Weekend Curfew: ವೀಕೆಂಡ್ ಕರ್ಫ್ಯೂ ಜಾರಿ: ಬೆಂಗಳೂರಿನ ಮೆಜೆಸ್ಟಿಕ್ ಬಸ್​ ನಿಲ್ದಾಣದಲ್ಲಿ ಜನಜಂಗುಳಿ

ವಾರಾಂತ್ಯಕ್ಕೆಂದು ಘೋಷಿಸಿರುವ ಕರ್ಫ್ಯೂ ಮುಂದುವರಿಯಬಹುದು ಎಂಬ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ನಗರದಿಂದ ಜನರು ತರಾತುರಿಯಲ್ಲಿ ತಮ್ಮ ಊರುಗಳಿಗೆ ಹೊರಡುತ್ತಿದ್ದಾರೆ.

Weekend Curfew: ವೀಕೆಂಡ್ ಕರ್ಫ್ಯೂ ಜಾರಿ: ಬೆಂಗಳೂರಿನ ಮೆಜೆಸ್ಟಿಕ್ ಬಸ್​ ನಿಲ್ದಾಣದಲ್ಲಿ ಜನಜಂಗುಳಿ
ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ಜನಜಂಗುಳಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 07, 2022 | 11:27 PM

ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರದಿಂದ (ಜ 7) ವಾರಾಂತ್ಯ ಕರ್ಫ್ಯೂ ಜಾರಿಯಾಗಿರುವ ಹಿನ್ನೆಲೆಯಲ್ಲಿ ನಗರದ ಮೆಜೆಸ್ಟಿಕ್ ಸೇರಿದಂತೆ ಇತರ ಊರುಗಳಿಗೆ ಬಸ್​ಗಳ ಹೊರಡುವ ಬಹುತೇಕ ಬಸ್​ ನಿಲ್ದಾಣಗಳಲ್ಲಿ ಜನಜಂಗುಳಿ ಕಂಡು ಬಂತು. ವಾರಾಂತ್ಯಕ್ಕೆಂದು ಘೋಷಿಸಿರುವ ಕರ್ಫ್ಯೂ ಮುಂದುವರಿಯಬಹುದು ಎಂಬ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ನಗರದಿಂದ ಜನರು ತರಾತುರಿಯಲ್ಲಿ ತಮ್ಮ ಊರುಗಳಿಗೆ ಹೊರಡುತ್ತಿದ್ದಾರೆ. ಮೆಜೆಸ್ಟಿಕ್ ಬಸ್​ ನಿಲ್ದಾಣ ಮತ್ತು ಖಾಸಗಿ ಬಸ್​ನಿಲ್ದಾಣಗಳಲ್ಲಿ ಜನಜಂಗುಳಿ ಹೆಚ್ಚಾಗಿದೆ. ಆಂಧ್ರ ಪ್ರದೇಶ ಮತ್ತು ತಮಿಳುನಾಡಿನತ್ತ ತೆರಳಲು ನೂರಾರು ಜನರು ಕಾಯುತ್ತಿದ್ದಾರೆ. ಪ್ರಯಾಣಿಕರ ಸಂಖ್ಯೆ ಏಕಾಏಕಿ ಹೆಚ್ಚಾದ ಹಿನ್ನೆಲೆಯಲ್ಲಿ ಬಸ್​ಗಳೆಲ್ಲವೂ ತುಂಬಿತುಳುಕುತ್ತಿವೆ. ಊರುಗಳಿಗೆ ಹೋಗಲು ಜನರು ಪರದಾಡುತ್ತಿದ್ದಾರೆ. ವೀಕೆಂಡ್ ಕರ್ಫ್ಯೂ ಆದೇಶ ಜಾರಿಗಾಗಿ ಪೊಲೀಸರು ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಸೇರಿದಂತೆ ವಿವಿಧ ಫ್ಲೈಓವರ್​ಗಳಿಗೆ ಅಡ್ಡಲಾಗಿ ಬ್ಯಾರಿಕೇಡ್​ಗಳನ್ನು ಅಳವಡಿಸುತ್ತಿದ್ದಾರೆ.

ಲಾಕ್​ಡೌನ್ ಭೀತಿ, ಬೆಂಗಳೂರು ಬಿಡುತ್ತಿರುವ ಜನ ಬೆಂಗಳೂರು ನಗರದಲ್ಲಿ ಕೊವಿಡ್ ಸೋಂಕು ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ತಮ್ಮ ಸ್ವಂತ ಊರುಗಳಿಗೆ ತೆರಳಲು ಹಾತೊರೆಯುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಬೆಂಗಳೂರು ಬಿಟ್ಟು ಹೊರಟ ಕಾರಣ, ವಿಕೆಂಡ್ ಕರ್ಫ್ಯೂ ಮುನ್ನಾದಿನವಾದ ಶುಕ್ರವಾರ (ಜ.7) ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಯಿತು. ಲಾಕ್​ಡೌನ್ ಭೀತಿಯಿಂದ ಜನರು ಬೆಂಗಳೂರು ಬಿಟ್ಟು ತಮ್ಮ ಹಳ್ಳಿಗಳಿಗೆ ತೆರಳಲು ಮುಂದಾಗಿದ್ದಾರೆ. ಜಾಲಹಳ್ಳಿ ಕ್ರಾಸ್​ನ 8ನೇ ಮೈಲಿ ಬಳಿ ವಾಹನಗಳ ಉದ್ದನೆ ಸಾಲು ಕಂಡು ಬಂತು. ಮತ್ತೆ ಲಾಕ್​ಡೌನ್ ಆಗಬಹುದು ಎನ್ನುವ ಭೀತಿಯಿಂದ ಜನರು ಸ್ವಂತ ಊರುಗಳತ್ತ ತೆರಳುತ್ತಿದ್ದಾರೆ. ಲಗೇಜ್, ಮಕ್ಕಳ, ಸಮೇತ ಹಳ್ಳಿಗಳ ಕಡೆಗೆ ಸಿಕ್ಕಸಿಕ್ಕ ವಾಹನಗಳಲ್ಲಿ ಜನರು ಪ್ರಯಾಣಿಸುತ್ತಿದ್ದಾರೆ.

ಕೊರೊನಾ 3ನೇ ಅಲೆಗೆ ಕಡಿವಾಣ ಹಾಕಲೆಂದು ರಾಜ್ಯ ಸರ್ಕಾರವು ವಾರಾಂತ್ಯ ಕರ್ಫ್ಯೂ ಘೋಷಿಸಿದೆ. ಹೀಗಾಗಿ ವಾರಾಂತ್ಯದ ಸಂಭ್ರಮದಲ್ಲಿದ್ದ ಬೆಂಗಳೂರಿಗೆ ವೀಕೆಂಡ್ ಕರ್ಫ್ಯೂ ಆದೇಶದಿಂದ ನಿರಾಸೆ ಮೂಡಿದೆ. ಶುಕ್ರವಾರ (ಜ.7) ರಾತ್ರಿ 10ರಿಂದ ಆರಂಭವಾಗಲಿರುವ ವೀಕೆಂಡ್ ಕರ್ಫ್ಯೂ ಸೋಮವಾರ ಮುಂಜಾನೆಯವರೆಗೂ ಜಾರಿಯಲ್ಲಿರುತ್ತದೆ. ಕರ್ಪ್ಯೂ ನಿಯಮ ಜಾರಿಯಾಗುತ್ತಿದ್ದಂತೆ ಬೆಂಗಳೂರು ಸ್ತಬ್ಧಗೊಂಡಿದೆ. ಹೊಟೆಲ್, ಬಾರ್, ರೆಸ್ಟೊರೆಂಟ್​ಗಳು ಸ್ತಬ್ಧವಾಗಲಿವೆ. ನಗರದ ಪ್ರಮುಖ ರಸ್ತೆಗಳನ್ನು ಸಂಪರ್ಕಿಸುವ ಸರ್ಕಲ್ ಹಾಗೂ ಜಂಕ್ಷನ್​ಗಳಿಗೆ ಸರ್ಕಲ್, ಜಂಕ್ಷನ್​ಗಳಿಗೆ ಪೊಲೀಸರು ಬ್ಯಾರಿಕೇಡ್​ಗಳನ್ನು ಅಳವಡಿಸಿದ್ದಾರೆ.

ವಾರಾಂತ್ಯ ಕರ್ಫ್ಯೂ ಆದೇಶ ಜಾರಿಗೆ ಬರುತ್ತಿದ್ದಂತೆ, ಅಂದರೆ ರಾತ್ರಿ 10 ಗಂಟೆಯ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವ್ಯಾಪಾರ-ವಹಿವಾಟು ಸ್ತಬ್ಧಗೊಂಡಿದೆ. ಅದಕ್ಕೂ ಮೊದಲು ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಬಹುತೇಕ ಮುಖ್ಯ ವ್ಯಾಪಾರ ಕೇಂದ್ರಗಳಲ್ಲಿ ಜನಸಂದಣಿ ಸೇರಿತ್ತು. ಕರ್ಫ್ಯೂ ವೇಳೆ ವೈದ್ಯಕೀಯ ತುರ್ತುಪರಿಸ್ಥಿತಿ ಮತ್ತು ಇತರ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಇರಲಿದೆ. ಬಾರ್-ರೆಸ್ಟೊರೆಂಟ್, ಶಾಪಿಂಗ್ ಕಾಂಪ್ಲೆಕ್ಸ್​ಗಳೆಲ್ಲವೂ 10 ಗಂಟೆಗೆ ವಹಿವಾಟು ಸ್ಥಗಿತಗೊಳಿಸಿವೆ.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಡ್ಡಿ ಇಲ್ಲ; ಆದರೆ ಶಾಲಾ ಕಾಲೇಜುಗಳು ಬಂದ್ ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧ

Published On - 11:26 pm, Fri, 7 January 22

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?