ಆನೇಕಲ್: ಸ್ಥಳ ಮಹಜರಿಗೆ ಕರೆದೊಯ್ಯುವಾಗ ತಪ್ಪಿಸಿಕೊಳ್ಳಲು ಯತ್ನ, ಆರೋಪಿ ಕಾಲಿಗೆ ಗುಂಡೇಟು

ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ ತಾಲೂಕಿನ ಮೆಣಸಿಗನಹಳ್ಳಿ ಸಮೀಪ ಅಮಾಯಕ ಯುವಕನನ್ನ ಅಡ್ಡಗಟ್ಟಿ ಚಾಕುವಿನಿಂದ ಇರಿದು ಜುಲೈ 31ರಂದು ಹತ್ಯೆ ಮಾಡಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದೊಯ್ಯುವಾಗ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟು ತಿಂದ ಘಟನೆ ನಡೆದಿದೆ.

ಆನೇಕಲ್: ಸ್ಥಳ ಮಹಜರಿಗೆ ಕರೆದೊಯ್ಯುವಾಗ ತಪ್ಪಿಸಿಕೊಳ್ಳಲು ಯತ್ನ, ಆರೋಪಿ ಕಾಲಿಗೆ ಗುಂಡೇಟು
ಗುಂಡೇಟು ತಿಂದ ಆರೋಪಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By: ಕಿರಣ್ ಹನುಮಂತ್​ ಮಾದಾರ್

Updated on: Aug 06, 2023 | 11:06 AM

ಆನೇಕಲ್, ಆ.6: ಕೊಲೆ ಆರೋಪಿಯನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಆತನ ಕಾಲಿಗೆ ಪೊಲೀಸರು ಗುಂಡೇಟು ಹೊಡೆದ ಘಟನೆ ಆನೇಕಲ್(Anekal) ತಾಲೂಕಿನ ಹೊಸೂರು ರಸ್ತೆಯಲ್ಲಿ ನಡೆದಿದೆ. ಆಕಾಶ್(19) ಕಾಲಿಗೆ ಗುಂಡೇಟು ತಿಂದ ಆರೋಪಿ. ಜುಲೈ 31ನೇ ತಾರೀಖಿನಂದು ಹೇಮಂತ್ ಎಂಬ ಯುವಕನನ್ನ ಕೊಲೆ ಮಾಡಿದ್ದ ಆರೋಪದ ಮೇಲೆ ಇಂದು(ಆ.6) ಬೆಳಗ್ಗೆ ಸ್ಥಳ ಮಹಜರಿಗೆ ಹೋಗುವಾಗ ಪೋಲೀಸ್ ಸಿಬ್ಬಂದಿ ಮಣಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಆನೇಕಲ್ ಸಬ್ ಇನ್ಸ್‌ಪೆಕ್ಟರ್ ಪ್ರದೀಪ್ ಅವರು ಆಕಾಶ್​ ಕಾಲಿಗೆ ಫೈರಿಂಗ್ ಮಾಡಿದ್ದಾರೆ.

ಜುಲೈ 31ರಂದು ಚಾಕುವಿನಿಂದ ಇರಿದು ಯುವಕನ ಹತ್ಯೆ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ ತಾಲೂಕಿನ ಮೆಣಸಿಗನಹಳ್ಳಿ ಸಮೀಪ ಅಮಾಯಕ ಯುವಕನನ್ನ ಅಡ್ಡಗಟ್ಟಿ ಚಾಕುವಿನಿಂದ ಇರಿದು ಜುಲೈ 31ರಂದು ಹತ್ಯೆ ಮಾಡಲಾಗಿತ್ತು. ಹೌದು, ಹೇಮಂತ್(24) ಎಂಬ ಯುವಕನಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದರು. ಬಳಿಕ ರಕ್ತದ ಮಡುವಿನಲ್ಲಿದ್ದ ಹೇಮಂತ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಹೇಮಂತ್​ ಮೃತಪಟ್ಟಿದ್ದ. ಇದೀಗ ಯುವಕನನ್ನು ಹತ್ಯೆ ಮಾಡಿದ್ದ ಹಂತಕರನ್ನು ಕರೆದುಕೊಂಡು ಸ್ಥಳ ಮಹಜರಿಗೆ ಹೋಗುವಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ:ನಿಲ್ಲದ ಪಾದರಾಯನಪುರ ಗಲಭೆಯ ಕಿಂಗ್​​ಪಿನ್​​ ಪುಂಡಾಟ, ಪೊಲೀಸರಿಗೆ ತಲೆನೋವಾಗಿದ್ದ ರೌಡಿಶೀಟರ್ ಪರ್ವೇಜ್ ಕಾಲಿಗೆ ಬಿತ್ತು ಗುಂಡೇಟು

ಬಿಸಿ ಊಟದ ಅನ್ನಕ್ಕೆ ಕನ್ನ ಹಾಕಿದ ಕಳ್ಳರ ಗ್ಯಾಂಗ್; ಕಳ್ಳತನದ ದೃಶ್ಯ ಶಾಲೆಯ ಸಿಸಿ ಕ್ಯಾಮರಾದಲ್ಲಿ ಸೆರೆ

ಬೀದರ್​​: ಹುಲಸೂರು ತಾಲೂಕಿನ ಬೇಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ಅಕ್ಕಿ ಕಳ್ಳತನವಾಗಿದೆ. ಹೌದು, ಅಕ್ಕಿಯ ಎರಡು ಚೀಲವನ್ನು ಕಳ್ಳರು ಕದ್ದುಕೊಂಡು ಹೋಗಿದ್ದಾರೆ. ಇನ್ನು ಖದೀಮರ ಕೈ ಚಳಕದ ದೃಶ್ಯ ಶಾಲೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಕುರಿತು ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Loading...
Unable to load recommendations.
Follow Us