ಬೆಂಗಳೂರಿನಲ್ಲಿ ಮತ್ತೆ ಮೊಳಗಿದ ‘ಪಾಕಿಸ್ತಾನ’ ಪರ ಘೋಷಣೆ, ಪೊಲೀಸರಿಂದ ವಿಚಾರಣೆ

ಬೆಂಗಳೂರಿನಲ್ಲಿ ಮತ್ತೆ ಪಾಕಿಸ್ತಾನ ಪರ ಘೋಷಣೆ ಮೊಳಗಿದ್ದು, ಪೊಲೀಸರು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೆ ಮೊಳಗಿದ ಪಾಕಿಸ್ತಾನ ಪರ ಘೋಷಣೆ, ಪೊಲೀಸರಿಂದ ವಿಚಾರಣೆ
ಪಾಕ್​ ಪರ ಘೋಷಣೆ ಕೂಗಿದ ಯುವಕ

Updated on: Mar 30, 2023 | 10:36 AM

ಬೆಂಗಳೂರು: ಇತ್ತೀಚೆಗಷ್ಟೇ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಗಳು ಪಾಕ್​ ಘೋಷಣೆ ಕೂಗಿ ದೊಡ್ಡ ವಿವಾದ ಸೃಷ್ಟಿಸಿದ್ದರು. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ಯುವಕನೋರ್ವ ಪಾಕ್​ ಪರ ಘೋಷಣೆ (pro pakistan slogan) ಕೂಗಿರುವುದು ಬೆಳಕಿಗೆ ಬಂದಿದೆ. ಬಿಟಿಎಂ ಲೇಔಟ್ ಎರಡನೇ ಹಂತದಲ್ಲಿ ಈ ಘಟನೆ ನಡೆದಿದ್ದು, ಪಶ್ಚಿಮ ಬಂಗಾಳ ಮೂಲದ ಅಂಕುಶ್ ಪಾಕ್​ ಪರ ಘೋಷಣೆ ಕೂಗಿ ಉದ್ಧಟತನ ತೋರಿದ್ದಾನೆ. ಬೆಂಗಳೂರಿನ ಪಿಜಿ ನಲ್ಲಿ ವಾಸವಾಗಿದ್ದಅಂಕುಶ್ ಮಾನಸಿಕ ಅಸ್ವಸ್ಥನ ರೀತಿಯಲ್ಲಿದ್ದು, ವಿಚಾರಣೆ ವೇಳೆ ಆತ ತಮಾಷೆಗಾಗಿ ಘೋಷಣೆ ಕೂಗಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

ಇದನ್ನೂ ಓದಿ: ಪಾಕ್‌ ಪರ ಘೋಷಣೆ ಕೂಗಿದ ಬೆಂಗಳೂರಿನ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು

ಈ ಹಿಂದೆ ಬೆಂಗಳೂರಿನಲ್ಲಿ ಪ್ರತಿಷ್ಠಿತ ಕಾಲೇಜೊಂದರಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಆಂಧ್ರ ಪ್ರದೇಶ ಮೂಲದ ಆರ್ಯನ್, ಮಹಾರಾಷ್ಟ್ರ ಮೂಲದ ರಿಯಾ ರವಿಚಂದ್ರನ್ ಮತ್ತು ಪಂಜಾಬ್‍ನ ದಿನಕರ್ ಪಾಕಿಸ್ತಾನ ಜಿಂದಾಬಾದ್ (Pakistan zindabad) ಎಂದು ಪಾಕ್ ಪರ ಘೋಷಣೆ ಕೂಗಿದ್ದರು. ನಂತರ ಈ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿ ಮಾರತಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 153, 505(1) ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದರು.

ಈ ಘಟನೆಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಕಾಲೇಜು ಆಡಳಿತ ಮಂಡಳಿ ಮೂವರು ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿದ್ದರು ಮತ್ತು ತಮಾಷೆಗಾಗಿ ಪಾಕ್ ಪರ ಘೋಷಣೆ ಕೂಗಿರುವುದಾಗಿ ವಿದ್ಯಾರ್ಥಿಗಳು ಹೇಳಿದ್ದರು. ಕಾಲೇಜಿನಲ್ಲಿ ಐಪಿಎಲ್ ಕ್ರಿಕೆಟ್ ಟೀಂ ಪರ ಜೈಕಾರ ಕೂಗುತ್ತಿದ್ದ ವೇಳೆ ಪೈಪೋಟಿಗೆ ಬಿದ್ದು ಪಾಕ್ ಪರ ಘೋಷಣೆ ಕೂಗಿದ್ದು, ಉದ್ದೇಶ ಪೂರ್ವಕವಾಗಿ ಕೂಗಿಲ್ಲ ಎಂಬ ವಿಚಾರ ತನಿಖೆ ವೇಳೆ ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಬಂಧಿತರನ್ನು ಬಿಡುಗಡೆ ಮಾಡಲಾಗಿತ್ತು

Published On - 10:17 am, Thu, 30 March 23