Training to be organized: ಡೈರಿಯಲ್ಲಿ ಸಿಕ್ಕ ಮಾಹಿತಿ ಹಿಂದೆ ಬಿದ್ದ ಪೊಲೀಸರು, ಪಿಎಫ್‌ಐ ಮುಖಂಡರ ಮನೆಗಳ ದಾಳಿ ಹಿಂದಿರುವ ಉದ್ದೇಶವೇನು?

ಆರೋಪಿಗಳ ಬಳಿ ಸಿಕ್ಕ ಡೈರಿಯಲ್ಲಿ Training to be organized ಅಂತ ಮಾತ್ರ ಬರೆದಿದ್ದು ಸ್ಥಳ ಹಾಗೂ ದಿನಾಂಕ ಬರೆದಿಲ್ಲ. ಹೀಗಾಗಿ ಎಲ್ಲಿ ಟ್ರೈನಿಂಗ್ ಫ್ಲ್ಯಾನ್ ಮಾಡಿದ್ರು? ಯಾರೆಲ್ಲ ಟ್ರೈನಿಂಗ್ ಅಲ್ಲಿ ಭಾಗಿಯಾಗಲಿದ್ದಾರೆ ಎಂಬ ಬಗ್ಗೆ ಪೊಲೀಸರು ತಲೆ ಕೆಡಿಸಿಕೊಂಡಿದ್ದಾರೆ.

Training to be organized: ಡೈರಿಯಲ್ಲಿ ಸಿಕ್ಕ ಮಾಹಿತಿ ಹಿಂದೆ ಬಿದ್ದ ಪೊಲೀಸರು, ಪಿಎಫ್‌ಐ ಮುಖಂಡರ ಮನೆಗಳ ದಾಳಿ ಹಿಂದಿರುವ ಉದ್ದೇಶವೇನು?
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Sep 27, 2022 | 11:38 AM

ಬೆಂಗಳೂರು: ರಾಜ್ಯದ ವಿವಿಧೆಡೆ ಪಿಎಫ್‌ಐ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿ 75ಕ್ಕೂ ಹೆಚ್ಚು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಅನೇಕರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಈ ಹಿಂದೆ ಎನ್ಐಎ ದಾಳಿ ವೇಳೆ ವಶಕ್ಕೆ ಪಡೆದಿದ್ದವರನ್ನು ವಿಚಾರಣೆ ನಡೆಸಿದಾಗ ಸಿಕ್ಕ ಮಾಹಿತಿಯ ತನಿಖೆಗಾಗಿ ಇಂದು ಪೊಲೀಸರು ಮತ್ತೆ ದಾಳಿ ನಡೆಸಿ ಕೆಲ ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಪಿಎಫ್‌ಐ ಮುಖಂಡರ ದಾಳಿಗೆ ಮಹತ್ವದ ತಿರುವು ಸಿಕ್ಕಿದೆ.

ಈ ಹಿಂದೆ ವಶಕ್ಕೆ ಪಡೆಯಲಾಗಿದ್ದ ಪಿಎಫ್‌ಐ ಮುಖಂಡರ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗವಾಗಿತ್ತು. ಕೆಜಿ ಹಳ್ಳಿ ಹಾಗೂ ಸಿಸಿಬಿ ಪೊಲೀಸರಿಗೆ ತನಿಖೆ ವೇಳೆ ಡೈರಿಯೊಂದು ಸಿಕ್ಕಿದ್ದು ಡೈರಿ ರಹಸ್ಯ ಬೆನ್ನತ್ತಿ ಇಂದು ಪೊಲೀಸರು ಮತ್ತಷ್ಟು ಜನರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಬಳಿ ಸಿಕ್ಕ ಡೈರಿಯಲ್ಲಿ Training to be organized ಅಂತ ಮಾತ್ರ ಬರೆದಿದ್ದು ಸ್ಥಳ ಹಾಗೂ ದಿನಾಂಕ ಬರೆದಿಲ್ಲ. ಹೀಗಾಗಿ ಎಲ್ಲಿ ಟ್ರೈನಿಂಗ್ ಫ್ಲ್ಯಾನ್ ಮಾಡಿದ್ರು? ಯಾರೆಲ್ಲ ಟ್ರೈನಿಂಗ್ ಅಲ್ಲಿ ಭಾಗಿಯಾಗಲಿದ್ದಾರೆ ಎಂಬ ಬಗ್ಗೆ ಪೊಲೀಸರು ತಲೆ ಕೆಡಿಸಿಕೊಂಡಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಪೊಲೀಸರು ಪಿಎಫ್‌ಐ ಮುಖಂಡರ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: Shocking News: ವಾಮಾಚಾರ ಮಾಡುತ್ತಿದ್ದಾರೆ ಎಂದು ಮಹಿಳೆಯರಿಗೆ ಬಲವಂತವಾಗಿ ಮಲಮೂತ್ರವನ್ನು ತಿನ್ನಿಸಿದ ಗ್ರಾಮಸ್ಥರು

ಡೈರಿಯಲ್ಲಿ ತರಬೇತಿ ಸಿದ್ದ ಅಂತ ಬರೆದಿದ್ದು ಪೊಲೀಸರಲ್ಲಿ ಹಲವು ಅನುಮಾನಗಳು ಮೂಡಿವೆ. ಭಯೋತ್ಪಾದನಾ ಕೃತ್ಯ ಎಸಗುವ ತರಬೇತಿ ಇರಬಹುದಾ? ಕೋಮು ಗಲಭೆ ಸೃಷ್ಟಿಸುವ ತರಬೇತಿ ಇರಬಹುದಾ? ಸ್ಫೋಟಕ ತಯಾರು ಮಾಡುವ ತರಬೇತಿ ಇರಬಹುದಾ? ಎಂಬ ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ರಾಜ್ಯಾದ್ಯಂತ ಪಿಎಫ್​ಐ ಮುಖಂಡರ ಮನೆಗಳ ಮೇಲೆ ದಾಳಿ: 70ಕ್ಕೂ ಹೆಚ್ಚು ಮುಖಂಡರು ವಶಕ್ಕೆ

ಬೆಂಗಳೂರು: ಬೆಳ್ಳಂ ಬೆಳಗ್ಗೆ ರಾಜ್ಯಾದ್ಯಂತ ಪಿಎಫ್​ಐ (PFI) ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹಾಗೂ 70ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ, ಬೀದರ್​, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಮಂಗಳೂರು, ಕೊಪ್ಪಳ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾ., ಮೈಸೂರು, ವಿಜಯಪುರ ಸೇರಿದಂತೆ ರಾಜ್ಯಾದ್ಯಂತ ಪಿಎಫ್​​ಐ ಮುಖಂಡರ ಮನೆ ಮೇಲೆ ದಾಳಿ ನಡೆದಿದೆ.

ಕಳೆದ ಕೆಲ ದಿನಗಳ ಹಿಂದೆ ಎನ್​ಐಎ ದಾಳಿ ನಡೆಸಿ ನೂರಕ್ಕೂ ಹೆಚ್ಚು ಪಿಎಫ್​ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿತ್ತು. ಈಗ ಮತ್ತೆ ಕಾನೂನು & ಸುವ್ಯವಸ್ಥೆ ಎಡಿಜಿಪಿ ಅಲೋಕ್​ ಕುಮಾರ್​ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು 40ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆಯಲಾಗಿದೆ. ಶಾಂತಿ ಕದಡುವ ಕೃತ್ಯದಲ್ಲಿ ಭಾಗಿ ಆರೋಪದಡಿ ವಶಕ್ಕೆ ಪಡೆಯಲಾಗಿದೆ.

ಈ ಬಗ್ಗೆ ಮಾತನಾಡಿದ ಎಡಿಜಿಪಿ ಅಲೋಕ್​ ಕುಮಾರ್, ರಾಜ್ಯಾದ್ಯಂತ PFI ಮುಖಂಡರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಈವರೆಗೂ ಸುಮಾರು 70 PFI ಕಾರ್ಯಕರ್ತರು ವಶಕ್ಕೆ ಪಡೆಯಲಾಗಿದೆ. ಶಾಂತಿ ಕದಡುವ ಕೃತ್ಯದಲ್ಲಿ ಭಾಗಿ ಆರೋಪದಡಿ ಆಯಾ ಜಿಲ್ಲೆಗಳಲ್ಲಿ ಎಸ್​ಪಿ ನೇತೃತ್ವದಲ್ಲಿ ದಾಳಿ ನಡೆದಿದೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:37 am, Tue, 27 September 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?