Bengaluru techie death: ಟೆಕ್ಕಿ ಅತುಲ್​ ಸುಭಾಷ್​ ಮಗು ಎಲ್ಲಿ? ಬೆಂಗಳೂರು ಪೊಲೀಸರಿಂದ ಮಹತ್ವದ ಸುಳಿವು

ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೇ ವೇಳೆ, ಅತುಲ್​ ಮತ್ತು ನಿಖಿತಾ ದಂಪತಿ ಪುತ್ರ ಎಲ್ಲಿದ್ದಾನೆ ಎಂಬ ಪ್ರಶ್ನೆ ಉದ್ಭವಿಸಿದೆ. ಈ ವಿಚಾರವಾಗಿ ಬೆಂಗಳೂರಿನ ವೈಟ್ ​ಫೀಲ್ಡ್​​ ಡಿಸಿಪಿ ಶಿವಕುಮಾರ್​ ಗುಣಾರೆ ಸುಳಿವು ನೀಡಿದ್ದು, ವಿವರ ಇಲ್ಲಿದೆ.

Bengaluru techie death: ಟೆಕ್ಕಿ ಅತುಲ್​ ಸುಭಾಷ್​ ಮಗು ಎಲ್ಲಿ? ಬೆಂಗಳೂರು ಪೊಲೀಸರಿಂದ ಮಹತ್ವದ ಸುಳಿವು
ಅತುಲ್​ ಸುಭಾಷ್​​
Follow us
ವಿವೇಕ ಬಿರಾದಾರ
| Updated By: Ganapathi Sharma

Updated on:Dec 16, 2024 | 1:05 PM

ಬೆಂಗಳೂರು, ಡಿಸೆಂಬರ್ 12: ಉತ್ತರ ಪ್ರದೇಶ (Uttar Pradesh) ಮೂಲದ ಟೆಕ್ಕಿ ಅತುಲ್ ಸುಭಾಷ್​ (Atul Subhash) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಾರತ್ತಹಳ್ಳಿ ಪೊಲೀಸರು ಬಂಧಿಸಿ ಬೆಂಗಳೂರಿಗೆ (Bengaluru) ಕರೆತಂದಿದ್ದಾರೆ. ಮೂವರನ್ನೂ ನ್ಯಾಯಂಗ ಬಂಧನದಲ್ಲಿ ಇರಿಸಲಾಗಿದೆ. ಈ ಮಧ್ಯೆ, ಅತುಲ್​ ಮತ್ತು ನಿಖಿತಾ ದಂಪತಿಯ ಪುತ್ರ ಎಲ್ಲಿದ್ದಾರೆ ಎಂಬ ಪ್ರಶ್ನೆ ಉದ್ಭವಿಸಿದ್ದು, ವೈಟ್​ ಫೀಲ್ಡ್​​ ಡಿಸಿಪಿ ಶಿವಕುಮಾರ್​ ಗುಣಾರೆ ಸುಳಿವು ನೀಡಿದ್ದಾರೆ. ಸದ್ಯ ಮಗು ಅತುಲ್​ ಅವರ ​ಸಂಬಂಧಿಕರ ಬಳಿ ಇದೆ ಎಂದಿದ್ದಾರೆ.

ಮಗುವಿನ ಬಗ್ಗೆ ಶೀಘ್ರದಲ್ಲೇ ಹೆಚ್ಚಿನ ವಿವರ: ಡಿಸಿಪಿ ಶಿವಕುಮಾರ್

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಸಿಪಿ ಶಿವಕುಮಾರ್​ ಗುಣಾರೆ, ಸೂಕ್ಷ್ಮ ವಿಚಾರವಾಗಿರುವುದರಿಂದ ಹೆಚ್ಚಿನ ಮಾಹತಿಯನ್ನು ನೀಡಲು ಆಗುವುದಿಲ್ಲ. ಸದ್ಯ ಮಗು ಅತುಲ್​ ಅವರ ​ಸಂಬಂಧಿಕರ ಬಳಿ ಇದೆ ಎಂದಷ್ಟೇ ತಿಳಿಸಬಹುದು. ಮುಂದಿನ ದಿನಗಳಲ್ಲಿ ಮಗುವಿನ ಕುರಿತಾದ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದು ಹೇಳಿದರು.

ಅತುಲ್​ ಪತ್ನಿ ನಿಖಿತಾರನ್ನು ಗುರುಗ್ರಾಮದ ಪಿಜಿಯೊಂದರಲ್ಲಿ ಬಂಧಿಸಲಾಗಿದೆ. ಅತುಲ್​ ನಿಶಾ ಸಿಂಘಾನಿಯಾ ಮತ್ತು ಮತ್ತು ಭಾಮೈದ ಅನುರಾಗ್​ ಪ್ರಯಾಗ್​ರಾಜ್​ನಲ್ಲಿನ ಹೋಟೆಲ್ ಬಳಿ ಬಂಧಿಸಿದ್ದೇವೆ. ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್​ ಆದೇಶ ಮಾಡಿದೆ. ನಿಷ್ಪಕ್ಷಪಾತವಾಗಿ ಪ್ರಕರಣದ ತನಿಖೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅತುಲ್​ ಸುಭಾಷ್​ ಆತ್ಮಹತ್ಯೆ: ಪೊಲೀಸರು ಸೃಷ್ಟಿಸಿದ್ದ ವ್ಯೂಹಕ್ಕೆ ಆರೋಪಿಗಳು ಬಿದ್ದಿದ್ದು ಹೀಗೆ

ಮೊಮ್ಮಗನ ವಿಚಾರವಾಗಿ ಆತಂಕ ವ್ಯಕ್ತಪಡಿಸಿದ್ದ ಅತುಲ್​ ತಂದೆ

ಆರೋಪಿಗಳು ಬಂಧನವಾಗುತ್ತಿದ್ದಂತೆ  ಅತುಲ್ ಸುಭಾಷ್​ ತಂದೆ ಪವನ್ ಕುಮಾರ್ ಮೋದಿ “ನನ್ನ ಮೊಮ್ಮಗ ಬದುಕಿದ್ದಾನಾ ಇಲ್ಲವೋ” ಎಂದು ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದರು.  ನನ್ನ ಮೊಮ್ಮಗ ಎಲ್ಲಿದ್ದಾನೆ, ಹೇಗಿದ್ದಾನೆ, ಬದುಕಿದ್ದಾನಾ ಇಲ್ಲವೋ ಎಂಬುದು ಕೂಡ ಗೊತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದರು.

ನನ್ನ ಮೊಮ್ಮಗನೊಂದಿಗೆ ಇರಬೇಕೆಂದು ನಾನು ಬಯಸುತ್ತೇನೆ. ಕೆಲವೊಮ್ಮೆ ವಿಡಿಯೋ ಕರೆ ಮಾಡಿ ಮಾತನಾಡುತ್ತಿದ್ದೆ. ನಿಖಿತಾ ಕುಟುಂಬವು ನನ್ನ ಮೊಮ್ಮಗನ ಹೆಸರಿನಲ್ಲಿ ನಮ್ಮ ಮೇಲೆ ಹೊಸ ಪ್ರಕರಣವನ್ನು ದಾಖಲಿಸಿದೆ ಎಂದು ಹೇಳಿದ್ದರು.

ಅತುಲ್​ ಪತ್ನಿ ನಿಖಿತಾ ಸಿಂಘಾನಿಯಾ ಅವರನ್ನು ಗುರುಗ್ರಾಮ್‌ದಲ್ಲಿ ಬಂಧಿಸಲಾಗಿದ್ದು, ಆಕೆಯ ತಾಯಿ ಮತ್ತು ಸಹೋದರನನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸುಭಾಷ್‌ನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಕ್ಕಾಗಿ ಬಂಧಿಸಲಾಗಿದೆ. ಸದ್ಯ ಮೂವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಸದ್ಯ ಆರೋಪಿಗಳು ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಸುಭಾಷ್ ಅವರು ಡಿಸೆಂಬರ್ 9 ರಂದು ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Mon, 16 December 24

ಚೌಲಗೆರೆ ಬಳಿ ಹೊಸ ಟೋಲ್​ಗೆ ತೀವ್ರ ವಿರೋಧ, ಹೆದ್ದಾರಿ ತಡೆದು ಪ್ರತಿಭಟನೆ
ಚೌಲಗೆರೆ ಬಳಿ ಹೊಸ ಟೋಲ್​ಗೆ ತೀವ್ರ ವಿರೋಧ, ಹೆದ್ದಾರಿ ತಡೆದು ಪ್ರತಿಭಟನೆ
ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ: ಆರ್ ಅಶೋಕ
ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ: ಆರ್ ಅಶೋಕ
Assembly Session: ಚರ್ಚೆಯಾಗುತ್ತಿವೆ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳು
Assembly Session: ಚರ್ಚೆಯಾಗುತ್ತಿವೆ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳು
ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿ ತೋರ್ಪಡಿಸದ ಸಿಎಂ ಮತ್ತು ಡಿಸಿಎಂ
ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿ ತೋರ್ಪಡಿಸದ ಸಿಎಂ ಮತ್ತು ಡಿಸಿಎಂ
ಮಾಯೋಟ್​ನಲ್ಲಿ ಚಿಡೋ ಚಂಡಮಾರುತದ ಅಬ್ಬರ, ಸಾವಿರಕ್ಕೂ ಅಧಿಕ ಮಂದಿ ಸಾವು
ಮಾಯೋಟ್​ನಲ್ಲಿ ಚಿಡೋ ಚಂಡಮಾರುತದ ಅಬ್ಬರ, ಸಾವಿರಕ್ಕೂ ಅಧಿಕ ಮಂದಿ ಸಾವು
Video: ಪೊಲೀಸ್​ ವಾಹನ ಡಿಕ್ಕಿ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ವ್ಯಕ್ತಿ
Video: ಪೊಲೀಸ್​ ವಾಹನ ಡಿಕ್ಕಿ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ವ್ಯಕ್ತಿ
ಬೆಂಗಳೂರು: ಇಡೀ ಮೊಬೈಲ್​ ಅಂಗಡಿಯನ್ನೇ ದೋಚಿದ ಖದೀಮರು! ವಿಡಿಯೋ ನೋಡಿ
ಬೆಂಗಳೂರು: ಇಡೀ ಮೊಬೈಲ್​ ಅಂಗಡಿಯನ್ನೇ ದೋಚಿದ ಖದೀಮರು! ವಿಡಿಯೋ ನೋಡಿ
ಪಾಸಿಟಿವಿಟಿ ಬಿಟ್ಟು ವೈಲೆಂಟ್ ಆದ ಗೌತಮಿ ಜಾಧವ್; ರಜತ್​ಗೆ ಕೊಟ್ಟರು ಠಕ್ಕರ್
ಪಾಸಿಟಿವಿಟಿ ಬಿಟ್ಟು ವೈಲೆಂಟ್ ಆದ ಗೌತಮಿ ಜಾಧವ್; ರಜತ್​ಗೆ ಕೊಟ್ಟರು ಠಕ್ಕರ್
Daily Devotional: ಚಿಕ್ಕ ಮಕ್ಕಳಿಗೆ ಜಾತಕ ಬರೆಸಬಹುದಾ? ಇಲ್ಲಿದೆ ಉತ್ತರ
Daily Devotional: ಚಿಕ್ಕ ಮಕ್ಕಳಿಗೆ ಜಾತಕ ಬರೆಸಬಹುದಾ? ಇಲ್ಲಿದೆ ಉತ್ತರ
ವಿದೇಶದಲ್ಲಿ ವ್ಯಾಪಾರ ಮಾಡುವ ಈ ರಾಶಿಯವರು ಇಂದು ಸಾಕಷ್ಟು ಲಾಭ ಗಳಿಸುತ್ತಾರೆ
ವಿದೇಶದಲ್ಲಿ ವ್ಯಾಪಾರ ಮಾಡುವ ಈ ರಾಶಿಯವರು ಇಂದು ಸಾಕಷ್ಟು ಲಾಭ ಗಳಿಸುತ್ತಾರೆ