AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Water Crisis: ಬೆಂಗಳೂರಿನಲ್ಲಿ ಕಂಡು ಕೇಳರಿಯದ ನೀರಿನ ಬಿಕ್ಕಟ್ಟು, ಇಲ್ಲಿವೆ ಪ್ರಮುಖ ಕಾರಣಗಳು

ಕರ್ನಾಟಕದ ರಾಜಧಾನಿ ಬೆಂಗಳೂರು ನಗರವು ಈವರೆಗೆ ಕಂಡು ಕೇಳರಿಯದ ನೀರಿನ ಬಿಕ್ಕಟ್ಟಿನಿಂದ ಕಂಗಾಲಾಗಿದೆ. ನಗರದ ಜನ ನೀರಿಗಾಗಿ ಹಾಹಾಕಾರ ಪಡುವಂತಾಗಿದೆ. ಅಪಾರ್ಟ್ಮೆಂಟ್​ಗಳಲ್ಲಿ ನೀರು ಪೂರೈಕೆ ಬಲುದೊಡ್ಡ ಸಮಸ್ಯೆಯಾಗಿದೆ. ಮತ್ತೊಂದೆಡೆ, ಟ್ಯಾಂಕರ್ ಮಾಫಿಯಾದ ದಂಧೆಗೆ ಮಿತಿ ಇಲ್ಲದಾಗಿದೆ. ಬೆಂಗಳೂರಿನಲ್ಲಿ ಈ ಪರಿಯ ನೀರಿನ ಬಿಕ್ಕಟ್ಟು ಸೃಷ್ಟಿಯಾಗಲು ಹಲವು ಕಾರಣಗಳಿವೆ.

Bengaluru Water Crisis: ಬೆಂಗಳೂರಿನಲ್ಲಿ ಕಂಡು ಕೇಳರಿಯದ ನೀರಿನ ಬಿಕ್ಕಟ್ಟು, ಇಲ್ಲಿವೆ ಪ್ರಮುಖ ಕಾರಣಗಳು
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Mar 07, 2024 | 11:00 AM

Share

ಬೆಂಗಳೂರು, ಮಾರ್ಚ್​ 7: ಮಳೆಯ ಕೊರತೆ (Rain Deficit), ಅಂತರ್ಜಲ ಮಟ್ಟ ಕುಸಿತ, ಅಸಮರ್ಪಕ ಮೂಲಸೌಕರ್ಯ ಯೋಜನೆ ಮತ್ತು ನೀರಿನ ಟ್ಯಾಂಕರ್ ಕಾರ್ಯಾಚರಣೆಯ ಪ್ರಭಾವ ಸೇರಿದಂತೆ ಹಲವಾರು ಕಾರಣಗಳಿಂದ ಬೆಂಗಳೂರಿನಲ್ಲಿ ಈವರೆಗೆ ಕಂಡುಕೇಳರಿಯದ ಮಟ್ಟದಲ್ಲಿ ನೀರಿನ ಬಿಕ್ಕಟ್ಟು (Bengaluru Water Crisis) ಉಂಟಾಗಿದೆ. ಐಟಿ ಹಬ್​ ಮೇಲೆಯೂ ಬರಗಾಲದ ಬಿಸಿ ಈ ವರ್ಷ ತೀವ್ರವಾಗಿ ತಟ್ಟುತ್ತಿದೆ. ಬರ ಮಾತ್ರವಲ್ಲದೆ ಇನ್ನೂ ಅನೇಕ ಅಂಶಗಳು ನಗರದ ನೀರಿನ ಬಿಕ್ಕಟ್ಟಿಗೆ ಕಾರಣವಾಗಿವೆ.

ಸಾಕಷ್ಟು ಮಳೆಯಾಗದೆ ಕಾವೇರಿ ನದಿಯ ನೀರಿನ ಮಟ್ಟದಲ್ಲಿ ಇಳಿಮುಖವಾಗಿದೆ. ಈ ಕೊರತೆಯು ಕುಡಿಯುವ ನೀರಿಗೆ ಮಾತ್ರವಲ್ಲದೆ ನೀರಾವರಿಯ ಮೇಲೂ ಪರಿಣಾಮ ಬೀರುತ್ತಿದೆ. ಇದಲ್ಲದೆ, ಇತ್ತೀಚಿನ ತಿಂಗಳುಗಳಲ್ಲಿ ಮಳೆಯ ಕೊರತೆಯು ಬೆಂಗಳೂರಿನಲ್ಲಿ ಬೋರ್‌ವೆಲ್‌ಗಳು ಬತ್ತಲು ಕಾರಣವಾಗಿದೆ. ನಗರದ ನೀರು ಪೂರೈಕೆಯ ಜವಾಬ್ದಾರಿಯನ್ನು ಹೊಂದಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಪ್ರಮುಖವಾಗಿ ನೀರಿಗಾಗಿ ಕಾವೇರಿ ನದಿಯನ್ನು ಅವಲಂಬಿಸಿದೆ. ಕಾವೇರಿ ನೀರಿನ ಸಂಪರ್ಕವಿಲ್ಲದ ಪ್ರದೇಶಗಳು ಬೋರ್‌ವೆಲ್ ಅಥವಾ ಟ್ಯಾಂಕರ್ ನೀರನ್ನು ಅವಲಂಬಿಸಿವೆ.

ಬರಗಾಲವೇ ಪ್ರಮುಖ ಕಾರಣ

ಪ್ರಮುಖವಾಗಿ ಭೀಕರ ಬರಗಾಲವೇ ಐಟಿ ಹಬ್​​​ ಗಂಭೀರ ನೀರಿನ ಸಮಸ್ಯೆ ಎದುರಿಸಲು ಕಾರಣವಾಗಿದೆ. ಸಾಕಷ್ಟು ಮಳೆಯಾಗದ ಕಾರಣ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಕುಸಿದಿದೆ. ಬೆಂಗಳೂರು ನಗರವು ನೀರಿಗಾಗಿ ಪ್ರಮುಖವಾಗಿ ಕಾವೇರಿ ನದಿಯನ್ನೇ ಅವಲಂಬಿಸಿದೆ.

ಜಲಾಶಯಗಳಲ್ಲಿ ಕಡಿಮೆಯಾದ ನೀರು

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ (KSNDMC) ಮಾಹಿತಿಯ ಪ್ರಕಾರ, ಕಾವೇರಿ ಕೊಳ್ಳದ ಜಲಾಶಯಗಳಾದ ಹಾರಂಗಿ, ಹೇಮಾವತಿ, ಕೆಆರ್‌ಎಸ್ ಮತ್ತು ಕಬಿನಿಗಳಲ್ಲಿನ ನೀರಿನ ಸಂಗ್ರಹವು ಫೆಬ್ರವರಿ ಕೊನೆಯ ವೇಳೆಗೆ ಅವುಗಳ ಒಟ್ಟು ಸಾಮರ್ಥ್ಯದ ಶೇಕಡಾ 39 ರಷ್ಟು ಮಾತ್ರವೇ ಇದೆ. ಈ ಜಲಾಶಯಗಳ ಒಟ್ಟು ಸಾಮರ್ಥ್ಯ 114.57 ಟಿಎಂಸಿ ಆಗಿದೆ. ಮತ್ತು ಪ್ರಸ್ತುತ, ಈ ಜಲಾಶಯಗಳು ಸುಮಾರು 44.65 ಟಿಎಂಸಿ ನೀರನ್ನು ಮಾತ್ರ ಹೊಂದಿವೆ. ಕಳೆದ ವರ್ಷ ಇದೇ ಸಮಯದಲ್ಲಿ ಈ ಜಲಾಶಯಗಳಲ್ಲಿ ಸುಮಾರು 64.61 ಟಿಎಂಸಿ ನೀರು ಇತ್ತು.

ಬೋರ್​ವೆಲ್​ಗಳಲ್ಲಿ ಕಡಿಮೆಯಾದ ನೀರು

ಮಳೆಯ ಕೊರತೆಯ ಕಾರಣ ಬೆಂಗಳೂರಿನ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗುತ್ತಿದೆ. ಪರಿಣಾಮವಾಗಿ ಅಪಾರ್ಟ್​​ಮೆಂಟ್​ಗಳು ಹಾಗೂ ಕಾವೇರಿ ನೀರು ಸರಬರಾಜು ಇಲ್ಲದ ಕಡೆಗಳಲ್ಲಿ ಬಲುದೊಡ್ಡ ಸಮಸ್ಯೆ ಎದುರಾಗಿದೆ.

ಇದನ್ನೂ ಓದಿ: ಬೆಂಗಳೂರು ನೀರಿನ ಬಿಕ್ಕಟ್ಟು ಬಗೆಹರಿಸಲು ಸರ್ಕಾರ ಕೈಗೊಂಡ ಕ್ರಮಗಳೇನು? ಇಲ್ಲಿದೆ ವಿವರ

ಇತ್ತೀಚೆಗೆ ಬಿಬಿಎಂಪಿ ಸಭೆಯಲ್ಲಿ ಬೆಂಗಳೂರಿನ ಬೋರ್​ವೆಲ್​ಗಳ ಬಗ್ಗೆ ಮಾಹಿತಿ ನೀಡಿದ್ದ ಡಿಸಿಎಂ ಡಿಕೆ ಶಿವಕುಮಾರ್, ನಮ್ಮ ದಾಖಲೆಗಳ ಪ್ರಕಾರ ನಗರದಲ್ಲಿರುವ 16,781 ಬೋರ್‌ವೆಲ್‌ಗಳಲ್ಲಿ 6,997 ಬತ್ತಿ ಹೋಗಿವೆ. ಉಳಿದ 7,784 ಬೋರ್‌ವೆಲ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದಿದ್ದರು.

ಹೊಸ ಕೊಳವೆ ಬಾವಿ ಕೊರೆಸಲು ಮುಂದಾದ ಸರ್ಕಾರ

ನೀರು ಸರಬರಾಜು ಸುಗಮವಾಗಿ ಆಗುವಂತೆ ನೋಡಿಕೊಳ್ಳಲು ಸರ್ಕಾರ ಹೊಸ ಬೋರ್‌ವೆಲ್‌ಗಳನ್ನು ಕೊರೆಯಿಸಲಿದೆ. ನೀರು ಸರಬರಾಜಿಗೆ ಸಂಬಂಧಿಸಿ ಸ್ಥಳೀಯ ಮಾರಾಟಗಾರರು ಮತ್ತು ತಮಿಳುನಾಡು ಮಾರಾಟಗಾರರ ನಡುವೆ ಬೆಲೆಯಲ್ಲಿ ಸ್ವಲ್ಪ ವ್ಯತ್ಯಾಸವಿದೆ. ಅದನ್ನು ಶೀಘ್ರದಲ್ಲೇ ಸರಿಪಡಿಸಲಾಗುವುದು ಎಂದು ಡಿಸಿಎಂ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು