ಬೆಂಗಳೂರು: ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ್ದ ಡೆಲಿವರಿ ಬಾಯ್ ಅರೆಸ್ಟ್
ಬೆಂಗಳೂರಿನಲ್ಲಿ ಕಾಮುಕರ ಕಾಟ ಹೆಚ್ಚಾಗುತ್ತಿದೆ. ರಸ್ತೆ, ಪಾರ್ಕ್ನಲ್ಲಿ ವಾಕಿಂಗ್ ಹಾಗೂ ನಡೆದುಕೊಂಡು ಹೋಗುವ ಹೆಣ್ಣು ಮಕ್ಕಳು ಮುಂದೆಯೇ ಅಸಭ್ಯವಾಗಿ ವರ್ತಿಸುವುದು, ಖಾಸಗಿ ಅಂಗವನ್ನು ಮುಟ್ಟಿ ಮಿಕೃತಿ ಮೆರೆದು ಪರಾರಿಯಾಗಿರುವ ಘಟನೆಗಳು ನಡೆದಿವೆ. ಅದರಂತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ್ದ ಕಾಮುಕ ಸಿಕ್ಕಿಬಿದ್ದಿದ್ದಾನೆ.

ಬೆಂಗಳೂರು, (ಜನವರಿ 09): ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದವನನ್ನು ಬೆಂಗಳೂರಿನ (Bengaluru) ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ (West Bengal) ಮೂಲದ ಆರೋಪಿ ಮುನಿರುದ್ದೀನ್ ಖಾನ್ ಬಂಧಿತ ಆರೋಪಿ.
ಮನೆಯ ಮುಂದೆ ಬಿದ್ದಿದ್ದ ಬಾಕ್ಸ್‌ನ್ನು ಯುವತಿ ತೆಗೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಯುವಕ ರಸ್ತೆಯಲ್ಲಿ ಬಟ್ಟೆಬಿಚ್ಚಿ ಅಸಭ್ಯವಾಗಿ ವರ್ತಿಸಿ ಬಾ ಎಂದು ಕರೆದಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಯುವತಿಯನ್ನು ಹಿಂದಿನಿಂದ ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ. ಇದಕ್ಕೆ ಪ್ರತಿರೋಧಿದ್ದಕ್ಕೆ ಯುವತಿಯ ಕೆನ್ನೆಗೆ ಹೊಡೆದಿದ್ದಾನೆ. ಬಳಿ ಯುವತಿ ಕಿರುಚಾಡಿದಾಗ ಕಾಮುಕ ಮುನಿರುದ್ದೀನ್ ಖಾನ್ ಅಲ್ಲಿಂದ ಪರಾರಿಯಾಗಿದ್ದ.
ಇದನ್ನೂ ಓದಿ: 14 ವರ್ಷದ ಬಾಲಕಿ ಮೇಲೆ ಚಲಿಸುವ ಕಾರಿನೊಳಗೆ ಯೂಟ್ಯೂಬರ್, ಪೊಲೀಸ್ ಸೇರಿ ಅತ್ಯಾಚಾರ
ಘಟನೆ ಬಳಿಕ ಯುವತಿ ಕೊತ್ತನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಕಾರ್ಯಚರಣೆ ನಡೆಸಿ ಮುನಿರುದ್ದೀನ್ ಖಾನ್ ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
