆಯಾಗಿದೆ. ಏಕಾಏಕಿ ಸುರಿದ ಮಳೆ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ್ದು, ವಾಹನ ಸವಾರರು ಪರದಾಡಿದ್ದಾರೆ. ಈ ನಡುವೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಕೆಲವೆಡೆ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Karnataka Weather Update: ಬೆಂಗಳೂರಿಗರಿಗೆ ಕೊನೆಗೂ ತಂಪೆರೆದ ವರುಣ; ರಾಜ್ಯದ ಹಲವೆಡೆಯೂ ಮಳೆ ಮುನ್ಸೂಚನೆ
ಬೆಂಗಳೂರಲ್ಲಿ ಮಳೆ
Image Credit source: Farman Ali khan X Account

Updated on: Jul 16, 2026 | 5:18 PM

ಮುಖ್ಯಾಂಶಗಳು

  • ಬೆಂಗಳೂರಿಗರ ಮೇಲೆ ಕೊನೆಗೂ ವರುಣನ ಕೃಪೆ
  • ಮಹಾನಗರದ ಹಲವೆಡೆ ಸುರಿದ ಉತ್ತಮ ಮಳೆ
  • ರಾಜ್ಯದ ಕೆಲ ಜಿಲ್ಲೆಗಳಲ್ಲಿ ನಾಳೆ ಮಳೆ ಮುನ್ಸೂಚನೆ

ಬೆಂಗಳೂರು, ಜುಲೈ 16: ಜುಲೈ ತಿಂಗಳಿನಲ್ಲಿ ಶತಮಾನದ ಬಳಿಕ ದಾಖಲೆಯ ತಾಪಮಾನ ಕಂಡಿದ್ದ ಬೆಂಗಳೂರಿಗರ (Bengaluru) ಮೇಲೆ ಕೊನೆಗೂ ವರುಣ (Rain) ಕೊಂಚ ಕೃಪೆ ತೋರಿದ್ದಾನೆ. ಮಹಾನಗರದ ಹಲವೆಡೆ ಮಳೆಯಾಗಿದ್ದು, ಏಕಾಏಕಿ ವರ್ಷದಾರೆಯ ಪರಿಣಾಮ, ಸಾರ್ವಜನಿಕರು ಪರದಾಟ ನಡೆಸಿದ್ದಾರೆ. ರಾಜಾಜಿನಗರ, ಮಲ್ಲೇಶ್ವರಂ, ಕುರುಬರಹಳ್ಳಿ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ  ಜನರು ಬಸ್ ನಿಲ್ದಾಣ, ಅಂಡರ್​ಪಾಸ್​ಗಳಲ್ಲಿ ಆಶ್ರಯ ಪಡೆದ ದೃಶ್ಯಗಳು ಕಂಡುಬಂದಿವೆ.

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ


ನೈಋತ್ಯ ಮುಂಗಾರಿನ ಅಭಾವದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳ ತಾಪಮಾನದಲ್ಲಿ ಹೆಚ್ಚಳದ ನಡುವೆಯೂ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯ ಜೊತೆಗೆ ಸಾಧಾರಣ ಮಳೆಯಾಗಲಿದೆ. ಹಾಗೆಯೇ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆ ಸಾಧ್ಯತೆ ಅಂದಾಜಿಸಲಾಗಿದೆ.

ಇದನ್ನೂ ಓದಿ: ನೇರವಾಗಿ ಮಳೆ ನೀರು ಕುಡಿಯುವುದು ಸುರಕ್ಷಿತವೇ? ತಜ್ಞರು ಹೇಳಿದ ಸತ್ಯ

ಹೇಗಿರಲಿದೆ ಮುಂದಿನ 7 ದಿನಗಳ ವಾತಾವರಣ?


ಮುಂದಿನ 7 ದಿನಗಳ ಕಾಲ ಕರ್ನಾಟಕದಾದ್ಯಂತ ದುರ್ಬಲ ಮುಂಗಾರು ಮುಂದುವರಿಯಲಿದ್ದು, ಗರಿಷ್ಠ ಉಷ್ಣಾಂಶ ಏರಿಕೆಯಾಗಲಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಜೋರಾದ ಗಾಳಿಯೊಂದಿಗೆ ಹಗುರ ಮಳೆ ಮತ್ತು ಒಳನಾಡು ಜಿಲ್ಲೆಗಳಲ್ಲಿ ಬಿಸಿಲು, ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಎಂದು ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:11 pm, Thu, 16 July 26

Follow Us