ಆನೇಕಲ್: ಸ್ಥಳ ಮಹಜರಿಗೆ ಕರೆದೊಯ್ಯುವಾಗ ತಪ್ಪಿಸಿಕೊಳ್ಳಲು ಯತ್ನ, ಆರೋಪಿ ಕಾಲಿಗೆ ಗುಂಡೇಟು
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮೆಣಸಿಗನಹಳ್ಳಿ ಸಮೀಪ ಅಮಾಯಕ ಯುವಕನನ್ನ ಅಡ್ಡಗಟ್ಟಿ ಚಾಕುವಿನಿಂದ ಇರಿದು ಜುಲೈ 31ರಂದು ಹತ್ಯೆ ಮಾಡಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯುವಾಗ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟು ತಿಂದ ಘಟನೆ ನಡೆದಿದೆ.
ಆನೇಕಲ್, ಆ.6: ಕೊಲೆ ಆರೋಪಿಯನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಆತನ ಕಾಲಿಗೆ ಪೊಲೀಸರು ಗುಂಡೇಟು ಹೊಡೆದ ಘಟನೆ ಆನೇಕಲ್(Anekal) ತಾಲೂಕಿನ ಹೊಸೂರು ರಸ್ತೆಯಲ್ಲಿ ನಡೆದಿದೆ. ಆಕಾಶ್(19) ಕಾಲಿಗೆ ಗುಂಡೇಟು ತಿಂದ ಆರೋಪಿ. ಜುಲೈ 31ನೇ ತಾರೀಖಿನಂದು ಹೇಮಂತ್ ಎಂಬ ಯುವಕನನ್ನ ಕೊಲೆ ಮಾಡಿದ್ದ ಆರೋಪದ ಮೇಲೆ ಇಂದು(ಆ.6) ಬೆಳಗ್ಗೆ ಸ್ಥಳ ಮಹಜರಿಗೆ ಹೋಗುವಾಗ ಪೋಲೀಸ್ ಸಿಬ್ಬಂದಿ ಮಣಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಆನೇಕಲ್ ಸಬ್ ಇನ್ಸ್‌ಪೆಕ್ಟರ್ ಪ್ರದೀಪ್ ಅವರು ಆಕಾಶ್ ಕಾಲಿಗೆ ಫೈರಿಂಗ್ ಮಾಡಿದ್ದಾರೆ.
ಜುಲೈ 31ರಂದು ಚಾಕುವಿನಿಂದ ಇರಿದು ಯುವಕನ ಹತ್ಯೆ
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮೆಣಸಿಗನಹಳ್ಳಿ ಸಮೀಪ ಅಮಾಯಕ ಯುವಕನನ್ನ ಅಡ್ಡಗಟ್ಟಿ ಚಾಕುವಿನಿಂದ ಇರಿದು ಜುಲೈ 31ರಂದು ಹತ್ಯೆ ಮಾಡಲಾಗಿತ್ತು. ಹೌದು, ಹೇಮಂತ್(24) ಎಂಬ ಯುವಕನಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದರು. ಬಳಿಕ ರಕ್ತದ ಮಡುವಿನಲ್ಲಿದ್ದ ಹೇಮಂತ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಹೇಮಂತ್ ಮೃತಪಟ್ಟಿದ್ದ. ಇದೀಗ ಯುವಕನನ್ನು ಹತ್ಯೆ ಮಾಡಿದ್ದ ಹಂತಕರನ್ನು ಕರೆದುಕೊಂಡು ಸ್ಥಳ ಮಹಜರಿಗೆ ಹೋಗುವಾಗ ಈ ಘಟನೆ ನಡೆದಿದೆ.
ಬಿಸಿ ಊಟದ ಅನ್ನಕ್ಕೆ ಕನ್ನ ಹಾಕಿದ ಕಳ್ಳರ ಗ್ಯಾಂಗ್; ಕಳ್ಳತನದ ದೃಶ್ಯ ಶಾಲೆಯ ಸಿಸಿ ಕ್ಯಾಮರಾದಲ್ಲಿ ಸೆರೆ
ಬೀದರ್: ಹುಲಸೂರು ತಾಲೂಕಿನ ಬೇಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ಅಕ್ಕಿ ಕಳ್ಳತನವಾಗಿದೆ. ಹೌದು, ಅಕ್ಕಿಯ ಎರಡು ಚೀಲವನ್ನು ಕಳ್ಳರು ಕದ್ದುಕೊಂಡು ಹೋಗಿದ್ದಾರೆ. ಇನ್ನು ಖದೀಮರ ಕೈ ಚಳಕದ ದೃಶ್ಯ ಶಾಲೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕುರಿತು ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ